ಶ್ರೀನಗರ: ಜಮ್ಮು- ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಇಂದು 35 ವರ್ಷದ ಟಿಕ್ ಟಾಕ್ ಕಲಾವಿದೆಯನ್ನು ಭಯೋತ್ಪಾದಕರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ದಾಳಿಯಲ್ಲಿ ಮಹಿಳೆಯ ಸೋದರಳಿಯ 10 ವರ್ಷದ ಬಾಲಕ ಕೂಡಾ ಗಾಯಗೊಂಡಿದ್ದಾನೆ. ರಾತ್ರಿ 7.55ರ ಸುಮಾರಿನಲ್ಲಿ ಭಯೋತ್ಪಾದಕರು ಅಮ್ರೀನ್ ಭಟ್ ಎಂಬ ಮಹಿಳೆಯ ಮನೆಯ ಮೇಲೆ ಉಗ್ರರು ಗುಂಡು ಹಾರಿಸಿದ್ದಾರೆ. ಗಾಯಗೊಂಡ ಸ್ಥಿಯಲ್ಲಿದ್ದ ಆಕೆಯನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ, ಅಲ್ಲಿ ಆಕೆ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದರು ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.
ಘಟನೆಯಲ್ಲಿ ಮಹಿಳೆಯ ಸೋದರಳಿಯ ಫರ್ಹಾನ್ ಜುಬೈರ್ ಕೂಡಾ ಗಾಯಗೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ದಾಳಿ ನಡೆದ ಪ್ರದೇಶಕ್ಕೆ ಭಾರಿ ಭದ್ರತೆ ಒದಗಿಸಲಾಗಿದೆ. ಉಗ್ರರನ್ನು ಪತ್ತೆ ಮಾಡಲು ಬಲೆ ಬೀಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post