ಮಂಗಳೂರು, ಜು.25: ಮಂಗಳೂರು ನಗರದಲ್ಲಿ ಮತ್ತೆ ಪಬ್ ಮೇಲೆ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಬಲ್ಮಠದ ಪಬ್ ಒಂದರಲ್ಲಿ ಪಿಯು ಕಾಲೇಜು ವಿದ್ಯಾರ್ಥಿಗಳು ಪಾರ್ಟಿಯಲ್ಲಿ ತೊಡಗಿದ್ದ ಮಾಹಿತಿ ಪಡೆದು ಬಜರಂಗದಳ ಕಾರ್ಯಕರ್ತರು ತಡೆ ಒಡ್ಡಿದ್ದಾರೆ. ಬಲ್ಮಠದ ರಿ-ಸೈಕಲ್ ದಿ ಲಾಂಜ್ ಪಬ್ ನಲ್ಲಿ ಮಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ಪಾರ್ಟಿ ನಡೆಸುತ್ತಿದ್ದರು. ಕಾಲೇಜಿನ ಫೇರ್ ವೆಲ್ ನೆಪದಲ್ಲಿ ಪಬ್ ನಲ್ಲಿ ಪದವಿ ವಿದ್ಯಾರ್ಥಿಗಳು ಪಾರ್ಟಿ ಆಯೋಜಿಸಿದ್ದರು. ಆದರೆ ಯುವಕ- ಯುವತಿಯರು ಕುಡಿದು ಮೋಜು ಮಸ್ತಿ ಮಾಡುತ್ತಿದ್ದಾರೆಂದು ಆರೋಪಿಸಿ ಬಜರಂಗದಳ ಕಾರ್ಯಕರ್ತರು ದಾಳಿ ದಾಳಿ ಮಾಡಿದ್ದು,
ಬಜರಂಗದಳ ಕಾರ್ಯಕರ್ತರು ಪಾರ್ಟಿ ನಿಲ್ಲಿಸುವಂತೆ ಸೂಚಿಸಿ ಬೈದು ವಿದ್ಯಾರ್ಥಿಗಳನ್ನ ಹೊರ ಕಳುಹಿಸಿದ್ದಾರೆ. ಬಳಿಕ ಪೊಲೀಸರು ಆಗಮಿಸಿದ್ದು ಬಜರಂಗದಳದ ಕಾರ್ಯಕರ್ತರನ್ನ ಚದುರಿಸಿದ್ದಾರೆ. ಅಲ್ಲದೆ, ಪಾರ್ಟಿ ನಿಲ್ಲಿಸುವಂತೆ ಪೊಲೀಸರು ಆಯೋಜಕರಿಗೆ ಸೂಚನೆ ನೀಡಿದ್ದಾರೆ. ಪಾರ್ಟಿಯನ್ನು ಅರ್ಧದಲ್ಲೇ ನಿಲ್ಲಿಸಿ ತುಂಡುಡುಗೆ ತೊಟ್ಟಿದ್ದ ವಿದ್ಯಾರ್ಥಿನಿಯರು ಹೊರಗೆ ತೆರಳಿದ್ದಾರೆ. ಪಾರ್ಟಿ ಮಾಡುತ್ತಿದ್ದವರನ್ನು ಅವಹೇಳನ ಮಾಡಿ ವಾಪಸ್ ಕಳಿಸಿದ್ದಾರೆ ಎಂದು ದೂರಲಾಗಿದೆ. 2009 ರ ಪಬ್ ದಾಳಿ ನಡೆದ ಅದೇ ಪಬ್ ಮೇಲೆ ಈಗ ಮತ್ತೆ ದಾಳಿ ನಡೆದಿದ್ದು, ಈಗ ಅದು ರಿಸೈಕಲ್ ಎಂದು ಹೆಸರು ಬದಲಾಯಿಸಿದ್ದು, ಹಿಂದೆ ಅಮ್ನೆಸಿಯ ಪಬ್ ಎಂದು ಗುರುತಿಸಲಾಗಿತ್ತು. ಬಳಿಕ ಪೊಲೀಸರು ಮಧ್ಯ ಪ್ರವೇಶಿಸಿ ಬಜರಂಗ ದಳದ ಕಾರ್ಯಕರ್ತರನ್ನು ಹೊರಗೆ ಕಳುಹಿಸಿದರು ಎಂದು ಮೂಲಗಳು ತಿಳಿಸಿವೆ.
Discover more from Coastal Times Kannada
Subscribe to get the latest posts sent to your email.
Discussion about this post