• About us
  • Contact us
  • Disclaimer
Thursday, October 15, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಳ್ಳಾಲ: ಕೋಟೆಕಾರ್‌ ಬ್ಯಾಂಕ್‌ ದರೋಡೆ ಪ್ರಕರಣದ ಸ್ಥಳೀಯ ಸೂತ್ರಧಾರಿ ತಲಪಾಡಿ ಕೆ.ಸಿ. ರೋಡ್‌ ನಿವಾಸಿ ಸೇರಿ ಇಬ್ಬರು ಪೊಲೀಸ್‌ ವಶಕ್ಕೆ

Coastal Times by Coastal Times
February 26, 2025
in ಕ್ರೈಮ್ ನ್ಯೂಸ್
ಉಳ್ಳಾಲ: ಕೋಟೆಕಾರ್‌ ಬ್ಯಾಂಕ್‌ ದರೋಡೆ ಪ್ರಕರಣದ ಸ್ಥಳೀಯ ಸೂತ್ರಧಾರಿ ತಲಪಾಡಿ ಕೆ.ಸಿ. ರೋಡ್‌ ನಿವಾಸಿ ಸೇರಿ ಇಬ್ಬರು ಪೊಲೀಸ್‌ ವಶಕ್ಕೆ
134
VIEWS
WhatsappTelegramShare on FacebookShare on Twitter

ಉಳ್ಳಾಲ: ಕೋಟೆಕಾರು ಸೇವಾ ಸಹಕಾರಿ ಸಂಘದ ಕೆ.ಸಿ.ರೋಡ್‌ ಶಾಖೆ ದರೋಡೆಯ ಪ್ರಮುಖ ಕಿಂಗ್‌ ಪಿನ್‌ ಸಹಿತ ಸ್ಥಳೀಯ ಸೂತ್ರದಾರನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ದರೋಡೆಗೆ ಸಂಬಂಧಿಸಿದಂತೆ ಒಟ್ಟು ಆರು ಆರೋಪಿಗಳನ್ನು ಕಳವಾದ 18.250 ಕೆ.ಜಿ. ಚಿನ್ನಾಭರಣವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ದರೋಡೆಗೆ ಸಂಬಂಧಿಸಿದಂತೆ ಇನ್ನೂ ಮೂವರು ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದ್ದು, ದರೋಡೆಗೆ ಸಂಬಂಧಿಸಿದ ಪ್ರಮುಖ ಆರೋಪಿಗಳ ಬಂಧನದಿಂದ ತಾರ್ಕಿಕ ಅಂತ್ಯ ದೊರೆತಂತಾಗಿದೆ.

ದರೋಡೆಯ ಮುಖ್ಯ ಕಿಂಗ್‌ ಪಿನ್‌ ಕಳೆದ ಒಂದು ತಿಂಗಳಿನಿಂದ ತಲೆಮರೆಸಿಕೊಂಡಿದ್ದ ಬಂಟ್ವಾಳ ಕನ್ಯಾನ ಮೂಲದ ದರೋಡೆಯ ಪ್ರಮುಖ ರೂವಾರಿ ಭಾಸ್ಕರ ಬೆಳ್ಚಪ್ಪಾಡ ಯಾನೆ ಶಶಿ ತೇವರ್‌ (69) ಮತ್ತು ಕೋಟೆಕಾರು ಬ್ಯಾಂಕ್‌ನ ಬಗ್ಗೆ ಸಮಗ್ರ ಮಾಹಿತಿ ನೀಡಿದ್ದ ಸ್ಥಳೀಯ ಸೂತ್ರದಾರ ತಲಪಾಡಿ ಕೆ.ಸಿ. ರೋಡ್‌ ಶಾಜ್‌ ಕಾಟೇಜ್‌ ನಿವಾಸಿ ಮಹಮ್ಮದ್‌ ನಝೀರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಭಾಸ್ಕರ ಬೆಳ್ಚಾಪ್ಪಾಡನನ್ನು ಬೆಂಗಳೂರಿನ ರೈಲ್ವೇ ನಿಲ್ದಾಣ ಬಳಿ ಪೊಲೀಸರು ವಶಕ್ಕೆ ತೆಗೆದುಕೊಂಡರೆ ಆತನ ಮಾಹಿತಿಯಂತೆ ಸ್ಥಳೀಯವಾಗಿ ಬ್ಯಾಂಕ್‌ನ ಮಾಹಿತಿ ನೀಡಿ ದರೋಡೆಗೆ ಸ್ಥಳೀಯವಾಗಿ ಸೂತ್ರದಾರನಾಗಿದ್ದ ಮಹಮ್ಮದ್‌ ನಝೀರ್‌ನನ್ನು ಕೆ.ಸಿ. ರೋಡ್‌ನ‌ ಮನೆಯಿಂದ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಪ್ರಕರಣದ ಪ್ರಮುಖ ಆರೋಪಿ ಮುರುಗನ್ ಡಿ ದೇವರ್ ಮತ್ತು ಇತರ ಮೂವರನ್ನು ಕೃತ್ಯ ನಡೆದ ಒಂದೇ ವಾರದಲ್ಲಿ ತಮಿಳುನಾಡಿನಲ್ಲಿ ಬಂಧಿಸಿದ್ದರೂ, ಈ ಕೃತ್ಯ ಸ್ಥಳೀಯರ ಕೈವಾಡ ಇಲ್ಲದೇ ನಡೆದಿರಲು ಸಾಧ್ಯವೇ ಇಲ್ಲ ಎನ್ನುವ ಮಾತು ಕೇಳಿಬಂದಿತ್ತು. ಇದಕ್ಕೆ ಪೂರಕವಾಗಿ ಪೊಲೀಸ್ ಅಧಿಕಾರಿಗಳು ಕೂಡ ಪ್ರಕರಣದಲ್ಲಿ ಸ್ಥಳೀಯ ವ್ಯಕ್ತಿಯ ಕೈವಾಡ ಇದೆ, ಅವರನ್ನು ಬಂಧನ ಮಾಡುತ್ತೇವೆ ಎಂದಿದ್ದರು. ಇದೇ ಕಾರಣಕ್ಕೆ ಎನ್ನುವಂತೆ, ಮುರುಗನ್ ಮತ್ತು ಮಣಿ ಕಣ್ಣನ್ ಅವರ ಮೇಲೆ ಗುಂಡು ಹಾರಿಸಿ ನೆರವು ನೀಡಿದ್ದ ಸ್ಥಳೀಯ ವ್ಯಕ್ತಿ ಯಾರು ಎನ್ನುವ ಬಗ್ಗೆ ಬಾಯಿ ಬಿಡುವಂತೆ ಮಾಡಿದ್ದರು ಎನ್ನಲಾಗಿದೆ.

ಆನಂತರ, ಶಶಿ ತೇವರ್ ಎನ್ನುವ ವ್ಯಕ್ತಿಯೇ ಧಾರಾವಿ ಮೂಲದ ನಟೋರಿಯಸ್ ಗ್ಯಾಂಗ್ ಸದಸ್ಯರಿಗೆ ಕೋಟೆಕಾರು ಬ್ಯಾಂಕ್ ಬಗ್ಗೆ ಮಾಹಿತಿ ನೀಡಿದ್ದ ಎನ್ನಲಾಗಿತ್ತು. ಆದರೆ ಈ ಶಶಿ ತೇವರ್ ಎನ್ನುವ ಹೆಸರು ಸ್ಥಳೀಯ ಆಗಿರಲಿಕ್ಕಿಲ್ಲ. ಆದರೆ ಅಪರಾಧ ಹಿನ್ನೆಲೆಯುಳ್ಳ ಸ್ಥಳೀಯರೇ ಯಾರಾದರೂ ಇಂತಹ ಹೆಸರಿನಲ್ಲಿ ಮುಂಬೈನಲ್ಲಿ ಇದ್ದಿರಬಹುದು ಎನ್ನುವ ಶಂಕೆ ಮೂಡಿತ್ತು. ಇದೇ ಆಯಾಮದಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದರು. ಇದೀಗ ಶಶಿ ತೇವರ್ ಎನ್ನುವ ಹೆಸರಲ್ಲಿ ಗುರುತಿಸಿಕೊಂಡಿದ್ದ ಭಾಸ್ಕರ ಬೆಳ್ಚಪ್ಪಾಡ ಎಂಬಾತನನ್ನು ಬೆಂಗಳೂರಿನ ರೈಲು ನಿಲ್ದಾಣದಲ್ಲಿ ಬಂಧಿಸಲಾಗಿದೆ. ಭಾಸ್ಕರ್ ನನ್ನು ವಿಚಾರಣೆ ನಡೆಸಿದಾಗ, ಕಳೆದ ಏಳು ವರ್ಷಗಳಿಂದ ಕೆಸಿ ರೋಡ್ ನಿವಾಸಿ ಮಹಮ್ಮದ್ ನಜೀರ್ ಜೊತೆಗೆ ಸಂಪರ್ಕದಲ್ಲಿರುವುದು ಮತ್ತು ಕೋಟೆಕಾರು ಬ್ಯಾಂಕನ್ನು ದರೋಡೆ ಮಾಡಲು ಇತರ ಆರೋಪಿಗಳೊಂದಿಗೆ ಸೇರಿ ಸಂಚು ನಡೆಸಿರುವುದನ್ನೂ ತಿಳಿಸಿದ್ದ.

ಇದರಂತೆ, ಬ್ಯಾಂಕ್ ದರೋಡೆಗೆ ಮಾಹಿತಿ ಕೊಟ್ಟು, ಡಕಾಯಿತಿ ನಡೆಸಬೇಕಾದ ದಿನ ಮತ್ತು ಸಮಯದ ಬಗ್ಗೆಯೂ ತಿಳಿಸಿದ್ದಲ್ಲದೆ, ಸೊಸೈಟಿಯಲ್ಲಿರುವ ಸಿಬಂದಿಗಳ ಬಗ್ಗೆ ಮತ್ತು ಕೃತ್ಯದ ನಂತರ ತಪ್ಪಿಸಿಕೊಂಡು ಹೋಗುವ ಮಾರ್ಗ ಮುಂತಾದ ಮಾಹಿತಿಯನ್ನು ನೀಡಿದ್ದ ಮಹಮ್ಮದ್ ನಜೀರ್ ನನ್ನು ಬಂಧಿಸಲಾಗಿದೆ. ತನಿಖೆಯ ಸಂದರ್ಭದಲ್ಲಿ ಮಹಮ್ಮದ್ ನಜೀರ್ ಸ್ಥಳೀಯವಾಗಿ ಆರೋಪಿಗಳಿಗೆ ಸಹಕಾರ ಕೊಟ್ಟಿರುವುದು ಪತ್ತೆಯಾಗಿದೆ.

“ಬಾಸ್ಕರ್ ಬೆಳ್ಚಪಾಡ ಸುಮಾರು 25 ವರ್ಷಗಳಿಂದ ಹುಟ್ಟೂರಾದ ಬಂಟ್ವಾಳದ ಕನ್ಯಾನವನ್ನು ಬಿಟ್ಟು ಮುಂಬೈನಲ್ಲಿ ವಾಸವಾಗಿದ್ದ. ಈತನ ವಿರುದ್ದ ಬೇರೆ ಬೇರೆ ಪೊಲೀಸ್ ಠಾಣೆಗಳಲ್ಲಿ ಡಕಾಯಿತಿ, ಸುಲಿಗೆ, ಶಸ್ತ್ರಾಸ್ತ್ರ ಕಾಯ್ದೆಯಡಿಯಲ್ಲಿ ಪ್ರಕರಣಗಳು ದಾಖಲಾಗಿವೆ. 2011ರಲ್ಲಿ ದೆಹಲಿಯಲ್ಲಿ ದರೋಡೆ ಪ್ರಯತ್ನ, 2021ರಲ್ಲಿ ಮುಂಬೈ ಕ್ರೈಂ ಬ್ರಾಂಚ್ ಸಿಐಡಿ ಠಾಣಾ ವ್ಯಾಪ್ತಿಯಲ್ಲಿ ಭಾರತ ಶಸ್ತ್ರಾಸ್ತ್ರ ಕಾಯ್ದೆಯಡಿಯಲ್ಲಿ ಪ್ರಕರಣ, 2022ರಲ್ಲಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಸುಲಿಗೆ ಪ್ರಕರಣ, 2022ರಲ್ಲಿ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದರೋಡೆಗೆ ಪ್ರಯತ್ನ ಪ್ರಕರಣ ದಾಖಲಾಗಿದೆ” ಅವರು ಎಂದು ಹೇಳಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಕೇರಳ: ತನ್ನ ಪ್ರೇಯಸಿ ಸೇರಿ ಕುಟುಂಬದ ಐವರು ಸದಸ್ಯರನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಅಫಾನ್

Next Post

ಜೀವನ್ ಸಾಥಿ ಡಾಟ್ ಕಾಂನಲ್ಲಿ ಪರಿಚಯವಾಗಿದ್ದ ಯುವತಿಗೆ 60 ಲಕ್ಷ ರೂ. ವಂಚನೆ

Related Posts

ಮಂಗಳೂರು: ಚರ್ಚ್ ಪಾದ್ರಿ ವಿರುದ್ಧ 50ಕ್ಕೂ ಹೆಚ್ಚು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಆರೋಪ ; ಒಡನಾಡಿ ಸಂಸ್ಥೆಯಿಂದ ಮಂಗಳೂರು ಕಮಿಷನರಿಗೆ ದೂರು
ಕ್ರೈಮ್ ನ್ಯೂಸ್

ಮಂಗಳೂರು: ಚರ್ಚ್ ಪಾದ್ರಿ ವಿರುದ್ಧ 50ಕ್ಕೂ ಹೆಚ್ಚು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಆರೋಪ ; ಒಡನಾಡಿ ಸಂಸ್ಥೆಯಿಂದ ಮಂಗಳೂರು ಕಮಿಷನರಿಗೆ ದೂರು

October 15, 2026
136
ಪೆಹಲ್ಗಾಮ್ ಹತ್ಯಾಕಾಂಡದ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್ ಮುಂಬೈ ಪೊಲೀಸ್ ಸೋಗಿನಲ್ಲಿ ಪುತ್ತೂರಿನ ವ್ಯಕ್ತಿಯೊಬ್ಬರಿಗೆ 1.3 ಕೋಟಿ ರೂ. ವಂಚನೆ!
ಕ್ರೈಮ್ ನ್ಯೂಸ್

ಪೆಹಲ್ಗಾಮ್ ಹತ್ಯಾಕಾಂಡದ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್ ಮುಂಬೈ ಪೊಲೀಸ್ ಸೋಗಿನಲ್ಲಿ ಪುತ್ತೂರಿನ ವ್ಯಕ್ತಿಯೊಬ್ಬರಿಗೆ 1.3 ಕೋಟಿ ರೂ. ವಂಚನೆ!

October 13, 2026
29
Next Post
ಜೀವನ್ ಸಾಥಿ ಡಾಟ್ ಕಾಂನಲ್ಲಿ ಪರಿಚಯವಾಗಿದ್ದ ಯುವತಿಗೆ 60 ಲಕ್ಷ ರೂ. ವಂಚನೆ

ಜೀವನ್ ಸಾಥಿ ಡಾಟ್ ಕಾಂನಲ್ಲಿ ಪರಿಚಯವಾಗಿದ್ದ ಯುವತಿಗೆ 60 ಲಕ್ಷ ರೂ. ವಂಚನೆ

Discussion about this post

Recent News

ಮಂಗಳೂರು: ಚರ್ಚ್ ಪಾದ್ರಿ ವಿರುದ್ಧ 50ಕ್ಕೂ ಹೆಚ್ಚು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಆರೋಪ ; ಒಡನಾಡಿ ಸಂಸ್ಥೆಯಿಂದ ಮಂಗಳೂರು ಕಮಿಷನರಿಗೆ ದೂರು

ಮಂಗಳೂರು: ಚರ್ಚ್ ಪಾದ್ರಿ ವಿರುದ್ಧ 50ಕ್ಕೂ ಹೆಚ್ಚು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಆರೋಪ ; ಒಡನಾಡಿ ಸಂಸ್ಥೆಯಿಂದ ಮಂಗಳೂರು ಕಮಿಷನರಿಗೆ ದೂರು

October 15, 2026
136
ಛಾಯಾಗ್ರಾಹಕರ ಬಗ್ಗೆ ಅವಹೇಳನಕಾರಿ ಪೋಸ್ಟ್: ಮಂಗಳೂರಿನ ಯುಟ್ಯೂಬರ್ ವಿರುದ್ಧ ಕ್ರಮಕ್ಕೆ ಆಗ್ರಹ!!

ಛಾಯಾಗ್ರಾಹಕರ ಬಗ್ಗೆ ಅವಹೇಳನಕಾರಿ ಪೋಸ್ಟ್: ಮಂಗಳೂರಿನ ಯುಟ್ಯೂಬರ್ ವಿರುದ್ಧ ಕ್ರಮಕ್ಕೆ ಆಗ್ರಹ!!

October 14, 2026
126
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಚರ್ಚ್ ಪಾದ್ರಿ ವಿರುದ್ಧ 50ಕ್ಕೂ ಹೆಚ್ಚು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಆರೋಪ ; ಒಡನಾಡಿ ಸಂಸ್ಥೆಯಿಂದ ಮಂಗಳೂರು ಕಮಿಷನರಿಗೆ ದೂರು

ಮಂಗಳೂರು: ಚರ್ಚ್ ಪಾದ್ರಿ ವಿರುದ್ಧ 50ಕ್ಕೂ ಹೆಚ್ಚು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಆರೋಪ ; ಒಡನಾಡಿ ಸಂಸ್ಥೆಯಿಂದ ಮಂಗಳೂರು ಕಮಿಷನರಿಗೆ ದೂರು

October 15, 2026
ಛಾಯಾಗ್ರಾಹಕರ ಬಗ್ಗೆ ಅವಹೇಳನಕಾರಿ ಪೋಸ್ಟ್: ಮಂಗಳೂರಿನ ಯುಟ್ಯೂಬರ್ ವಿರುದ್ಧ ಕ್ರಮಕ್ಕೆ ಆಗ್ರಹ!!

ಛಾಯಾಗ್ರಾಹಕರ ಬಗ್ಗೆ ಅವಹೇಳನಕಾರಿ ಪೋಸ್ಟ್: ಮಂಗಳೂರಿನ ಯುಟ್ಯೂಬರ್ ವಿರುದ್ಧ ಕ್ರಮಕ್ಕೆ ಆಗ್ರಹ!!

October 14, 2026
ಮಂಗಳೂರು ಏರ್ ಪೋರ್ಟ್ ನಲ್ಲಿ ಟೂರಿಸ್ಟ್ ವಾಹನಗಳಿಂದ ದುಬಾರಿ ಶುಲ್ಕ ವಸೂಲಿ: ಟ್ಯಾಕ್ಸಿ ಚಾಲಕರಿಂದ 10 ದಿನಗಳ ಗಡುವು, ಅನಿರ್ದಿಷ್ಟಾವಧಿ ಧರಣಿ ಎಚ್ಚರಿಕೆ

ಮಂಗಳೂರು ಏರ್ ಪೋರ್ಟ್ ನಲ್ಲಿ ಟೂರಿಸ್ಟ್ ವಾಹನಗಳಿಂದ ದುಬಾರಿ ಶುಲ್ಕ ವಸೂಲಿ: ಟ್ಯಾಕ್ಸಿ ಚಾಲಕರಿಂದ 10 ದಿನಗಳ ಗಡುವು, ಅನಿರ್ದಿಷ್ಟಾವಧಿ ಧರಣಿ ಎಚ್ಚರಿಕೆ

October 14, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d