ಬೆಳ್ತಂಗಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹೇಳಿಕೆ ನೀಡಿರುವ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಐಪಿಸಿ ಸೆಕ್ಷನ್ 153, 153A, 505 ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಶಾಸಕ ಹರೀಶ್ ಪೂಂಜಾ ಮೇ 22ರಂದು ಬೆಳ್ತಂಗಡಿಯ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಂಗಣದಲ್ಲಿ ಬಿಜೆಪಿ ವತಿಯಿಂದ ನಡೆದ ಕಾರ್ಯಕ್ರಮದ ಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಹಿಂದುಗಳ ಕೊಲೆ ಮಾಡಿದವರೆಂದು ಅವರ ಪರವಾಗಿ ಸತ್ಯಜಿತ್ ಸುರತ್ಕಲ್ ಮತಯಾಚನೆ ಮಾಡಿದರು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಈ ಬಗ್ಗೆ ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನಮಿತಾ ಕೆ.ಪೂಜಾರಿ ಅವರ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಶಾಸಕ ಹರೀಶ್ ಪೂಂಜಾ ವಿರುದ್ಧ ಕೋಮು ಪ್ರಚೋದಕ ಹಾಗೂ ದ್ವೇಷ ಉಂಟು ಮಾಡುವಂತಹ ಭಾಷಣ ಮಾಡಿದ್ದ ಬಗ್ಗೆ ಹಾಗೂ ಕಾರ್ಯಕ್ರಮ ಆಯೋಜಿಸಿದ್ದ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷೆ ನಮಿತಾ ಕೆ. ಪೂಜಾರಿ ಉಪಾಧ್ಯಕ್ಷೆ ಮಮತಾ, ಪ್ರಧಾನ ಕಾರ್ಯದರ್ಶಿ ಸುಮಂಗಳ ನಾಯ್ಕ್ , ಕಾರ್ಯದರ್ಶಿ ಸಿಂಧೂ ಡಿನ್ನಿಸ್, ರೇವತಿ ಉಜಿರೆ, ಸದಸ್ಯರಾದ ಕಸ್ತೂರಿ ಪೂಜಾರಿ, ಕುಸುಮಾ ಮಾಚಾರ್ ಇದ್ದರು.
Discover more from Coastal Times Kannada
Subscribe to get the latest posts sent to your email.
Discussion about this post