ಮಂಗಳೂರು, ಜ.25: ಏಕಾಂಗಿಯಾಗಿ ಅಪೂರ್ವ ಮತ್ತು ಅಪಾಯಕಾರಿಯಾದ ಕೆಲಸದ ಮೂಲಕ ಜೀವ ಜಲವನ್ನು ತರಿಸಿ ಬೋಳು ಗುಡ್ಡೆಯನ್ನು ನಂದನವನ ಮಾಡಿದ ಪ್ರಯತ್ನಶೀಲ ಪ್ರಗತಿಪರ ಕೃಷಿಕ ಅಮೈ ಮಹಾಲಿಂಗ ನಾಯ್ಕ ಅವರು ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಹೆಸರು ಮಹಾಲಿಂಗ ನಾಯ್ಕ (74). ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಡ್ಯನಡ್ಕ ಸಮೀಪದ ಅಮೈ ನಿವಾಸಿ. ಇವರು ಜೀವಜಲ ಪಡೆಯುವುದಕ್ಕಾಗಿ ಹಾಕಿರುವ ಶ್ರಮ ಮಾತ್ರ ಎಲ್ಲರನ್ನು ನಿಬ್ಬೆರಗರನ್ನಾಗಿಸುತ್ತದೆ. ಏಕಾಂಗಿಯಾಗಿ ಇವರು ಅಪೂರ್ವ ಮತ್ತು ಅಪಾಯಕಾರಿಯಾದ ಕೆಲಸದ ಮೂಲಕ ಜೀವಜಲವನ್ನು ತರಿಸಿ ಬೋಳು ಗುಡ್ಡೆಯನ್ನು ನಂದನವನ ಮಾಡಿದ್ದಾರೆ.
ಕೃಷಿಗೆ ನೀರು ಹಾಯಿಸಲು ಪಂಪ್ ಸೆಟ್‌ಗಳ ಸೌಲಭ್ಯಗಳೇ ಇಲ್ಲದ ಕಾಲದಲ್ಲಿ ಹಿಂದಿನ ತಲೆಮಾರಿನವರು ಅವಲಂಭಿಸಿದ್ದ ಸುರಂಗ ನೀರಿನ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟು ಇವರು ಯಶಸ್ವಿಯಾಗಿದ್ದಾರೆ. ಇದೇ ವ್ಯವಸ್ಥೆಯಲ್ಲಿ ವಿದ್ಯುತ್ ರಹಿತವಾಗಿ ಗ್ರಾವಿಟಿ ನೆರವಿನಲ್ಲಿ ಕೃಷಿಗೆ ತುಂತುರು ನೀರಾವರಿ, ಸ್ಟ್ರಿಂಕ್ಲರ್ ನೀರಾವರಿ ವ್ಯವಸ್ಥೆಯನ್ನು ಕಲ್ಪಿಸುವಲ್ಲಿ ಯಶಸ್ವಿಯಾಗಿರುವ ಮಾಹಾಲಿಂಗ ನಾಯ್ಕ ಏಕಾಂಗಿಯಾಗಿ ಏಳು ಸುರಂಗಗಳನ್ನು ಕೊರೆದ ಒನ್ ಮ್ಯಾನ್ ಆರ್ಮಿ.
ಕುಡಿಯುವ ನೀರಿಗಾಗಿ ಮೂರು ಕಿ. ಮೀ ದೂರದ ಮನೆಯವರನ್ನು ಆಶ್ರಯಿಸಿದ್ದ ಮಹಾಲಿಂಗ ನಾಯ್ಕರಿಗೆ ಬಾವಿ ತೋಡಿಸಲು ಕೈಯಲ್ಲಿ ದುಡ್ಡಿರಲಿಲ್ಲ. ಆಗ ಅವರಿಗೆ ಹೊಳೆದುದು ಸುರಂಗ ಕೊರೆಯುವುದು. ಅರ್ಧ ದಿನ ಕೂಲಿ ಕೆಲಸ, ಉಳಿದರ್ಧ ದಿನ ಮತ್ತು ರಾತ್ರಿ ಹೊತ್ತು ಸುರಂಗ ಕೊರೆಯುವ ಮೂಲಕ ಜೀವಜಲ ಹುಡುಕುವ ಭಗೀರಥ ಪ್ರಯತ್ನ. ಮಹಾಲಿಂಗ ನಾಯ್ಕ ಮೊದಲು 30 ಮೀಟರ್ ಉದ್ದದ ಸುರಂಗ ಕೊರೆದರೂ ನೀರು ಸಿಗಲಿಲ್ಲ.
ಇದರಿಂದ ನಿರಾಸೆಯಾಗದ ಅವರು ಮತ್ತೆ ಪ್ರಯತ್ನ ಮುಂದುವರಿಸಿ ತೆಂಗಿನೆಣ್ಣೆ ದೀಪದ ಬೆಳಕಿನಲ್ಲಿ ಪ್ರತಿ ವರ್ಷ ತಲಾ ಒಂದರಂತೆ 25-30 ಮೀಟರ್ ಉದ್ದದ ಸತತ ಐದು ಸುರಂಗಗಳನ್ನು ಕೊರೆದರು. 62 ಮೀಟರ್ ಉದ್ದದ ಆರನೇ ಸುರಂಗದ ಪ್ರಯತ್ನ ಫಲ ನೀಡಿತು. ಹೀಗೆ ಬರಡಾದ ಭೂಮಿಯಲ್ಲಿ ಜಲ ಕ್ರಾಂತಿ ಮಾಡಿದ ಮಹಾಲಿಂಗ ನಾಯ್ಕರಿಗೆ ಈಗ ದೇಶದ ಅತ್ಯುನ್ನತ ನಾಲ್ಕನೇ ನಾಗರಿಕ ಪ್ರಶಸ್ತಿ ಯಾದ ಪದ್ಮಶ್ರೀ ಪ್ರಶಸ್ತಿ ಲಭ್ಯವಾಗಿದೆ.
ರಾತ್ರಿ ಹೊತ್ತು ಸುರಂಗ ಕೊರೆಯುವುದು :
ಮನೆ ಕಟ್ಟಲು ಅಸಾಧ್ಯವಾದ, ನೀರಿಲ್ಲದ ಇಳಿಜಾರು ಬೋಳುಗುಡ್ಡದಲ್ಲಿ ಕೃಷಿ ತೋಟ ಮಾಡುವುದು ಮಹಾಲಿಂಗ ನಾಯ್ಕರಿಗೆ ಸವಾಲಾಗಿ ಕಂಡು ಬಂದರೂ ಅವರು ತನ್ನ ಪ್ರಯತ್ನವನ್ನು ಬಿಡಲಿಲ್ಲ. ಅಲ್ಲೇ ಭವಿಷ್ಯ ರೂಪಿಸುವ ಉದ್ದೇಶದಿಂದ ಸ್ವಲ್ಪ ಜಾಗವನ್ನು ಸಮತಟ್ಟು ಮಾಡಿ ಸಣ್ಣದೊಂದು ಗುಡಿಸಲು ಕಟ್ಟಿದರು. ಕುಡಿಯುವ ನೀರಿಗಾಗಿ ಪಕ್ಕದ ಮನೆಯವರನ್ನು ಆಶ್ರಯಿಸಿದ್ದ ಮಹಾಲಿಂಗ ನಾಯ್ಕರಿಗೆ ಬಾವಿ ತೋಡಿಸಲು ಕೈಯಲ್ಲಿ ದುಡ್ಡಿರಲಿಲ್ಲ. ಬಾವಿ ತೋಡಿದರೆ ನೀರು ದೊರೆಯುವ ಸಾಧ್ಯತೆಯೂ ಇರಲಿಲ್ಲ. ಏಕಾಂಗಿಯಾಗಿ ಬಾವಿ ತೋಡುವುದು ಅಸಾಧ್ಯ ಮಾತು. ಆಗ ಅವರಿಗೆ ಹೊಳೆದುದು ಸುರಂಗ ಕೊರೆತ. ಅರ್ಧ ದಿನ ಕೂಲಿ ಕೆಲಸ, ಉಳಿದಾರ್ಧ ದಿನ ಮತ್ತು ರಾತ್ರಿ ಹೊತ್ತು ಸುರಂಗ ಕೊರೆಯುವ ಮೂಲಕ ಜೀವಜಲ ಹುಡುಕುವ ಪ್ರಯತ್ನ ಮಾಡಿದರು.
ಮಹಾಲಿಂಗ ನಾಯ್ಕ ಮೊದಲು 30 ಮೀ. ಉದ್ದದ ಸುರಂಗ ಕೊರೆದರೂ ನೀರು ಸಿಗಲಿಲ್ಲ. ನಿರಾಸೆಯಾಗದ ಅವರು ಮತ್ತೆ ಪ್ರಯತ್ನ ಮುಂದುವರಿಸಿ ಸೀಮೆಎಣ್ಣೆ , ತೆಂಗಿನೆಣ್ಣೆ ದೀಪದ ಬೆಳಕಿನಲ್ಲಿ ಪ್ರತಿ ವರ್ಷ ತಲಾ ಒಂದರಂತೆ 25-30 ಮೀ. ಉದ್ದದ ಸತತ ಐದು ಸುರಂಗಗಳನ್ನು ಕೊರೆದರು. ಆದರೂ ಅವರ ಅಪಾಯಕಾರಿ ಪ್ರಯತ್ನಕ್ಕೆ ಫಲ ದೊರೆಯಲಿಲ್ಲ. ಅವರ ಪ್ರಯತ್ನವನ್ನು ನೋಡಿ ಹಲವರು ಗೇಲಿ ಮಾಡಿದ್ದರು ಎಂದು ಮಹಾಲಿಂಗ ನಾಯ್ಕ ಅಂದಿನ ದಿನಗಳನ್ನು ನೆನಪಿಸಿಕೊಳ್ಳುತ್ತಾರೆ.
Discover more from Coastal Times Kannada
Subscribe to get the latest posts sent to your email.
Discussion about this post