• About us
  • Contact us
  • Disclaimer
Tuesday, September 8, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕಾಂಗ್ರೆಸ್ಸಿಗರು ಪಕ್ಷ ಸೇರಿದ ಬಳಿಕ ಬಿಜೆಪಿಯಲ್ಲಿ ಅಶಿಸ್ತು , ಪಕ್ಷದಲ್ಲಿ ಅಶಿಸ್ತಿನ ಚಟುವಟಿಕೆಯಲ್ಲಿ ತೊಡಗಿದವರ ಬಾಲವನ್ನು ಕಟ್‌ ಮಾಡುತ್ತೇವೆ ಎಂದ ಈಶ್ವರಪ್ಪ

Coastal Times by Coastal Times
June 26, 2023
in ರಾಜ್ಯ
ಕಾಂಗ್ರೆಸ್ಸಿಗರು ಪಕ್ಷ ಸೇರಿದ ಬಳಿಕ ಬಿಜೆಪಿಯಲ್ಲಿ ಅಶಿಸ್ತು , ಪಕ್ಷದಲ್ಲಿ ಅಶಿಸ್ತಿನ ಚಟುವಟಿಕೆಯಲ್ಲಿ ತೊಡಗಿದವರ ಬಾಲವನ್ನು ಕಟ್‌ ಮಾಡುತ್ತೇವೆ ಎಂದ ಈಶ್ವರಪ್ಪ
41
VIEWS
WhatsappTelegramShare on FacebookShare on Twitter

ಬೆಂಗಳೂರು, ಜೂನ್‌ 26: ಕರ್ನಾಟಕದಲ್ಲಿನ ಹೀನಾಯ ಸೋಲಿನ ಬಳಿಕ ಬಿಜೆಪಿಯಲ್ಲಿ ಅಸಮಾಧಾನದ ಬೆಂಕಿ ಹೊತ್ತಿಕೊಂಡಿದೆ. ಪಕ್ಷದ ಕೆಲ ಮುಖಂಡರು ತಮ್ಮದೇ ಪಕ್ಷದ ನಾಯಕರ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸುತ್ತಿದ್ದಾರೆ. ಕೆಲವರು ಹೊಂದಾಣಿಕೆ ರಾಜಕಾರಣದ ಗೂಬೆ ಕೂರಿಸಿದರೆ, ಇನ್ನು ಕೆಲವರು ಪಕ್ಷ ವಿರೋಧ ಚಟುವಟಕೆ ಬಗ್ಗೆ ಆರೋಪಿಸಿದ್ದಾರೆ. ಇಂತಹ ಸಂದರ್ಭದಲ್ಲೇ, ಕೆಎಸ್‌ ಈಶ್ವರಪ್ಪ ಮತ್ತೊಂದು ಬಾಂಬ್‌ ಸಿಡಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಈ ಹಿಂದೆ ಶಿಸ್ತಿನ ಪಕ್ಷವಾಗಿತ್ತು. ಆದರೆ, ಈಗ ಪಕ್ಷದಲ್ಲಿ ಅಶಿಸ್ತಿನ ವಾತಾವರಣವಿದೆ. ಕಾಂಗ್ರೆಸ್‌ ಪಕ್ಷದಿಂದ ಬಿಜೆಪಿಗೆ ಬಂದಿರುವ ವಲಸಿಗರಿಂದ ಅಶಿಸ್ತು ಮೂಡಿದೆ. ಪಕ್ಷದಲ್ಲಿ ಅಶಿಸ್ತಿನ ಚಟುವಟಿಕೆಯಲ್ಲಿ ತೊಡಗಿದವರ ಬಾಲವನ್ನು ಕಟ್‌ ಮಾಡುತ್ತೇವೆ ಎಂದು ಹೇಳಿದ್ದಾರೆ. ಕಳೆದ ತಿಂಗಳು ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಆಪರೇಷನ್‌ ಕಮಲ ಬಿಜೆಪಿ ಗೆಲುವಿಗೆ ಮುಳುವಾಯಿತು. ಕಾಂಗ್ರೆಸ್‌ ಶಾಸಕರನ್ನು ಪಕ್ಷಕ್ಕೆ ಕರೆದುಕೊಂಡು ಬಂದೆವು. ಅದು ನಮ್ಮ ಸೋಲಿಗೆ ಕಾರಣವಾಗಿದೆ. ನಾವು ಮಾಡಿದ್ದನ್ನು ನಾವೇ ಅನುಭವಿಸಬೇಕಾಗಿದೆ ಎಂದು ಈಶ್ವರಪ್ಪ ಆರೋಪಿಸಿದ್ದಾರೆ.

ಮೋಸ ಮಾಡುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ವಿಧಾನಸಭೆ ಚುನಾವಣೆಗೂ ಮುನ್ನ ಪ್ರಣಾಳಿಕೆಯಲ್ಲಿದ್ದ ಐದು ಗ್ಯಾರಂಟಿಗಳ ಬಗ್ಗೆ ಈವರೆಗೂ ಗೊಂದಲ ಬಗೆ ಹರಿದಿಲ್ಲ. ಗ್ಯಾರಂಟಿಳನ್ನು ಅನುಷ್ಠಾನ ಮಾಡುತ್ತೇವೆ ಎನ್ನುತ್ತಾ, ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವಂತ ಕೆಲಸ ಮಾಡುತ್ತಿದೆ ಎಂದು ಈಶ್ವರಪ್ಪ ಕಿಡಿಕಾರಿದರು.

ಮೊದಲ ಕ್ಯಾಬಿನೇಟ್​ನಲ್ಲೇ ನಿರುದ್ಯೋಗಿ ಯುವಕರಿಗೆ ಕಾಂಗ್ರೆಸ್ ಸರ್ಕಾರ ಮೋಸ ಮಾಡಿದೆ. ಕೇಂದ್ರ ಸರ್ಕಾರ ಉಚಿತವಾಗಿ ಅಕ್ಕಿ ಕೊಡುತ್ತಿರುವ ವಿಚಾರದಲ್ಲಿ ಯಾರೊಬ್ಬರೂ ಅಭಿನಂದನೆ ಸಲ್ಲಿಸುತ್ತಿಲ್ಲ. ಆದರೆ ಕೇಂದ್ರ ಅಕ್ಕಿ ನೀಡುತ್ತಿಲ್ಲ ಎಂದು ಗೂಬೆ ಕೂರಿಸುತ್ತಿದ್ದಾರೆ. ಸಚಿವ ರಮೇಶ್ ಜಾರಕಿಹೊಳಿ ನಾಚಿಕೆಗೇಡಿನ‌ ಹೇಳಿಕೆ ನೀಡುತ್ತಾರೆ. ಇವರಿಗೆ ಸ್ವಲ್ಪವಾದರೂ ಜವಾಬ್ದಾರಿ ಇದೆಯಾ? ಎಂದು ಪ್ರಶ್ನಿಸಿದರು.

ಸರ್ಕಾರದ ಗ್ಯಾರಂಟಿ ಭರವಸೆಗಳ ವಿರುದ್ಧ ರಾಜ್ಯದ ಜನ ಆಕ್ರೋಶಗೊಂಡಿದ್ದಾರೆ. ಮಹಿಳೆಯರಿಗೆ ಗೃಹಲಕ್ಷ್ಮೀ, ಗೃಹಜ್ಯೋತಿ ಯೋಜನೆಗಳ ಕುರಿತು ಇನ್ನೂ ಸ್ಪಷ್ಟತೆ ಸಿಕ್ಕಿಲ್ಲ. ಈ ಎಲ್ಲ ಯೋಜನೆಗಳ ಅನುಷ್ಠಾನಕ್ಕೆ ಹಣ ಯಾವ ರೀತಿ ಹೊಂದಿಸುತ್ತಾರೆ ಎಂದು ಈವರೆಗೂ ಸ್ಪಷ್ಟಪಡಿಸಿಲ್ಲ. ಕಾಂಗ್ರೆಸ್ ಸರ್ಕಾರದ ಈ ನ್ಯೂನತೆಗಳ ವಿರುದ್ಧ ಬಿಜೆಪಿ ಹೋರಾಟ ಹಮ್ಮಿಕೊಳ್ಳಲಿದೆ. ವಿದ್ಯುತ್ ದರ ಏರಿಕೆ ವಿಚಾರದಲ್ಲಿ ಸರ್ಕಾರ ಸ್ಪಷ್ಟನೆ ನೀಡಬೇಕು. ಮತಾಂತರ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆ ಸೇರಿದಂತೆ ನಾವು ಜಾರಿ ಮಾಡಿದ ಕಾಯ್ದೆಗಳನ್ನು ವಾಪಸ್ ತೆಗೆದುಕೊಳ್ಳಲು ಕಾಂಗ್ರೆಸ್ ಹೊರಟಿದೆ ಎಂದು ಆರೋಪಿಸಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಪಳ್ಳಿಯಬ್ಬ ಕೊಲೆ ಪ್ರಕರಣದ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ 5ನೇ ಆರೋಪಿ ಅಥಾವುಲ್ಲಗೆ ಹೈಕೋರ್ಟ್ ಜಾಮೀನು

Next Post

ಮಂಗಳೂರು: ಸರಗಳ್ಳತನ ಹಾಗೂ ದ್ವಿಚಕ್ರ ವಾಹನ ದೋಚುತ್ತಿದ್ದ ಖತರ್ನಾಕ್ ಕಳ್ಳರಿಬ್ಬರ ಬಂಧನ, 13.82 ಲಕ್ಷ ರೂ.ಮೌಲ್ಯದ ಸೊತ್ತು ವಶ

Related Posts

ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿಧನ
ರಾಜ್ಯ

ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿಧನ

August 19, 2026
27
ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ
ಆರೋಗ್ಯ

ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

August 12, 2026
40
Next Post
ಮಂಗಳೂರು: ಸರಗಳ್ಳತನ ಹಾಗೂ ದ್ವಿಚಕ್ರ ವಾಹನ ದೋಚುತ್ತಿದ್ದ ಖತರ್ನಾಕ್ ಕಳ್ಳರಿಬ್ಬರ ಬಂಧನ, 13.82 ಲಕ್ಷ ರೂ.ಮೌಲ್ಯದ ಸೊತ್ತು ವಶ

ಮಂಗಳೂರು: ಸರಗಳ್ಳತನ ಹಾಗೂ ದ್ವಿಚಕ್ರ ವಾಹನ ದೋಚುತ್ತಿದ್ದ ಖತರ್ನಾಕ್ ಕಳ್ಳರಿಬ್ಬರ ಬಂಧನ, 13.82 ಲಕ್ಷ ರೂ.ಮೌಲ್ಯದ ಸೊತ್ತು ವಶ

Discussion about this post

Recent News

ಮಲ್ಪೆ: ಹೂಡೆ ಸಮೀಪ ಇಂದು ಬೆಳಿಗ್ಗೆ ನವಜಾತ ಶಿಶುವೊಂದು ರಸ್ತೆ ಬದಿಯಲ್ಲಿ ಎಸೆದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮಲ್ಪೆ: ಹೂಡೆ ಸಮೀಪ ಇಂದು ಬೆಳಿಗ್ಗೆ ನವಜಾತ ಶಿಶುವೊಂದು ರಸ್ತೆ ಬದಿಯಲ್ಲಿ ಎಸೆದ ಸ್ಥಿತಿಯಲ್ಲಿ ಪತ್ತೆಯಾಗಿದೆ.

September 7, 2026
36
ಮೂಡಾ ಅಧ್ಯಕ್ಷರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಅಭಿನಂದನೆ

ಮೂಡಾ ಅಧ್ಯಕ್ಷರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಅಭಿನಂದನೆ

September 7, 2026
20
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಲ್ಪೆ: ಹೂಡೆ ಸಮೀಪ ಇಂದು ಬೆಳಿಗ್ಗೆ ನವಜಾತ ಶಿಶುವೊಂದು ರಸ್ತೆ ಬದಿಯಲ್ಲಿ ಎಸೆದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮಲ್ಪೆ: ಹೂಡೆ ಸಮೀಪ ಇಂದು ಬೆಳಿಗ್ಗೆ ನವಜಾತ ಶಿಶುವೊಂದು ರಸ್ತೆ ಬದಿಯಲ್ಲಿ ಎಸೆದ ಸ್ಥಿತಿಯಲ್ಲಿ ಪತ್ತೆಯಾಗಿದೆ.

September 7, 2026
ಮೂಡಾ ಅಧ್ಯಕ್ಷರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಅಭಿನಂದನೆ

ಮೂಡಾ ಅಧ್ಯಕ್ಷರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಅಭಿನಂದನೆ

September 7, 2026
ಮಂಗಳೂರು-ಗೋವಾ ಕ್ರೂಸ್ ಸೇವೆ, ಹೌಸ್ ಬೋಟ್ ಆರಂಭಕ್ಕೆ ಚಿಂತನೆ, ಕ್ಯಾಸಿನೊ ತೆರೆಯುವ ಪ್ರಸ್ತಾವನೆ ಇಲ್ಲ – ಸಚಿವ ಕೆ.ಜೆ. ಜಾರ್ಜ್

ಮಂಗಳೂರು-ಗೋವಾ ಕ್ರೂಸ್ ಸೇವೆ, ಹೌಸ್ ಬೋಟ್ ಆರಂಭಕ್ಕೆ ಚಿಂತನೆ, ಕ್ಯಾಸಿನೊ ತೆರೆಯುವ ಪ್ರಸ್ತಾವನೆ ಇಲ್ಲ – ಸಚಿವ ಕೆ.ಜೆ. ಜಾರ್ಜ್

September 7, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d