ಬಂಟ್ವಾಳ, ಆ 24 : ಕಲ್ಲಡ್ಕದಲ್ಲಿ ಹದಗೆಟ್ಟ ರಸ್ತೆ ಮತ್ತು ಧೂಳಿನಿಂದ ಸಮಸ್ಯೆಗಳು ಉಂಟಾಗಿದ್ದು, ಇದರಿಂದ ರೋಸಿಹೋದ ಕಲ್ಲಡ್ಕದ ವರ್ತಕರು ಹಾಗೂ ಸಾರ್ವಜನಿಕರು ಗುರುವಾರ ಪಕ್ಷ, ಜಾತಿ, ಧರ್ಮ ಬೇಧ ಮರೆತು ಒಗ್ಗಟ್ಟಾಗಿ ಗುತ್ತಿಗೆ ಕಂಪನಿ ವಾಹನಗಳನ್ನು ತಡೆಗಟ್ಟಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.
ಕಲ್ಲಡ್ಕದ ಹದಗೆಟ್ಟ ರಸ್ತೆ ಮತ್ತು ಧೂಳಿನಿಂದ ಸಮಸ್ಯೆಯಿಂದಾಗಿ ರೋಸಿಹೋದ ಕಲ್ಲಡ್ಕದ ವರ್ತಕರು, ಹಾಗೂ ಸಾರ್ವಜನಿ ಕರು ಗುರುವಾರ ಕೆ.ಎನ್.ಆರ್.ಸಿ ಕಂಪನಿಯ ವಾಹನಗಳನ್ನು ತಡೆಗಟ್ಟಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.
ಕಾಮಗಾರಿಯ ಗುತ್ತಿಗೆ ವಹಿಸಿಕೊಂಡಿರುವ ಕೆ.ಎನ್.ಆರ್.ಸಿ ಕಂಪೆನಿಯ ಅಧಿಕಾರಿಗಳು ಸ್ಥಳಕ್ಕೆ ಬರಬೇಕು, ಇಲ್ಲಿನ ಸಮಸ್ಯೆಗಳು ಬಗೆಹರಿಯಬೇಕು ಎಂದು ಪ್ರತಿಭಟನಕಾರರು ಪಟ್ಟುಹಿಡಿದರು. ಇದರಿಂದಾಗಿ ಕೆಲಕಾಲ ರಸ್ತೆ ತಡೆ ಉಂಟಾಗಿ ಸಂಚಾರ ಅಸ್ತವ್ಯಸ್ತ ಗೊಂಡಿತ್ತು. ಈ ಸಂದರ್ಭ ಸ್ಥಳಕ್ಕೆ ಬಂಟ್ವಾಳ ನಗರ ಠಾಣೆ ಪಿಎಸ್‌ಐ ರಾಮಕೃಷ್ಣ ನೇತೃತ್ವದ ಪೊಲೀಸರ ತಂಡ ಪ್ರತಿಭಟನಕಾರರ ಮನವೊಲಿಸಿದರು.
ಸ್ಥಳಕ್ಕೆ ಆಗಮಿಸಿದ ಗುತ್ತಿಗೆ ಕಂಪನಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ಪ್ರತಿಭಟನಾಕಾರ ರೊಂದಿಗೆ ಮಾತುಕತೆ ನಡೆಸಿದರು, ಮುಂದಿನ ಬುಧವಾರದೊಳಗೆ ಸರ್ವಿಸ್ ರಸ್ತೆಗೆ ಡಾಮರೀಕರಣ ಕೆಲಸ ಆರಂಭಿಸುವುದಾಗಿ ಭರವಸೆ ನೀಡಿದರು. ಇದೇ ವೇಳೆ ಪ್ರತಿಕ್ರಿಯಿಸಿದ ಪ್ರತಿಭಟನಾಕಾರರು ಹೊಂಡ ಮುಚ್ಚಿ, ರಸ್ತೆಯನ್ನು ಡಾಮರೀಕರಣ ಮಾಡಬೇಕು. ಧೂಳಿನ ಸಮಸ್ಯೆ ತಲೆದೋರಿದ್ದು, ಇದಕ್ಕೆ ಮುಕ್ತಿ ನೀಡುವ ನಿಟ್ಟಿನಲ್ಲಿ ರಸ್ತೆಗೆ ನೀರು ಹಾಯಿಸುತ್ತಿರಬೇಕು, ರಸ್ತೆಯಲ್ಲಿ ಕೊಳಚೆ ನೀರು ಹರಿಯದಂತೆ ಡ್ರೈನೇಜ್ ಸಮಸ್ಯೆ ಪರಿಹರಿಸಬೇಕು ಎಂದು ಒತ್ತಾಯಿಸಿದರು.
ಬುಧವಾರದೊಳಗೆ ಕಾಮಗಾರಿ ಆರಂಭಗೊಳ್ಳದೇ ಇದ್ದರೆ, ಕಲ್ಲಡ್ಕದ ವರ್ತಕರು ಎಲ್ಲರೂ ತಮ್ಮ ಅಂಗಡಿ ಮುಂಗಟ್ಟುಗಳು ಬಂದ್ ಮಾಡಿ ಪೇಟೆ ಬಂದ್, ಹೆದ್ದಾರಿ ತಡೆಯಂಥ ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ಎಚ್ಚರಿಸಿದರು. ಕಂಪೆನಿಯ ಇಂಜಿನಿಯರ್ ಅಯ್ಯಪ್ಪ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ತಾತ್ಕಾಲಿಕವಾಗಿ ಹಿಂಪಡೆಯಲಾಯಿತು.
Discover more from Coastal Times Kannada
Subscribe to get the latest posts sent to your email.
Discussion about this post