ಕಾರ್ಕಳ ಜೂನ್, 25: ರಿಮೋಟ್‌ನಲ್ಲಿ ಚಾನೆಲ್ ಬದಲಿಸುವ ವಿಚಾರಕ್ಕೆ ಗಂಡ-ಹೆಂಡತಿ ನಡುವೆ ಆರಂಭವಾದ ಜಗಳ ಸಾವಿನೊಂದಿಗೆ ಅಂತ್ಯ ಕಂಡಿರುವ ಘಟನೆ ಜೂ. 25ರಂದು ಕಾರ್ಕಳ ತಾಲೂಕು ನಲ್ಲೂರಿನಲ್ಲಿ ನಡೆದಿದೆ, ಯಲ್ಲಾಪುರ ಮೂಲದ ಇಮ್ಯಾನುಲ್ ಸಿದ್ದಿ (40) ಹಾಗೂ ಯಶೋಧಾ (32) ಎಂಬವರೇ ಸಾವಿಗೀಡಾದ ದಂಪತಿ.
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮದಲ್ಲಿ ರಿಮೋಟ್‌ನಲ್ಲಿ ಚಾನೆಲ್ ಬದಲಿಸುವ ವಿಚಾರಕ್ಕೆ ಗಂಡ-ಹೆಂಡತಿ ಪರಸ್ಪರ ಹೊಡೆದಾಡಿಕೊಂಡು ಸಾವನ್ನಪ್ಪಿದ್ದಾರೆ. ಇನ್ನು ದಂಪತಿಗಳ ದುರಂತ ಸಾವಿನಿಂದ ಇಬ್ಬರು ಪುಟ್ಟ ಮಕ್ಕಳು ಅನಾಥರಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಮೂಲದ ದಂಪತಿ ಯಶೋಧ ಮತ್ತು ಇಮ್ಯಾನುಲ್ ತೋಟದ ಕೆಲಸಕ್ಕೆ ಬಂದು ಕಾರ್ಕಳದಲ್ಲಿ ನೆಲೆಸಿದ್ದರು. ಮಧ್ಯಾಹ್ನ ಊಟದ ಬಳಿಕ ದಂಪತಿಗಳು ಇಬ್ಬರು ಮಕ್ಕಳೊಂದಿಗೆ ಟಿವಿ ನೋಡುತ್ತಾ ಮನೆಯಲ್ಲಿ ಕುಳಿತಿದ್ದರು.
ಈ ನಡುವೆ ಚಾನೆಲ್ ಚೇಂಜ್ ಮಾಡಲು ದಂಪತಿ ನಡುವೆ ಕಿರಿಕಿರಿ ನಡೆದಿದೆ. ಇನ್ನು ಜಗಳದಿಂದ ಮನನೊಂದು ಪತ್ನಿ ಮನೆ ಸಮೀಪದಲ್ಲಿದ್ದ ನೀರು ತುಂಬಿದ್ದ ಗುಂಡಿಗೆ ಹಾರಿದ್ದಾರೆ. ಇನ್ನು ಪತ್ನಿಯನ್ನು ರಕ್ಷಿಸಲು ಪತಿ ಕೂಡ ನೀರಿಗೆ ಧುಮುಕಿದ್ದಾನೆ. ಬಳಿಕ ಗುಂಡಿಯಿಂದ ಹೊರಬರಲಾರದೇ ಇಬ್ಬರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ದಂಪತಿಗಳ ಮೃತದೇಹವನ್ನು ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯ ಸುಮಿತ್ ನಲ್ಲೂರು ಮತ್ತು ಗೆಳೆಯರು ಮೇಲೆತ್ತಿದ್ದಾರೆ. ಕಳೆದ ಎರಡು ವರ್ಷಗಳಿಂದ ಇಮ್ಯಾನುಲ್, ಯಶೋಧಾ ದಂಪತಿ ನಲ್ಲೂರಿನ ತೋಟವೊಂದರಲ್ಲಿ ಕೆಲಸಕ್ಕಿದ್ದರು. ದಂಪತಿ ಸಾವಿನಿಂದ ಇದೀಗ 10 ವರ್ಷದ ಬಾಲಕ ಹಾಗೂ 9 ವರ್ಷದ ಬಾಲಕಿ ಅನಾಥರಾಗಿದ್ದಾರೆ.
ಡಿವೈಎಸ್‌ಪಿ ಅರವಿಂದ್ ಕಲಗುಜ್ಜಿ ಗ್ರಾಮಾಂತರ ಪೊಲೀಸ್ ಠಾಣೆ ಎಸ್‌ಐ ತೇಜಸ್ವಿ ಪೊಲೀಸರಾದ ಪ್ರಕಾಶ್, ಸುಭಾಶ್ ಕಾಮತ್, ಸುಂದರ ಗೌಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post