• About us
  • Contact us
  • Disclaimer
Thursday, September 10, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬೆಂಗಳೂರು: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಯೋರ್ವರನ್ನು ಬೆದರಿಸಿ ಬರೋಬ್ಬರಿ 24 ಕೋಟಿ ರೂಪಾಯಿ ಸುಲಿಗೆ ಮಾಡಿದ ಐವರ ಬಂಧನ

Coastal Times by Coastal Times
May 25, 2026
in ಕ್ರೈಮ್ ನ್ಯೂಸ್
ಬೆಂಗಳೂರು: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಯೋರ್ವರನ್ನು ಬೆದರಿಸಿ ಬರೋಬ್ಬರಿ 24 ಕೋಟಿ ರೂಪಾಯಿ ಸುಲಿಗೆ ಮಾಡಿದ ಐವರ ಬಂಧನ
61
VIEWS
WhatsappTelegramShare on FacebookShare on Twitter

ಬೆಂಗಳೂರು: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಯೋರ್ವರನ್ನು ಬೆದರಿಸಿ ಬರೋಬ್ಬರಿ 24 ಕೋಟಿ ರೂಪಾಯಿ ಸುಲಿಗೆ ಮಾಡಿದ್ದ ಅಂತಾರಾಜ್ಯ ಖದೀಮರನ್ನು ಸಿಸಿಬಿ ಸೈಬರ್​ ಕ್ರೈಮ್​ ಪೊಲೀಸರು ಬಂಧಿಸಿದ್ದಾರೆ.

ಬ್ಯಾಂಕ್​ ಮ್ಯಾನೇಜರ್​ವೊಬ್ಬರ ಸಮಯಪ್ರಜ್ಞೆಯಿಂದಾಗಿ ವೃದ್ಧೆ ಮತ್ತಷ್ಟು ಹಣ ಕಳೆದುಕೊಳ್ಳುವುದು ತಪ್ಪಿದ್ದಲ್ಲದೆ, ಈ ಬೃಹತ್ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ.​ ಶಿವಾಜಿನಗರದ ನಿವಾಸಿಯಾದ ಲಕ್ಷ್ಮೀ ಎಂಬ ವೃದ್ಧೆ ಇತ್ತೀಚೆಗೆ ಪ್ರಾಪರ್ಟಿ ಮಾರಾಟದಿಂದ ಕೋಟ್ಯಂತರ ರೂಪಾಯಿ ಹಣ ಗಳಿಸಿದ್ದರು. ಅವರ ಬ್ಯಾಂಕ್ ವಹಿವಾಟಿನ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದ ಸೈಬರ್ ವಂಚಕರು, ಅಕ್ರಮ ಹಣ ವರ್ಗಾವಣೆ ಆರೋಪದಡಿ ನಿಮ್ಮನ್ನು ಡಿಜಿಟಲ್ ಅರೆಸ್ಟ್ ಮಾಡಲಾಗಿದೆ ಎಂದು ಹೆದರಿಸಿದ್ದರು. ಕಾನೂನು ಕ್ರಮದ ಭಯ ಬಿದ್ದಿದ್ದ ಲಕ್ಷ್ಮೀ ಕಳೆದ ಜನವರಿಯಿಂದ ಮೇ ತಿಂಗಳವರೆಗೆ ಹಂತಹಂತವಾಗಿ ಒಟ್ಟು 24 ಕೋಟಿ ರೂಪಾಯಿಯನ್ನು ಖದೀಮರಿಗೆ ವರ್ಗಾಯಿಸಿದ್ದರು.

​ಇಷ್ಟಾದರೂ ವಂಚಕರ ಹಣದ ದಾಹ ತೀರಿರಲಿಲ್ಲ. ಮತ್ತಷ್ಟು ಹಣಕ್ಕಾಗಿ ಬೇಡಿಕೆ ಇಟ್ಟಾಗ, ವೃದ್ಧೆ ಲಕ್ಷ್ಮೀ ಅವರು ಮನೆಯಲ್ಲಿದ್ದ 1 ಕೆಜಿ 300 ಗ್ರಾಂ ಚಿನ್ನಾಭರಣಗಳನ್ನು ಅಡವಿಟ್ಟು ಹಣ ಪಡೆಯಲು ಬ್ಯಾಂಕ್‌ಗೆ ತೆರಳಿದ್ದರು. ವೃದ್ಧೆಯ ವರ್ತನೆ ಹಾಗೂ ಪದೆ ಪದೇ ದೊಡ್ಡ ಮೊತ್ತದ ವ್ಯವಹಾರ ನಡೆಸುತ್ತಿರುವುದನ್ನು ಗಮನಿಸಿ ಅನುಮಾನಗೊಂಡ ಬ್ಯಾಂಕ್ ಶಾಖೆಯ ಮ್ಯಾನೇಜರ್ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದರು.

ವಿಷಯ ತಿಳಿಯುತ್ತಿದ್ದಂತೆ ಬ್ಯಾಂಕ್‌ಗೆ ಧಾವಿಸಿದ ಸಿಸಿಬಿ ಸೈಬರ್ ಪೊಲೀಸರು ಲಕ್ಷ್ಮೀ ಅವರನ್ನು ವಿಚಾರಣೆಗೊಳಪಡಿಸಿದರು. ಆರಂಭದಲ್ಲಿ ತೀವ್ರ ಭಯದಿಂದ ಏನನ್ನೂ ಬಾಯ್ಬಿಡದ ವೃದ್ಧೆಗೆ ಧೈರ್ಯ ತುಂಬಿ, ಪೊಲೀಸರು ತಮ್ಮದೇ ಶೈಲಿಯಲ್ಲಿ ಪ್ರಶ್ನಿಸಿದಾಗ ‘ಡಿಜಿಟಲ್ ಅರೆಸ್ಟ್’ ನ ಅಸಲಿ ಸತ್ಯ ಹೊರಬಂದಿದೆ. ಕೂಡಲೇ ಸಂತ್ರಸ್ತೆಯಿಂದ ದೂರು ದಾಖಲಿಸಿಕೊಂಡ ಪೊಲೀಸರು, ವಿದೇಶದಲ್ಲಿರುವ ಅವರ ಮಕ್ಕಳಿಗೆ ವಿಷಯ ಮುಟ್ಟಿಸಿದ್ದರು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆಗಿಳಿದ ಖಾಕಿ ಪಡೆ, ಮುಂಬೈ, ಅಲಹಾಬಾದ್ ಮತ್ತು ದೆಹಲಿ ಮೂಲದ ಆರೋಪಿಗಳ ಬೆನ್ನುಬಿದ್ದು ಗೌರವ್ ಕುಮಾರ್, ಓಂ ಪ್ರಕಾಶ್ ರಾಜ್‌ಪುತ್ ಸೇರಿದಂತೆ ಐವರು ಖದೀಮರನ್ನು ಹೆಡೆಮುರಿ ಕಟ್ಟಿದ್ದಾರೆ. ವಂಚಕರು ಸುಲಿಗೆ ಮಾಡಿದ್ದ ಹಣವನ್ನು ಒಟ್ಟು 22 ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿದ್ದು, ಸದ್ಯಕ್ಕೆ 60 ಲಕ್ಷ ರೂಪಾಯಿ ಹಣವಿದ್ದ ಖಾತೆಯನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಉಳಿದ ಹಣ ಜಪ್ತಿಗಾಗಿ ತನಿಖೆ ಮುಂದುವರೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಪ್ರಥಮ ಬಾರಿ ಏಕಕಾಲಕ್ಕೆ ಪಾಲೆಮಾರ್ ಸಮೂಹದಿಂದ ನಾಲ್ಕು ಅತ್ಯಾಧುನಿಕ ಸಭಾಭವನಗಳು ಲೋಕಾರ್ಪಣೆ

Next Post

ಅಮ್ಮ ಮಂಗಳೂರಿನಲ್ಲಿ ಮೇ 28 ಮತ್ತು29 ರಂದು ಜೀವನೋಲ್ಲಾಸದ ಸಂಭ್ರಮಾಚರಣೆ.

Related Posts

ಮುಂಬೈ ಸರಣಿ ಬಾಂಬ್​ ಸ್ಫೋಟದ ಅಪರಾಧಿ ಅಬು ಸಲೇಮ್ ಬಿಡುಗಡೆ ಕೋರಿ ಸಲ್ಲಿಸಿದ್ದ ಅರ್ಜಿ ಸುಪ್ರೀಂನಲ್ಲಿ ವಜಾ
ಕ್ರೈಮ್ ನ್ಯೂಸ್

ಮುಂಬೈ ಸರಣಿ ಬಾಂಬ್​ ಸ್ಫೋಟದ ಅಪರಾಧಿ ಅಬು ಸಲೇಮ್ ಬಿಡುಗಡೆ ಕೋರಿ ಸಲ್ಲಿಸಿದ್ದ ಅರ್ಜಿ ಸುಪ್ರೀಂನಲ್ಲಿ ವಜಾ

September 10, 2026
22
ಸುಳ್ಯ: ಸರ್ಕಾರಿ ಲೇಡೀಸ್ ಹಾಸ್ಟೆಲ್‌ಗೆ ನುಗ್ಗಿ ವಿದ್ಯಾರ್ಥಿನಿಯರ ಉಡುಪು ಕಳ್ಳತನ ಮಾಡ್ತಿದ್ದ ವ್ಯಕ್ತಿ ಬಂಧನ
ಕ್ರೈಮ್ ನ್ಯೂಸ್

ಸುಳ್ಯ: ಸರ್ಕಾರಿ ಲೇಡೀಸ್ ಹಾಸ್ಟೆಲ್‌ಗೆ ನುಗ್ಗಿ ವಿದ್ಯಾರ್ಥಿನಿಯರ ಉಡುಪು ಕಳ್ಳತನ ಮಾಡ್ತಿದ್ದ ವ್ಯಕ್ತಿ ಬಂಧನ

September 9, 2026
29
Next Post
ಅಮ್ಮ ಮಂಗಳೂರಿನಲ್ಲಿ ಮೇ 28 ಮತ್ತು29 ರಂದು ಜೀವನೋಲ್ಲಾಸದ ಸಂಭ್ರಮಾಚರಣೆ.

ಅಮ್ಮ ಮಂಗಳೂರಿನಲ್ಲಿ ಮೇ 28 ಮತ್ತು29 ರಂದು ಜೀವನೋಲ್ಲಾಸದ ಸಂಭ್ರಮಾಚರಣೆ.

Discussion about this post

Recent News

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ನೇಮಕ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ನೇಮಕ

September 10, 2026
9
ಮುಂಬೈ ಸರಣಿ ಬಾಂಬ್​ ಸ್ಫೋಟದ ಅಪರಾಧಿ ಅಬು ಸಲೇಮ್ ಬಿಡುಗಡೆ ಕೋರಿ ಸಲ್ಲಿಸಿದ್ದ ಅರ್ಜಿ ಸುಪ್ರೀಂನಲ್ಲಿ ವಜಾ

ಮುಂಬೈ ಸರಣಿ ಬಾಂಬ್​ ಸ್ಫೋಟದ ಅಪರಾಧಿ ಅಬು ಸಲೇಮ್ ಬಿಡುಗಡೆ ಕೋರಿ ಸಲ್ಲಿಸಿದ್ದ ಅರ್ಜಿ ಸುಪ್ರೀಂನಲ್ಲಿ ವಜಾ

September 10, 2026
22
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ನೇಮಕ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ನೇಮಕ

September 10, 2026
ಮುಂಬೈ ಸರಣಿ ಬಾಂಬ್​ ಸ್ಫೋಟದ ಅಪರಾಧಿ ಅಬು ಸಲೇಮ್ ಬಿಡುಗಡೆ ಕೋರಿ ಸಲ್ಲಿಸಿದ್ದ ಅರ್ಜಿ ಸುಪ್ರೀಂನಲ್ಲಿ ವಜಾ

ಮುಂಬೈ ಸರಣಿ ಬಾಂಬ್​ ಸ್ಫೋಟದ ಅಪರಾಧಿ ಅಬು ಸಲೇಮ್ ಬಿಡುಗಡೆ ಕೋರಿ ಸಲ್ಲಿಸಿದ್ದ ಅರ್ಜಿ ಸುಪ್ರೀಂನಲ್ಲಿ ವಜಾ

September 10, 2026
ರಾಷ್ಟ್ರೀಯ ಹೆದ್ದಾರಿ-75 ರ ನೆಲ್ಯಾಡಿ ಸಂತ ಜಾರ್ಜ್ ಹಾಗೂ ಬೆಥನಿ ವಿದ್ಯಾಸಂಸ್ಥೆಗಳ ಬಳಿ- ಯು-ಟರ್ನ್ ನೀಡಲು ಆಗ್ರಹಿಸಿ ನೆಲ್ಯಾಡಿಯಲ್ಲಿ ಪ್ರತಿಭಟನೆ

ರಾಷ್ಟ್ರೀಯ ಹೆದ್ದಾರಿ-75 ರ ನೆಲ್ಯಾಡಿ ಸಂತ ಜಾರ್ಜ್ ಹಾಗೂ ಬೆಥನಿ ವಿದ್ಯಾಸಂಸ್ಥೆಗಳ ಬಳಿ- ಯು-ಟರ್ನ್ ನೀಡಲು ಆಗ್ರಹಿಸಿ ನೆಲ್ಯಾಡಿಯಲ್ಲಿ ಪ್ರತಿಭಟನೆ

September 10, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d