• About us
  • Contact us
  • Disclaimer
Friday, August 14, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

Coastal Times by Coastal Times
June 26, 2026
in ಕರಾವಳಿ
ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್
73
VIEWS
WhatsappTelegramShare on FacebookShare on Twitter

ಮಂಗಳೂರು, ಜೂ.25: ನಗರದ ಖ್ಯಾತ ರಿಯಲ್ ಎಸ್ಟೇಟ್ ಸಂಸ್ಥೆ ‘ರೋಹನ್ ಕಾರ್ಪೊರೇಷನ್’ ವತಿಯಿಂದ ಅಡ್ಯಾರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿದ್ದ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಭವ್ಯ ಸಮಾರಂಭದಲ್ಲಿ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ವಿಶೇಷ ಅತಿಥಿಯಾಗಿ ಭಾಗವಹಿಸಿದ್ದರು

ಈ ಭವ್ಯ ಸಮಾರಂಭದಲ್ಲಿ ಗಣ್ಯರು, ಉದ್ಯಮ ಕ್ಷೇತ್ರದ ದಿಗ್ಗಜರು, ಉದ್ಯಮಿಗಳು, ವಿಐಪಿಗಳು ಮತ್ತು ಆಹ್ವಾನಿತರು ಪಾಲ್ಗೊಂಡಿದ್ದರು. ಇದು ನಗರದಲ್ಲಿ ಆಯೋಜಿಸಲಾದ ಅತ್ಯಂತ ಪ್ರತಿಷ್ಠಿತ ಕಾರ್ಯಕ್ರಮಗಳಲ್ಲಿ ಒಂದಾಗಿ ಗುರುತಿಸಿಕೊಂಡಿತು. ಸಂಜೆ 5 ಗಂಟೆಗೆ ಪ್ರಾರಂಭವಾದ ಈ ಕಾರ್ಯಕ್ರಮ ರಾತ್ರಿ 9 ಗಂಟೆಯವರೆಗೆ ನಡೆಯಿತು. ಮನರಂಜನೆ, ಸಂಸ್ಕೃತಿ, ಉದ್ಯಮಶೀಲತೆ ಮತ್ತು ಸಮುದಾಯದ ಒಗ್ಗಟ್ಟಿನ ಸಂಕೇತವಾಗಿ ಈ ವೇದಿಕೆ ಕಂಗೊಳಿಸಿತು. ಕಟ್ಟುನಿಟ್ಟಾದ ಪ್ರವೇಶ ಪತ್ರಗಳ ಮೂಲಕ ಅತಿಥಿಗಳನ್ನು ಆಹ್ವಾನಿಸಲಾಗಿತ್ತು.

ಸಾಂಸ್ಕೃತಿಕ ವೈಭವ – ಸಲ್ಮಾನ್ ಅಲಿ ಲೈವ್ ಶೋ : ಕಾರ್ಯಕ್ರಮದ ಆರಂಭದಲ್ಲಿ ಕರಾವಳಿಯ ಪ್ರಸಿದ್ಧ ಕಲಾ ತಂಡಗಳಿಂದ ಆಕರ್ಷಕ ಸಾಂಸ್ಕೃತಿಕ ಪ್ರದರ್ಶನಗಳು ಜರುಗಿದವು. ಇದರ ಬೆನ್ನಲ್ಲೇ ‘ಇಂಡಿಯನ್ ಐಡಲ್’ ವಿಜೇತ ಪ್ರಸಿದ್ಧ ಗಾಯಕ ಸಲ್ಮಾನ್ ಅಲಿ ತಮ್ಮ ಅದ್ಭುತ ಕಂಠಸಿರಿಯ ಮೂಲಕ ನೆರೆದಿದ್ದ ಪ್ರೇಕ್ಷಕರನ್ನು ರಂಜಿಸಿದರು.

ರೋಹನ್ ಮರೀನಾ ಒನ್’ ಚಾಲನೆ: ‘ ಇದೇ ಸಂದರ್ಭ ರೋಹನ್ ಕಾರ್ಪೊರೇಶನ್‌ನ ಐಷಾರಾಮಿ ಸಮುದ್ರ ತೀರ ವಸತಿ ಯೋಜನೆ ‘ರೋಹನ್ ಮರೀನಾ ಒನ್’ ಅನ್ನು ಶಾರುಖ್ ಖಾನ್ ಸಮ್ಮುಖದಲ್ಲಿ ಅನಾವರಣಗೊಳಿಸಲಾಯಿತು. ಕರಾವಳಿ ತೀರದಲ್ಲಿ ಅತ್ಯುತ್ತಮ ಜೀವನಶೈಲಿಯನ್ನು ಒದಗಿಸುವ ನಿಟ್ಟಿನಲ್ಲಿ ಕಂಪನಿಯು ಕೈಗೊಂಡ ಮತ್ತೊಂದು ಹೆಜ್ಜೆಯಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ವ್ಯವಸ್ಥಾಪಕ ನಿರ್ದೇಶಕ ಡಾ. ರೋಹನ್ ಮೊಂತೇರೊ, “ಕನಸುಗಾರನಾಗಿ ಪ್ರಾರಂಭಿಸಿ ಜಾಗತಿಕ ಐಕಾನ್ ಆಗಿ ಬೆಳೆದ ಶಾರುಖ್ ಖಾನ್ ಅವರ ಪ್ರಯಾಣವು ಲಕ್ಷಾಂತರ ಜನರಿಗೆ ಸ್ಫೂರ್ತಿಯಾಗಿದೆ. ನಮ್ಮ ನಗರ ಮತ್ತು ನಮ್ಮ ಕಂಪನಿಯನ್ನು ಪ್ರತಿನಿಧಿಸುವ ಪರಿಶ್ರಮದ ಮನೋಭಾವವನ್ನು ನಾವು ಇಂದು ಸಂಭ್ರಮಿಸುತ್ತಿದ್ದೇವೆ. ಸಾಧ್ಯತೆಗಳ ಮೇಲೆ ನಂಬಿಕೆ ಇಡುವ ಶಕ್ತಿಯೇ ಈ ಕಾರ್ಯಕ್ರಮದ ಉದ್ದೇಶ” ಎಂದು ಹೇಳಿದರು.

ನಿರ್ದೇಶಕ ಡಿಯೋನ್ ಮೊಂತೇರೊ ಮಾತನಾಡುತ್ತಾ, “ಮಂಗಳೂರು ಎಂದೆಂದಿಗೂ ನೆನಪಿಟ್ಟುಕೊಳ್ಳುವಂತಹ ಕಾರ್ಯಕ್ರಮವನ್ನು ರೂಪಿಸುವುದು ನಮ್ಮ ದೃಷ್ಟಿಯಾಗಿತ್ತು. ಅತಿಥಿಗಳ ಅಭೂತಪೂರ್ವ ಪ್ರತಿಕ್ರಿಯೆ ಮತ್ತು ಶಾರುಖ್ ಖಾನ್ ಅವರ ಉಪಸ್ಥಿತಿಯು ನಮ್ಮ ಕಂಪನಿಯ ಪ್ರಯಾಣದ ಮೈಲಿಗಲ್ಲಾಗಿದೆ” ಎಂದು ಸಂತಸ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಮುಖ್ಯ ಆಕರ್ಷಣೆಯಾದ ಸಂವಾದ ಮತ್ತು ಪ್ರಶ್ನೋತ್ತರ ಅವಧಿಯಲ್ಲಿ ಶಾರುಖ್ ಖಾನ್ ಅವರು ಡಾ. ರೋಹನ್ ಮೊಂತೇರೊ ಮತ್ತು ಡಿಯೋನ್ ಮೊಂತೇರೊ ಅವರೊಂದಿಗೆ ಪಾಲ್ಗೊಂಡರು. ಮಹತ್ವಾಕಾಂಕ್ಷೆ, ಪರಿಶ್ರಮ, ನಾಯಕತ್ವ ಕುರಿತು ಅವರು ಹಂಚಿಕೊಂಡ ವಿಚಾರಗಳು ಪ್ರೇಕ್ಷಕರಿಗೆ ಸ್ಫೂರ್ತಿಯನ್ನು ನೀಡಿದವು.

‘‘ನಮಸ್ಕಾರ ಕುಡ್ಲಾ.., ಎಂಚ ಉಲ್ಲಾರ್ ’’ ಎಂದು ಮಾತು ಆರಂಭಿಸಿದ ಶಾರೂಖ್ ಖಾನ್ ಅವರು ಮಂಗಳೂರಿನಲ್ಲಿ ತನ್ನ ಅಜ್ಜನ ಮನೆಯಲ್ಲಿ ತಾನು ಚಿಕ್ಕವನಿದ್ದಾಗ ಕಳೆದ ದಿನಗಳನ್ನು ನೆನಪಿಸಿಕೊಂಡರು. ತಮ್ಮ ಸಹಜ ಹಾಸ್ಯಪ್ರಜ್ಞೆ ಮತ್ತು ವರ್ಚಸ್ಸಿನಿಂದ ಶಾರುಖ್ ಖಾನ್ ಪ್ರೇಕ್ಷಕರನ್ನು ರಂಜಿಸಿದರು. ಮಂಗಳೂರಿನ ಬಗ್ಗೆ ಮಾತನಾಡಿದ ಅವರು, ಈ ನಗರಕ್ಕೆ ಭೇಟಿ ನೀಡುತ್ತಿರುವುದು ಸಂತಸ ತಂದಿದೆ. ಇಲ್ಲಿನ ಜನರು, ಸಂಸ್ಕೃತಿ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಮಂಗಳೂರು ಬೆಳೆಯುತ್ತಿರುವ ವೇಗವನ್ನು ಶ್ಲಾಘಿಸಿದರು.  ಯುವಕರಿಗೆ ದೊಡ್ಡ ಕನಸು ಕಾಣಿ, ಕಠಿಣ ಪರಿಶ್ರಮ ಪಡಿ ಮತ್ತು ನಿಮ್ಮ ಸಾಮರ್ಥ್ಯವನ್ನು ನಂಬಿ ಎಂದು ಕಿವಿಮಾತು ಹೇಳಿದರು.

ಮತ್ತೆ ಮತ್ತೆ ಮಂಗಳೂರಿಗೆ ಬರಲು ಆಸೆ: ರೋಹನ್ ಮೊಂತೇರೊ ತಮ್ಮನ್ನು ಮಂಗಳೂರಿನ ಬಗ್ಗೆ ಪರಿಚಯಿಸಿದ್ದನ್ನು ನೆನಪಿಸಿಕೊಂಡ ಶಾರುಖ್ ಖಾನ್, ಈ ಬಾರಿ ಹಳೆಯ ನೆನಪುಗಳು ಹೆಚ್ಚು ಇಲ್ಲದಿದ್ದರೂ, ಮುಂದಿನ ದಿನಗಳಲ್ಲಿ ಮತ್ತೆ ಮತ್ತೆ ಮಂಗಳೂರಿಗೆ ಬಂದು ಹೊಸ ನೆನಪುಗಳನ್ನು ಕಟ್ಟಿಕೊಳ್ಳಲು ಬಯಸುತ್ತೇನೆ ಎಂದರು.

ಮಂಗಳೂರಿನ ಸಂಸ್ಕೃತಿ, ಭಾಷೆ ಹಾಗೂ ಜನರ ಆತಿಥ್ಯವನ್ನು ಮುಕ್ತಕಂಠದಿಂದ ಪ್ರಶಂಸಿಸಿದ ಅವರು, ಮುಂದೆ ಹೆಚ್ಚು ಸಮಯ ತೆಗೆದುಕೊಂಡು ಇಲ್ಲಿ ಬಂದು ನಿಮ್ಮ ಸಂಸ್ಕೃತಿಯನ್ನು ಇನ್ನಷ್ಟು ತಿಳಿದುಕೊಳ್ಳುತ್ತೇನೆ. ನಿಮ್ಮ ಭಾಷೆ ನನಗೆ ತುಂಬಾ ಇಷ್ಟವಾಯಿತು. ಮುಂಬೈನಲ್ಲಿಯೂ ಮಂಗಳೂರಿನ ಅನೇಕ ಜನರಿದ್ದಾರೆ ಎಂದು ಹೇಳಿದರು.

ವೇದಿಕೆಯಲ್ಲಿ ಹಾಸ್ಯ ಚಟಾಕಿ ಹಾರಿಸಿದ ಅವರು, ನನ್ನ ಮಗಳಿಗೆ ಕಳುಹಿಸಲು ಮಂಗಳೂರಿನ ವಿಡಿಯೊಗಳನ್ನು ತೆಗೆದುಕೊಂಡಿದ್ದೇನೆ. ರೋಹನ್ ಅವರು ಸಮುದ್ರಕ್ಕೆ ಮುಖಮಾಡಿದ ಮನೆಗೆ ಬರಬೇಕು ಎಂದು ಆಹ್ವಾನಿಸಿದ್ದಾರೆ. ಹಾಗಾಗಿ ಮುಂದಿನ ದಿನಗಳಲ್ಲಿ ಮಂಗಳೂರಿಗೆ ಆಗಾಗ ಬರುತ್ತೇನೆ. ಇಲ್ಲಿನ ರುಚಿಕರವಾದ ನೀರ್ ದೋಸೆ ಸವಿಯುತ್ತೇನೆ ಎಂದು ಹೇಳುತ್ತಿದ್ದಂತೆ ಸಭಾಂಗಣದಲ್ಲಿ ಕರತಾಡನ ಮೊಳಗಿತು.

ಕಾರ್ಯಕ್ರಮವನ್ನು ಸಾಹಿಲ್ ಜಹೀರ್ ಅವರು ಸ್ವಾಗತಿಸಿದರು ಮತ್ತು ಆರ್ ಜೆ ಡೋನಾ ಸೆಬಾಸ್ಟಿಯನ್ ಅವರು ಕಾರ್ಯಕ್ರಮವನ್ನು ಅತ್ಯಂತ ಆಕರ್ಷಕವಾಗಿ ನಿರೂಪಿಸಿದರು. ಈ ಸಂಜೆಯು ಮಂಗಳೂರಿನ ಕಾರ್ಪೊರೇಟ್ ಮತ್ತು ಸಾಂಸ್ಕೃತಿಕ ಇತಿಹಾಸದಲ್ಲಿ ಒಂದು ಸ್ಮರಣೀಯ ಕ್ಷಣವಾಗಿ ಉಳಿಯಿತು.

ರೋಹನ್ ಕಾರ್ಪೊರೇಷನ್ ಬಗ್ಗೆ: 1994 ರಲ್ಲಿ ಸ್ಥಾಪನೆಯಾದ ರೋಹನ್ ಕಾರ್ಪೊರೇಷನ್ ಮಂಗಳೂರಿನ ಅತ್ಯಂತ ವಿಶ್ವಾಸಾರ್ಹ ರಿಯಲ್ ಎಸ್ಟೇಟ್ ಸಂಸ್ಥೆಯಾಗಿದ್ದು, ಕಳೆದ ಮೂರು ದಶಕಗಳಲ್ಲಿ 25ಕ್ಕೂ ಹೆಚ್ಚು ಪ್ರಮುಖ ಯೋಜನೆಗಳನ್ನು ಪೂರ್ಣಗೊಳಿಸಿ 7,000ಕ್ಕೂ ಹೆಚ್ಚು ಕುಟುಂಬಗಳ ನಂಬಿಕೆಗೆ ಪಾತ್ರವಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!

Next Post

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

Related Posts

ರಾಜ್ಯದಲ್ಲಿ ತಂಬಾಕು, ನಿಕೋಟಿನ್ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಬಲಿಪಶುವಾಗದಂತೆ ಸ್ಪಷ್ಟ ಚೌಕಟ್ಟು ರಚಿಸುವಂತೆ ಕ್ಯಾಂಪ್ಕೋ ಆಗ್ರಹ
ಕರಾವಳಿ

ರಾಜ್ಯದಲ್ಲಿ ತಂಬಾಕು, ನಿಕೋಟಿನ್ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಬಲಿಪಶುವಾಗದಂತೆ ಸ್ಪಷ್ಟ ಚೌಕಟ್ಟು ರಚಿಸುವಂತೆ ಕ್ಯಾಂಪ್ಕೋ ಆಗ್ರಹ

August 13, 2026
14
ಸಾಮಾಜಿಕ ಭದ್ರತಾ ಪಿಂಚಣಿಗೆ ರೂ.32,000 ಆದಾಯ ಮಿತಿ : ಬಡವರ ಮೇಲೆ ಅನ್ಯಾಯ ದಾಖಲೆಗಳ ಹೆಸರಿನಲ್ಲಿ ಫಲಾನುಭವಿಗಳಿಗೆ ಕಿರುಕುಳ ನಿಲ್ಲಿಸಬೇಕು -ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್
ಕರಾವಳಿ

ಸಾಮಾಜಿಕ ಭದ್ರತಾ ಪಿಂಚಣಿಗೆ ರೂ.32,000 ಆದಾಯ ಮಿತಿ : ಬಡವರ ಮೇಲೆ ಅನ್ಯಾಯ ದಾಖಲೆಗಳ ಹೆಸರಿನಲ್ಲಿ ಫಲಾನುಭವಿಗಳಿಗೆ ಕಿರುಕುಳ ನಿಲ್ಲಿಸಬೇಕು -ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್

August 11, 2026
20
Next Post
ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

Discussion about this post

Recent News

ರಾಜ್ಯದಲ್ಲಿ ತಂಬಾಕು, ನಿಕೋಟಿನ್ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಬಲಿಪಶುವಾಗದಂತೆ ಸ್ಪಷ್ಟ ಚೌಕಟ್ಟು ರಚಿಸುವಂತೆ ಕ್ಯಾಂಪ್ಕೋ ಆಗ್ರಹ

ರಾಜ್ಯದಲ್ಲಿ ತಂಬಾಕು, ನಿಕೋಟಿನ್ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಬಲಿಪಶುವಾಗದಂತೆ ಸ್ಪಷ್ಟ ಚೌಕಟ್ಟು ರಚಿಸುವಂತೆ ಕ್ಯಾಂಪ್ಕೋ ಆಗ್ರಹ

August 13, 2026
14
ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

August 12, 2026
37
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ರಾಜ್ಯದಲ್ಲಿ ತಂಬಾಕು, ನಿಕೋಟಿನ್ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಬಲಿಪಶುವಾಗದಂತೆ ಸ್ಪಷ್ಟ ಚೌಕಟ್ಟು ರಚಿಸುವಂತೆ ಕ್ಯಾಂಪ್ಕೋ ಆಗ್ರಹ

ರಾಜ್ಯದಲ್ಲಿ ತಂಬಾಕು, ನಿಕೋಟಿನ್ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಬಲಿಪಶುವಾಗದಂತೆ ಸ್ಪಷ್ಟ ಚೌಕಟ್ಟು ರಚಿಸುವಂತೆ ಕ್ಯಾಂಪ್ಕೋ ಆಗ್ರಹ

August 13, 2026
ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

August 12, 2026
ಆಪರೇಷನ್ ತೂಫಾನ್: ಕರ್ನಾಟಕ ಗಡಿ ಮೂಲಕ ಕೇರಳಕ್ಕೆ ಭಾರೀ ಪ್ರಮಾಣದಲ್ಲಿ ಎಂಡಿಎಂಎ ಸಾಗಿಸಲು ಯತ್ನಿಸಿದ ಯುವಕ-ಯುವತಿಯ ಬಂಧನ

ಆಪರೇಷನ್ ತೂಫಾನ್: ಕರ್ನಾಟಕ ಗಡಿ ಮೂಲಕ ಕೇರಳಕ್ಕೆ ಭಾರೀ ಪ್ರಮಾಣದಲ್ಲಿ ಎಂಡಿಎಂಎ ಸಾಗಿಸಲು ಯತ್ನಿಸಿದ ಯುವಕ-ಯುವತಿಯ ಬಂಧನ

August 12, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d