ಉಳ್ಳಾಲ : ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ ನಡೆದ ಉಚ್ಚಿಲ್ ಮುಳ್ಳುಗುಡ್ಡೆ ನಿವಾಸಿ ಆರಿಫ್ ಹುಸೈನ್ ಅಲಿಯಾಸ್ “ಟ್ಯಾಬ್ಲೆಟ್ ಆರೀಫ್” ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊರ್ವ ಆರೋಪಿಯನ್ನು ಸೋಮವಾರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಜಾಲ್ ಶಾಂತಿನಗರ ನಿವಾಸಿ ಇಬ್ರಾಹಿಂ ಸಿನಾನ್ ಯಾನೆ ಚಿನ್ನು (21) ಬಂಧಿತ ಆರೋಪಿ ಎಂದು ತಿಳಿದುಬಂದಿದೆ.
ಈತ 2026ರ ಫೆಬ್ರವರಿ ತಿಂಗಳಲ್ಲಿ ಆರಿಫ್ ಹುಸೇನ್ ರನ್ನು ಕೊಲೆ ನಡೆಸಲು ಸಂಚು ರೂಪಿಸಿದ್ದ ವೇಳೆ ಹಾಜರಿದ್ದು, ಮಾ .27 ರಂದು ನಡೆದ ಕೊಲೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳಿಗೆ ಹಣಕಾಸಿನ ನೆರವು ನೀಡಿದ್ದ ಎಂದು ತನಿಖೆಯಿಂದ ತಿಳಿದು ಬಂದಿದೆ. ಈತ ಮೃತ ರೌಡಿಶೀಟರ್ ಟೊಪ್ಪಿ ನೌಫಾಲ್ ಸಹೋದರ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇದೀಗ ಮಂಗಳೂರಿನ ಬಜಾಲ್ ನಿವಾಸಿ ಮೊಹಮ್ಮದ್ ಇಬ್ರಾಹಿಂ ಸಿನಾನ್ @ ಚಿನ್ನು (21) ಎಂಬಾತನನ್ನು ಬಂಧಿಸಲಾಗಿದೆ. ಆರೋಪಿ ವಿರುದ್ಧ 2025ನೇ ಇಸವಿಯಲ್ಲಿ ಕಂಕನಾಡಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಲೆಯತ್ನ ಪ್ರಕರಣ ಹಾಗೂ 2024ನೇ ಇಸವಿಯಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಹಲ್ಲೆ ಪ್ರಕರಣ ಸೇರಿದಂತೆ ಒಟ್ಟು ಎರಡು ಪ್ರಕರಣಗಳು ದಾಖಲಾಗಿವೆ. ಆರೋಪಿ 2026ರ ಫೆಬ್ರವರಿ ತಿಂಗಳಲ್ಲಿ ಆರೀಫ್ ಹುಸೇನ್ ಅವರನ್ನು ಕೊಲೆ ಮಾಡಲು ಸಂಚು ರೂಪಿಸಿದ್ದ ತಂಡದಲ್ಲಿ ಸಕ್ರಿಯವಾಗಿದ್ದ. ಅಲ್ಲದೆ, ಆನಂತರ ಕೊಲೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳಿಗೆ ಹಣಕಾಸಿನ ನೆರವು ನೀಡಿರುವುದು ತನಿಖೆಯಿಂದ ತಿಳಿದುಬಂದಿದೆ. ಈತ ಕಳೆದ ನವೆಂಬರ್ ನಲ್ಲಿ ಉಪ್ಪಳದಲ್ಲಿ ಮೃತಪಟ್ಟಿದ್ದ ರೌಡಿಶೀಟರ್ “ಟೊಪ್ಪಿ ನೌಫಾಲ್” ಎಂಬಾತನ ಸಹೋದರನಾಗಿರುತ್ತಾನೆ.
ಈ ಕೊಲೆ ಪ್ರಕರಣದಲ್ಲಿ ಈಗಾಗಲೇ ರಿಫಾತ್ ಆಲಿ, ಇಬ್ರಾಹಿಂ ಖಲೀಲ್, ಅಶ್ಫಕ್ ಯಾನೆ ಜುಟ್ಟು ಅಶ್ಫಕ್, ಉಮ್ಮರ್ ಫಾರೂಕ್ ಇರ್ಫಾನ್, ಶಾಕೀರ್, ರಿಝ್ವಾನ್, ಇರ್ಷಾದ್ ಯಾನೆ ಅಕುಡು, ಹರ್ಷಾದ್, ನಿಶಾಕ್ ಯಾನೆ ಪುಚ್ಚೆ ನಿಶಾಕ್, ಬಿ. ಜುನೈದ್ ಯಾನೆ ಕೊಕ್ಕಡ ಜುನೈದ್ ಹಾಗೂ ಸುಹೇಲ್ ಯಾನೆ ಚಿಯಾ ಎಂಬವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿಗಳ ವಿರುದ್ಧ “ಕೋಕಾ ಕಾಯಿದೆ” ಅಡಿಯಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
Discover more from Coastal Times Kannada
Subscribe to get the latest posts sent to your email.







Discussion about this post