ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ ಶನಿವಾರ ಮಧ್ಯಾಹ್ನ 1:45ರ ಸುಮಾರಿಗೆ ನಡೆದಿದೆ. ವಿಕ್ಕಿ ಬಪ್ಪಲ್ ತಲವಾರು ದಾಳಿಗೊಳಗಾದ ವ್ಯಕ್ತಿ. ರೌಡಿ ಶೀಟರ್ ಆಗಿರುವ ಈತ, ಮಾದಕವಸ್ತು ಮಾರಾಟದ ಕಾರಣಕ್ಕೆ ಪೊಲೀಸ್ ಕಣ್ಗಾವಲಿನಲ್ಲಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.


ಪ್ರತ್ಯಕ್ಷದರ್ಶಿಗಳ ಪ್ರಕಾರ, ಲಾಲ್ ಬಾಗ್ ಸಿಗ್ನಲ್ ಬಳಿ ಬೈಕಿನಲ್ಲಿ ಸಂಚರಿಸುತ್ತಿದ್ದ ವಿಕ್ಕಿ ಬಪ್ಪಲ್ ನನ್ನು ಬೇರೊಂದು ಬೈಕಿನಲ್ಲಿ ಹಿಂಬಾಳಿಸಿಕೊಂಡ ಬಂದ ದುಷ್ಕರ್ಮಿಯೋರ್ವ ತಲವಾರಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ. ದಾಳಿಯಿಂದ ವಿಕ್ಕಿ ಬಪ್ಪಲ್ ನ ಕುತ್ತಿಗೆಯ ಬಳಿ ಆಳವಾದ ಗಾಯವಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


Discover more from Coastal Times Kannada
Subscribe to get the latest posts sent to your email.








Discussion about this post