ಮಂಗಳೂರು: ಕೇರಳ-ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಮತ್ತು ಕರ್ನಾಟಕಜಾನಪದ ಪರಿಷತ್ತು ಕೇರಳ ಗಡಿನಾಡ ಘಟಕದಜಂಟಿ ಆಶ್ರಯದಲ್ಲಿ ಸೆಪ್ಟೆಂಬರ್ 27ರಂದು ಕೊಚ್ಚಿಯ ಕಲೂರ್ ಗೋಕುಲಂ ಪಾರ್ಕ್ ಕನ್ವೆನ್ಷನ್ ಸೆಂಟರ್ ನಲ್ಲಿ ಕೇರಳ ಕರ್ನಾಟಕ ಜಾನಪದ ಉತ್ಸವ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಖ್ಯಾತ ಕ್ರೀಡಾ ಅಂಕಣಕಾರ ಜಗದೀಶ್ ಚಂದ್ರ ಅಂಚನ್ ಸೂಟರ್ ಪೇಟೆ ಅವರಿಗೆ ಸಾಧಕ ರತ್ನ ಪ್ರಶಸ್ತಿ ಪ್ರದಾನ ನಡೆಯಲಿದೆ.ಕ್ರೀಡಾ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಕಳೆದ ಮೂರು ದಶಕಗಳಿಂದ ಗುರುತಿಸಿಕೊಂಡಿರುವ ಇವರು ಹಲವಾರು ರಾಜ್ಯ – ಅಂತರ್ ರಾಜ್ಯ ಪ್ರಶಸ್ತಿಗಳನ್ನು ಪಡೆದಿರುತ್ತಾರೆ.
ಅಂಚನ್ ಅವರ ಕ್ರೀಡಾ ಬರವಣಿಗೆಗಾಗಿ 2013ರಲ್ಲಿ ‘ಮೀಡಿಯಾ ಅವಾರ್ಡ್’, 2014ರಲ್ಲಿ ‘ಸಮಾಜ ರತ್ನ ‘ ರಾಜ್ಯ ಪ್ರಶಸ್ತಿ , 2016ರ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ , ಲಯನ್ಸ್ ರಾಜ್ಯೋತ್ಸವ ಪ್ರಶಸ್ತಿ ,2018ರಲ್ಲಿ ಗಡಿನಾಡ ರಾಜ್ಯೋತ್ಸವ ಪ್ರಶಸ್ತಿ ; 2019ರಲ್ಲಿ ಜಾನಪದ ಲೋಕ ರಾಜ್ಯ ಪ್ರಶಸ್ತಿ ; ನಮ್ಮ ಕುಡ್ಲ ಸಾಧಕ ಪ್ರಶಸ್ತಿ, 2020ರಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮ್ಮೇಳನದಲ್ಲಿ ಕೆ.ಎ.ನೆಟ್ಟಕಲ್ಲಪ್ಪ ರಾಜ್ಯ ಪ್ರಶಸ್ತಿ , 2021ರಲ್ಲಿ ಸಿದ್ಧಗಂಗಾಶ್ರೀ ರಾಜ್ಯ ಪ್ರಶಸ್ತಿ , 2022ರಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕಾಸರಗೋಡು ಘಟಕದಿಂದ ಕೆ.ಆರ್.ಟ್ಯಾಗೋರ್ ದತ್ತಿ ನಿಧಿ ಪ್ರಶಸ್ತಿ, 2023ರಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಪುರಸ್ಕಾರ, ಸಾಧನ ಪ್ರಶಸ್ತಿ -2023, 2024ರಲ್ಲಿ ಕರ್ನಾಟಕ ಕಲಾಶ್ರೀ ಪ್ರಶಸ್ತಿ, 2026ರಲ್ಲಿ ಜಾನಪದ ರತ್ನ ಪ್ರಶಸ್ತಿ, ಕನ್ನಡ ಪಯಸ್ವಿನಿ ಅವಾರ್ಡ್ -2026 ಅಂತರ್ ರಾಜ್ಯ ಪ್ರಶಸ್ತಿ ಹಾಗೂ ಬಸವಶ್ರೀ -2026 ಪ್ರಶಸ್ತಿಗಳು ಸೇರಿದಂತೆ ಹಲವು ಪುರಸ್ಕಾರವನ್ನು ಇವರು ಪಡೆದಿದ್ದಾರೆ.
Discover more from Coastal Times Kannada
Subscribe to get the latest posts sent to your email.







Discussion about this post