• About us
  • Contact us
  • Disclaimer
Thursday, June 4, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಸರಗಳ್ಳತನ ಹಾಗೂ ದ್ವಿಚಕ್ರ ವಾಹನ ದೋಚುತ್ತಿದ್ದ ಖತರ್ನಾಕ್ ಕಳ್ಳರಿಬ್ಬರ ಬಂಧನ, 13.82 ಲಕ್ಷ ರೂ.ಮೌಲ್ಯದ ಸೊತ್ತು ವಶ

Coastal Times by Coastal Times
June 26, 2023
in ಕ್ರೈಮ್ ನ್ಯೂಸ್
ಮಂಗಳೂರು: ಸರಗಳ್ಳತನ ಹಾಗೂ ದ್ವಿಚಕ್ರ ವಾಹನ ದೋಚುತ್ತಿದ್ದ ಖತರ್ನಾಕ್ ಕಳ್ಳರಿಬ್ಬರ ಬಂಧನ, 13.82 ಲಕ್ಷ ರೂ.ಮೌಲ್ಯದ ಸೊತ್ತು ವಶ
189
VIEWS
WhatsappTelegramShare on FacebookShare on Twitter

ಮಂಗಳೂರು, ಜೂ.26: ದ.ಕ ಮತ್ತು ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಗಳ್ಳತನ ಮತ್ತು ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಕುಖ್ಯಾತ ಆರೋಪಿಗಳನ್ನು ಸುರತ್ಕಲ್ ಪೊಲೀಸರು ನಡೆಸಿದ ಕಾರ್ಯಾಚರಣೆ ಯಲ್ಲಿ ಬಂಧಿಸಿದ್ದಾರೆ.

ಬೆಳ್ಳಂಬೆಳಗ್ಗೆ ಮನೆಯಂಗಳದ ಬಾವಿಯಿಂದ ನೀರು ಸೇದುತ್ತಿದ್ದ ವೃದ್ಧ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಕಸಿದು ಇಬ್ಬರು ಪರಾರಿಯಾಗಿದ್ದರು. ಜೂನ್ 2ರಂದು ಸುರತ್ಕಲ್ ಠಾಣೆ ವ್ಯಾಪ್ತಿಯ ತಡಂಬೈಲಿನಲ್ಲಿ ನಡೆದ ಈ ಪ್ರಕರಣದ ಬೆನ್ನು ಹತ್ತಿದ ಪೊಲೀಸರು ಇಬ್ಬರು ಕುಖ್ಯಾತ ಸರಕಳ್ಳರನ್ನು ಸೆರೆಹಿಡಿದಿದ್ದಾರೆ. ಮೂಲತಃ ಸುರತ್ಕಲ್ ಕಾಟಿಪಳ್ಳ ನಿವಾಸಿ, ತೊಕ್ಕೊಟ್ಟಿನ ಚೆಂಬುಗುಡ್ಡೆ, ಬಂಟ್ವಾಳದ ಕಲ್ಲಡ್ಕದಲ್ಲಿ ವಾಸ ಮಾಡಿಕೊಂಡಿದ್ದ ಹಬೀಬ್ ಹಸನ್ ಅಲಿಯಾಸ್ ಚೆಂಬುಗುಡ್ಡೆ ಹಬೀಬ್(42) ಮತ್ತು ಉಳ್ಳಾಲದ ಕೋಡಿ ನಿವಾಸಿ ಮಹಮ್ಮದ್ ಫೈಜಲ್ (35) ಬಂಧಿತರು.

ಬಂಧಿತರಿಂದ 12,48,550 ರೂ.ಮೌಲ್ಯದ ಚಿನ್ನಾಭರಣ ಮತ್ತು 1,34,000 ರೂ.ಮೌಲ್ಯದ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಂಗಳೂರು ನಗರ ಪೋಲಿಸ್ ಕಮೀಶನರ್ ಕುಲದೀಪ್ ಕುಮಾರ್ ಆರ್ ಜೈನ್ ಸೋಮವಾರ ತಿಳಿಸಿದ್ದಾರೆ.

ಆರೋಪಿಗಳ ಬಂಧನೊಂದಿಗೆ ಎರಡು ಜಿಲ್ಲೆಗಳಲ್ಲಿ ನಡೆದಿರುವ ಸರಗಳ್ಳತನ ಮತ್ತು ಮತ್ತು ದ್ವಿಚಕ್ರ ವಾಹನಗಳ ಕಳ್ಳತನ ಸೇರಿದಂತೆ 13 ಪ್ರಕರಣಗಳು ಪತ್ತೆಯಾಗಿವೆ. ಆರೋಪಿ ಹಬೀಬ್ ಹಸನ್ ಎಂಬಾತನು ಈ ಹಿಂದೆ ಎರಡೂ ಜಿಲ್ಲೆಗಳ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ 35ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಆರೋಪಿಯಾಗಿದ್ದ. ಇನ್ನೊಬ್ಬ ಆರೋಪಿ ಮಹಮ್ಮದ್ ಫೈಜಲ್ 15 ಪ್ರಕರಣಗಳಲ್ಲಿ ಆರೋಪ ಎದುರಿಸುತ್ತಿದ್ದ. ಈತ ಪ್ರಕರಣವೊಂದರಲ್ಲಿ ಜೈಲು ಸಜೆ ಅನುಭವಿಸಿ ಎಪ್ರಿಲ್ ನಲ್ಲಿ ಜೈಲಿನಿಂದ ಹೊರಬಂದಿದ್ದ ಸದ್ಯಕ್ಕೆ ಸುರತ್ಕಲ್ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದ ತನಿಖೆಯಲ್ಲಿ ಒಂಬತ್ತು ಕಡೆಯ ಸರ ಕಳ್ಳತನ ಮತ್ತು ನಾಲ್ಕು ದ್ವಿಚಕ್ರ ವಾಹನ ಕಳ್ಳತನ ಮಾಡಿದ್ದನ್ನು ಪತ್ತೆ ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಕಾಂಗ್ರೆಸ್ಸಿಗರು ಪಕ್ಷ ಸೇರಿದ ಬಳಿಕ ಬಿಜೆಪಿಯಲ್ಲಿ ಅಶಿಸ್ತು , ಪಕ್ಷದಲ್ಲಿ ಅಶಿಸ್ತಿನ ಚಟುವಟಿಕೆಯಲ್ಲಿ ತೊಡಗಿದವರ ಬಾಲವನ್ನು ಕಟ್‌ ಮಾಡುತ್ತೇವೆ ಎಂದ ಈಶ್ವರಪ್ಪ

Next Post

ನವಮಂಗಳೂರು ಬಂದರು: ಹೊಸ ಗೋದಾಮು ನಿರ್ಮಾಣ, ಎನ್ಎಂಪಿಎಯಿಂದ ಸಿಡಬ್ಲುಸಿ ಮತ್ತು ಎಸ್ಡಿಸಿಎಲ್ ಜತೆ ಒಪ್ಪಂದ

Related Posts

ವೆಬ್​ ಸೀರೀಸ್ ನೋಡಿ ಒಂದೇ ಕುಟುಂಬದ ನಾಲ್ವರನ್ನು ಕೊಂದ 17ರ ಬಾಲಕ, ಕೊನೆಗೂ ಸಿಕ್ಕಿ ಬಿದ್ದ
ಕ್ರೈಮ್ ನ್ಯೂಸ್

ವೆಬ್​ ಸೀರೀಸ್ ನೋಡಿ ಒಂದೇ ಕುಟುಂಬದ ನಾಲ್ವರನ್ನು ಕೊಂದ 17ರ ಬಾಲಕ, ಕೊನೆಗೂ ಸಿಕ್ಕಿ ಬಿದ್ದ

May 30, 2026
93
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ ಪರಾರಿಯಾಗಿದ್ದ ಆರೋಪಿಗಳ ಬಂಧನ
ಕ್ರೈಮ್ ನ್ಯೂಸ್

ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ ಪರಾರಿಯಾಗಿದ್ದ ಆರೋಪಿಗಳ ಬಂಧನ

May 27, 2026
91
Next Post
ನವಮಂಗಳೂರು ಬಂದರು: ಹೊಸ ಗೋದಾಮು ನಿರ್ಮಾಣ, ಎನ್ಎಂಪಿಎಯಿಂದ ಸಿಡಬ್ಲುಸಿ ಮತ್ತು ಎಸ್ಡಿಸಿಎಲ್ ಜತೆ ಒಪ್ಪಂದ

ನವಮಂಗಳೂರು ಬಂದರು: ಹೊಸ ಗೋದಾಮು ನಿರ್ಮಾಣ, ಎನ್ಎಂಪಿಎಯಿಂದ ಸಿಡಬ್ಲುಸಿ ಮತ್ತು ಎಸ್ಡಿಸಿಎಲ್ ಜತೆ ಒಪ್ಪಂದ

Discussion about this post

Recent News

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

June 3, 2026
30
ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

June 2, 2026
75
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

June 3, 2026
ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

June 2, 2026
ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

June 1, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d