ಮಂಗಳೂರು: ನೀರುಮಾರ್ಗ, ಕುಡುಪು ಪರಿಸರದಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ. ಗುರುವಾರ ಮುಂಜಾನೆ ಸುಮಾರು 3:30ರ ವೇಳೆಗೆ ನೀರುಮಾರ್ಗ ಸಮೀಪದ ಕೆಲರೈ ಪ್ರದೇಶದಲ್ಲಿ ಅರಣ್ಯ ಇಲಾಖೆ ಅಳವಡಿಸಿದ್ದ ಬೋನಿಗೆ ಸೆರೆಯಾಗಿದೆ ಎಂದು ತಿಳಿದು ಬಂದಿದೆ.
ಚಿರತೆಯ ಸಂಚಾರದಿಂದ ಸ್ಥಳೀಯರು ಕಳೆದ ಕೆಲವು ದಿನಗಳಿಂದ ಭಯಭೀತರಾಗಿದ್ದರು. ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸ್ಥಳೀಯರ ಸಂಯುಕ್ತ ಕಾರ್ಯಾಚರಣೆಯಿಂದ ಚಿರತೆಯನ್ನು ಸೆರೆ ಹಿಡಿಯಲಾಗಿದೆ. ಚಿರತೆಯನ್ನು ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಸ್ಥಳಾಂತರಿಸುವ ಕಾರ್ಯ ಮುಂದುವರಿದಿದೆ ಎಂದು ತಿಳಿದು ಬಂದಿದೆ.
Discover more from Coastal Times Kannada
Subscribe to get the latest posts sent to your email.








Discussion about this post