ಬೆಂಗಳೂರು: ಇಲ್ಲಿಯ ತಿಲಕ್ ನಗರದಲ್ಲಿ ನೆಲೆಸಿದ್ದ ಶಂಕಿತ ಉಗ್ರ ಅಖ್ತರ್ ಹುಸೇನ್ ಲಷ್ಕರ್ ಎಂಬಾತನನ್ನು ಸಿಸಿಬಿ ಪೊಲೀಸರು ಭಾನುವಾರ ರಾತ್ರಿ ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಅಸ್ಸಾಂನ ಅಖ್ತರ್, ತಿಲಕ್ ನಗರದ ಬಹುಮಹಡಿ ಕಟ್ಟಡದ ಮೂರನೇ ಮಹಡಿಯಲ್ಲಿದ್ದ ಮನೆಯಲ್ಲಿ ನೆಲೆಸಿದ್ದ. ಆತನ ನಗರದಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ಶಂಕಿತನ ಬಗ್ಗೆ ಕೇಂದ್ರ ಗುಪ್ತದಳದಿಂದ ಮಾಹಿತಿ ಬಂದಿತ್ತು. ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು, ರಾತ್ರಿ ಮನೆ ಮೇಲೆ ದಾಳಿ ಮಾಡಿ ಶಂಕಿತ ಉಗ್ರನನ್ನು ವಶಕ್ಕೆ ಪಡೆದಿದ್ದಾರೆ. ‘ಭಯೋತ್ಪಾದನಾ ಕೃತ್ಯದಲ್ಲಿ ತೊಡಗಿದ್ದ ಅಖ್ತರ್, ಉತ್ತರ ಭಾರತದಿಂದ ಪರಾರಿಯಾಗಿ ಬೆಂಗಳೂರಿಗೆ ಬಂದು ನೆಲೆಸಿದ್ದ. ಈತನನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ನಡೆಸಿದ ಬಳಿಕವೇ ಮತ್ತಷ್ಟು ಮಾಹಿತಿ ಸಿಗಲಿದೆ’ ಎಂದು ಸಿಸಿಬಿ ಮೂಲಗಳು ಹೇಳಿವೆ. ಕೆಲ ದಿನಗಳ ಹಿಂದೆಯಷ್ಟೇ ಓಕಳಿಪುರದಲ್ಲಿ ಶಂಕಿತ ಉಗ್ರ ತಾಲಿಬ್ ಹುಸೇನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದರು.
ಜೊತೆಗಿದ್ದ ಮೂವರನ್ನು ಕಸ್ಟಡಿ ಪಡೆದುಕೊಂಡಿಲ್ಲ : ಪೊಲೀಸ್ ಕಮೀಷನರ್ ಪ್ರತಾಪ್ ರೆಡ್ಡಿ ಸ್ಪಷ್ಟನೆ : ನಗರದಲ್ಲಿ ನೆಲೆಯೂರಿದ್ದ ಮನೆ ಮೇಲೆ ದಾಳಿ ಮಾಡಿ ಶಂಕಿತ ಉಗ್ರನನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು, ಜೊತೆಯಲ್ಲಿದ್ದ ಮೂವರನ್ನು ತನಿಖೆಗೆ ಒಳಪಡಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಕೇಂದ್ರ ಹಾಗೂ ರಾಜ್ಯ ತನಿಖಾ ಸಂಸ್ಥೆಗಳ ನೆರವಿನಿಂದ ನಗರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ನಿನ್ನೆ ತಿಲಕ್ ನಗರದ ಮನೆಯೊಂದರ ಮೇಲೆ ದಾಳಿ ನಡೆಸಿ ಶಂಕಿತ ಉಗ್ರನನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ಈತನ ಜೊತೆಯಲ್ಲಿ ವಾಸವಿದ್ದ ಅಸ್ಸೋಂ ಮೂಲದ ಮೂವರು ಯುವಕರನ್ನ ಪ್ರಶ್ನಿಸಲಾಗುತ್ತಿದೆ. ತನಿಖೆಯಲ್ಲಿ ಇವರ ಪಾತ್ರ ಕಂಡುಬಂದರೆ ವಶಕ್ಕೆ ಪಡೆದುಕೊಳ್ಳಲಾಗುವುದು ಎಂದು ಆಯುಕ್ತರು ತಿಳಿಸಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post