• About us
  • Contact us
  • Disclaimer
Friday, February 27, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು ನಗರದಲ್ಲಿ ಮಲ್ಟಿ ಲೆವಲ್ ಪಾರ್ಕಿಂಗ್, ಸ್ಪೋರ್ಟ್ಸ್‌ ಕಾಂಪ್ಲೆಕ್ಸ್‌ – ವೇದವ್ಯಾಸ ಕಾಮತ್

Coastal Times by Coastal Times
May 25, 2023
in ಕರಾವಳಿ
ಮಂಗಳೂರು ನಗರದಲ್ಲಿ ಮಲ್ಟಿ ಲೆವಲ್ ಪಾರ್ಕಿಂಗ್, ಸ್ಪೋರ್ಟ್ಸ್‌ ಕಾಂಪ್ಲೆಕ್ಸ್‌ – ವೇದವ್ಯಾಸ ಕಾಮತ್
75
VIEWS
WhatsappTelegramShare on FacebookShare on Twitter

ಮಂಗಳೂರು: ‘ಮಂಗಳೂರು ನಗರದಲ್ಲಿ ಮಲ್ಟಿ ಲೆವಲ್ ಪಾರ್ಕಿಂಗ್, ಸ್ಪೋರ್ಟ್ಸ್‌ ಕಾಂಪ್ಲೆಕ್ಸ್‌, ರಸ್ತೆ ನಿರ್ಮಾಣ ಮೊದಲಾದ ಹಿಂದಿನ ಅವಧಿಯಲ್ಲಿ ಕೈಗೆತ್ತಿಕೊಂಡಿರುವ ಹಲವಾರು ಮಹತ್ವದ ಕಾಮಗಾರಿಗಳನ್ನು ಪೂರ್ಣಗೊಳಿಸುವುದು ನನ್ನ ಮೊದಲ ಆದ್ಯತೆಯಾಗಿದೆ’ ಎಂಬುದು ಮಂಗಳೂರು ನಗರ ದಕ್ಷಿಣ ಕ್ಷೇತ್ರದಿಂದ ಎರಡನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಡಿ. ವೇದವ್ಯಾಸ ಕಾಮತ್ ಅವರ ಅಭಿಪ್ರಾಯ.

‘ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ಹಲವಾರು ಯೋಜನೆಗಳನ್ನು ಕ್ಷೇತ್ರಕ್ಕೆ ತಂದಿದ್ದೆ. ಅವುಗಳಲ್ಲಿ ಕೆಲವು ಪೂರ್ಣಗೊಂಡಿದ್ದು, ಇನ್ನು ಕೆಲವು ಅರ್ಧದಷ್ಟಾಗಿವೆ. ಇವುಗಳನ್ನು ಪೂರ್ಣಗೊಳಿಸುವ ದೊಡ್ಡ ಜವಾಬ್ದಾರಿ ಇದೆ. ಎರಡು ಐಟಿಐ ಕಾಲೇಜುಗಳು, ಎರಡು ಪಿಯು ಕಾಲೇಜುಗಳ ಕಟ್ಟಡ ನಿರ್ಮಾಣ ಸೇರಿದಂತೆ ಮೂಲ ಸೌಕರ್ಯ ಅಭಿವೃದ್ಧಿ ಒದಗಿಸಬೇಕಾಗಿದೆ. ಶಕ್ತಿನಗರದಲ್ಲಿ ಬಡವರ ಮನೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಇದನ್ನು ಪೂರ್ಣಗೊಳಿಸಿ, ಬಡವರಿಗೆ ವಿತರಿಸುವ ಹೊಣೆಗಾರಿಕೆ ಇದೆ’ ಎಂದು ಪ್ರಸ್ತುತ ನಡೆಯುತ್ತಿರುವ ಕಾಮಗಾರಿಗಳ ಬಗ್ಗೆ ವಿವರ ನೀಡಿದರು.

‘ಮಂಗಳೂರು ನಗರ ಪ್ರದೇಶದಲ್ಲಿ ಜಾಗದ ಕೊರತೆ ಇದೆ. ಯಾವುದೇ ಯೋಜನೆ ಅನುಷ್ಠಾನಗೊಳಿಸುವ ಮುನ್ನ ಈ ಸಮಸ್ಯೆ ಎದುರಾಗುತ್ತದೆ. ಮಹಾನಗರ ಪಾಲಿಕೆಯಲ್ಲಿ ಟಿಡಿಆರ್ ಕೊಟ್ಟು ಜಾಗ ಪಡೆದುಕೊಳ್ಳಬೇಕಾಗಿದೆ. ಈ ವರ್ಷ ಬೇಸಿಗೆಯಲ್ಲಿ ನಗರಕ್ಕೆ ನೀರಿನ ಸಮಸ್ಯೆ ಎದುರಾಗಿದ್ದು, ಭವಿಷ್ಯದಲ್ಲಿ ಇಂತಹ ಸಮಸ್ಯೆ ಎದುರಾಗದಂತೆ, ತುಂಬೆ ಅಣೆಕಟ್ಟೆಯ ನೀರು ಸಂಗ್ರಹ ಮಟ್ಟವನ್ನು 6ರಿಂದ 7 ಮೀಟರ್ ಎತ್ತರಕ್ಕೆ ಏರಿಸಬೇಕಾಗಿದೆ. ನಗರದ ಜನರಿಗೆ ಅನುಕೂಲವಾಗುವ ಇಂತಹ ಯೋಜನೆ ಅನುಷ್ಠಾನಕ್ಕೆ ಸರ್ಕಾರದ ಸ್ಪಂದನೆ ಅಗತ್ಯವಾಗಿ ಬೇಕು. ಈ ಹಿಂದೆ ಮಂಜೂರು ಆಗಿರುವ ಎಲ್ಲ ಕಾಮಗಾರಿಗಳ ಅನುದಾನ ತಡೆಹಿಡಿಯುವಂತೆ ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೆಸ್‌ ಸರ್ಕಾರ ಆದೇಶಿಸಿದೆ. ಸರ್ಕಾರ ತಾರತಮ್ಯ ಇಲ್ಲದೆ ಮುಂದಿನ ದಿನಗಳಲ್ಲಿ ಅನುದಾನ ಬಿಡುಗಡೆ ಮಾಡಬೇಕು’ ಎಂಬುದು ಅವರ ಆಗ್ರಹ.

ಮಳೆಗಾಲದ ಕೃತಕ ನೆರೆ ನಿವಾರಿಸುವ ನಿಟ್ಟಿನಲ್ಲಿ ತಡೆಗೋಡೆ ನಿರ್ಮಾಣ ಮಾಡಲಾಗಿದೆ. ಈ ಬಾರಿ ಮಳೆಗಾಲದಲ್ಲಿ ಈ ಬಗ್ಗೆ ಇನ್ನೊಮ್ಮೆ ಅಧ್ಯಯನ ನಡೆಸಿ, ಮುಂದಿನ ಯೋಜನೆ ರೂಪಿಸಲಾಗುತ್ತದೆ. ಕರಾವಳಿಯಲ್ಲಿ ತುಳು ಹಾಗೂ ಇತರ ಭಾಷೆಗಳ ಸಿನಿಮಾಗಳು ನಿರ್ಮಾಣಗೊಳ್ಳುತ್ತವೆ. ಆದರೆ, ಇಲ್ಲಿ ಫಿಲ್ಮ್ ಸಿಟಿ ಕೊರತೆ ಇದೆ. ಇದಕ್ಕೆ 10 ಎಕರೆ ಜಾಗ ಆಯ್ಕೆ ಮಾಡಿದ್ದು, ಮಾತುಕತೆ ನಡೆಸಲಾಗಿದೆ ಎಂದು ಮುಂದಿನ ಯೋಜನೆಯ ವಿವರ ನೀಡಿದರು.

ಐಟಿ ಪಾರ್ಕ್ ಕನಸು : ಬೆಳೆಯುತ್ತಿರುವ ವಾಣಿಜ್ಯ ನಗರದಲ್ಲಿ ಯುವಜನರಿಗೆ ಸ್ಥಳೀಯವಾಗಿ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ನಗರದಲ್ಲಿ ಐಟಿ ಪಾರ್ಕ್ ನಿರ್ಮಿಸುವುದು ನನ್ನ ಕನಸು. ಇದಕ್ಕೆ ಜಾಗ ಗುರುತಿಸಬೇಕಾಗಿದೆ. ಇದಕ್ಕೆ ರೂ. 70 ಕೋಟಿ ಅಗತ್ಯವಿದ್ದು ನಿರಂತರ ಪ್ರಯತ್ನದಿಂದ ಹಿಂದಿನ ಸರ್ಕಾರದಲ್ಲಿ ರೂ. 30 ಕೋಟಿ ಮಂಜೂರು ಮಾಡಿಸುವಲ್ಲಿ ಸಫಲನಾಗಿದ್ದೆ. ಕೋವಿಡ್ ಕಾರಣಕ್ಕೆ ಪೂರ್ಣ ಪ್ರಮಾಣದ ಅನುದಾನ ತರಲು ಸಾಧ್ಯವಾಗಿಲ್ಲ. ಹೀಗಾಗಿ ಯೋಜನೆ ಬಾಕಿಯಾಯಿತು ಎಂದು ವೇದವ್ಯಾಸ ಕಾಮತ್ ತಿಳಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಲಂಡನ್ ನಲ್ಲಿ 140 ಕೋಟಿ ರೂ.ಗೆ ಹರಾಜಾದ ಟಿಪ್ಪು ಸುಲ್ತಾನ್ ಖಡ್ಗ

Next Post

ಧರ್ಮಾಧಾರಿತ ರಾಜಕೀಯ ಹತ್ಯೆ ಮರು ತನಿಖೆಗೆ ಎಸ್‌ಐಟಿ ರಚಿಸಿ: ರಮಾನಾಥ ರೈ ಆಗ್ರಹ

Related Posts

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ
ಕರಾವಳಿ

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ

February 25, 2026
32
‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ
ಕರಾವಳಿ

‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

February 24, 2026
29
Next Post
ಧರ್ಮಾಧಾರಿತ ರಾಜಕೀಯ ಹತ್ಯೆ ಮರು ತನಿಖೆಗೆ ಎಸ್‌ಐಟಿ ರಚಿಸಿ: ರಮಾನಾಥ ರೈ ಆಗ್ರಹ

ಧರ್ಮಾಧಾರಿತ ರಾಜಕೀಯ ಹತ್ಯೆ ಮರು ತನಿಖೆಗೆ ಎಸ್‌ಐಟಿ ರಚಿಸಿ: ರಮಾನಾಥ ರೈ ಆಗ್ರಹ

Discussion about this post

Recent News

ಅಮೆರಿಕನ್ ಕಮೊಡಿಟೀಸ್‌ ಹೆಸರಿನಲ್ಲಿ ಹೂಡಿಕೆ ; ಮಂಗಳೂರಿನ ಹಿರಿಯ ವ್ಯಕ್ತಿಗೆ 1.77 ಕೋಟಿ ರೂ. ಆನ್‌ಲೈನ್ ವಂಚನೆ

ಅಮೆರಿಕನ್ ಕಮೊಡಿಟೀಸ್‌ ಹೆಸರಿನಲ್ಲಿ ಹೂಡಿಕೆ ; ಮಂಗಳೂರಿನ ಹಿರಿಯ ವ್ಯಕ್ತಿಗೆ 1.77 ಕೋಟಿ ರೂ. ಆನ್‌ಲೈನ್ ವಂಚನೆ

February 27, 2026
1
ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

February 26, 2026
62
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಅಮೆರಿಕನ್ ಕಮೊಡಿಟೀಸ್‌ ಹೆಸರಿನಲ್ಲಿ ಹೂಡಿಕೆ ; ಮಂಗಳೂರಿನ ಹಿರಿಯ ವ್ಯಕ್ತಿಗೆ 1.77 ಕೋಟಿ ರೂ. ಆನ್‌ಲೈನ್ ವಂಚನೆ

ಅಮೆರಿಕನ್ ಕಮೊಡಿಟೀಸ್‌ ಹೆಸರಿನಲ್ಲಿ ಹೂಡಿಕೆ ; ಮಂಗಳೂರಿನ ಹಿರಿಯ ವ್ಯಕ್ತಿಗೆ 1.77 ಕೋಟಿ ರೂ. ಆನ್‌ಲೈನ್ ವಂಚನೆ

February 27, 2026
ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

February 26, 2026
ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

February 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d