ಮಂಗಳೂರು, ಸೆ.24: ಸೆ.28ರ ಈದ್ ಮಿಲಾದ್ ಹಬ್ಬದ ನೆಪದಲ್ಲಿ ನಗರದ ಬಂದರು ಮೀನುಗಾರಿಕಾ ದಕ್ಕೆಯಲ್ಲಿ ಹಸಿ ಮೀನು ವ್ಯಾಪಾರಸ್ಥರ ಸಂಘದ ಹೆಸರಲ್ಲಿ ಬ್ಯಾನರ್ ಹಾಕಿದ್ದು, ಅಂದು ಮುಂಜಾನೆ 3.45ರಿಂದ ಯಾವುದೇ ಮೀನು ವ್ಯಾಪಾರಿಗಳು ಕೆಲಸ ಮಾಡದೇ ಕಡ್ಡಾಯ ರಜೆ ಹಾಕಬೇಕು. ತಪ್ಪಿದಲ್ಲಿ ಅಂಥವರ ವಿರುದ್ಧ ಸಂಘದ ವತಿಯಿಂದ ಒಂದು ತಿಂಗಳ ಕಾಲ ನಿಷೇಧ ಹೇರಲಾಗುವುದು ಎಂದು ಬ್ಯಾನರಿನಲ್ಲಿ ಎಚ್ಚರಿಸಲಾಗಿದೆ.
ನಿಮಯವನ್ನು ಉಲ್ಲಂಘಿಸಿದಲ್ಲಿ ಅಂಥ ಮೀನು ವ್ಯಾಪಾರಿಗಳ ವಿರುದ್ಧ ಒಂದು ತಿಂಗಳ ಕಾಲ ಬಂದರು ದಕ್ಕೆಯಲ್ಲಿ ವ್ಯಾಪಾರ ಮಾಡದಂತೆ ಹಸಿ ಮೀನು ವ್ಯಾಪಾರಸ್ಥರ ಸಂಘವು ಕಾನೂನು ಕ್ರಮ ತೆಗೆದುಕೊಳ್ಳುತ್ತದೆ. ಅಲ್ಲದೆ, ದಂಡನೆಯನ್ನೂ ವಿಧಿಸಲಾಗುತ್ತದೆ. ಇತರ ಯಾವುದೇ ಸಹಾಯ, ಸಹಕಾರದಿಂದ ವಂಚಿತರಾಗಬೇಕಾಗುತ್ತದೆ ಎಂದು ಹಸಿ ಮೀನು ವ್ಯಾಪಾರಸ್ಥರ ಸಂಘದ ಹೆಸರಲ್ಲಿ ಬ್ಯಾನರ್ ಹಾಕಿ ಹಿಂದು ವ್ಯಾಪಾರಿಗಳನ್ನು ಎಚ್ಚರಿಸಲಾಗಿದೆ.
ಮಂಗಳೂರು ದಕ್ಕೆಯಲ್ಲಿ ಮೀನುಗಾರಿಕಾ ಚಟುವಟಿಕೆಯಲ್ಲಿ ಹಸಿ ಮೀನು ಮಾರಾಟಗಾರರ ಮತ್ತು ಕಮಿಷನ್ ಏಜೆಂಟರ ಸಂಘ, ಪರ್ಶಿಯನ್ ಬೋಟ್ ಯೂನಿಯನ್, ಟ್ರಾಲ್ ಬೋಟ್ ಯೂನಿಯನ್, ಫಿಶ್ ಬಯ್ಯರ್ಸ್ ಎಸೋಸಿಯೇಶನ್ ಮತ್ತಿತರ ಸಂಘಗಳು ಸಂಯುಕ್ತವಾಗಿ ಈ ರಜೆಗಳನ್ನು ನಿರ್ಧರಿಸಲಾಗಿದೆ. ಆದರೆ ಇತ್ತೀಚೆಗೆ ಸಾಮಾಜಿಕ ಜಾಲ ತಾಣದಲ್ಲಿ ಸಂಘದ ಮೀಲಾದ್ ರಜೆಯ ಪ್ರಕಟನಾ ಫಲಕ ( ಫ್ಲೆಕ್ಸ್ ) ದ ಬಗ್ಗೆ ಕೆಲವರು ತಪ್ಪು ಗ್ರಹಿಕೆಯ ಪ್ರಚೋದನಾತ್ಮಕ ಮಾಹಿತಿ ಹಂಚುತ್ತಿರುವುದು ಖೇದಕರ. ಇಂತಹ ತಪ್ಪು ಮಾಹಿತಿ ಗಳಿಂದ ಸಾರ್ವಜನಿಕರು ಗೊಂದಲಕ್ಕೆ ಒಳಗಾಗಬಾರದಾಗಿ ವಿನಂತಿ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಈ ಬ್ಯಾನರ್ ಗೆ ವಿಶ್ವ ಹಿಂದೂ ಪರಿಷತ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸರನ್ನು ಆಗ್ರಹಿಸಿದೆ.
Discover more from Coastal Times Kannada
Subscribe to get the latest posts sent to your email.
Discussion about this post