• About us
  • Contact us
  • Disclaimer
Monday, June 29, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪಬ್ ಮೇಲೆ ಯಾವುದೇ ದಾಳಿ ನಡೆದಿಲ್ಲ ಅಪ್ರಾಪ್ತ ಹುಡುಗ-ಹುಡುಗಿಯರು ಇದ್ದ ಕಾರಣಕ್ಕೆ ಹೊರಕ್ಕೆ ಕಳಿಸಿದ್ದಾರೆ : ಪೊಲೀಸ್ ಕಮಿಷನರ್

Coastal Times by Coastal Times
July 26, 2022
in ಕರಾವಳಿ
ಪಬ್ ಮೇಲೆ ಯಾವುದೇ ದಾಳಿ ನಡೆದಿಲ್ಲ ಅಪ್ರಾಪ್ತ ಹುಡುಗ-ಹುಡುಗಿಯರು ಇದ್ದ ಕಾರಣಕ್ಕೆ ಹೊರಕ್ಕೆ ಕಳಿಸಿದ್ದಾರೆ : ಪೊಲೀಸ್ ಕಮಿಷನರ್
194
VIEWS
WhatsappTelegramShare on FacebookShare on Twitter

ಮಂಗಳೂರು: ನಗರದ ಪಬ್ ಒಂದಕ್ಕೆ ನಿನ್ನೆ ರಾತ್ರಿ ಬಜರಂಗದಳ ಕಾರ್ಯಕರ್ತರು ದಾಳಿ ಮಾಡಿ ಪಾರ್ಟಿ ಮಾಡುತ್ತಿದ್ದ ಯುವಕ-ಯುವತಿಯರನ್ನು ಹೊರಕಳುಹಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮಾತನಾಡಿದ ಅವರು, “5-6 ಜನ ಯುವಕರು ಪಬ್​ಗೆ ಬಂದು ಅಪ್ರಾಪ್ತರಿಗೆ ಮದ್ಯ ಸರಬರಾಜು ಮಾಡುತ್ತಿರುವುದಕ್ಕೆ ಬೌನ್ಸರ್ ದಿನೇಶ್ ಎಂಬವರನ್ನು ಪ್ರಶ್ನಿಸಿದ್ದಾರೆ. ಬೌನ್ಸರ್ ಈ ವಿಚಾರವನ್ನು ಮ್ಯಾನೇಜರ್​ಗೆ ತಿಳಿಸಿದ ನಂತರ ವಿದ್ಯಾರ್ಥಿಗಳ ವಯಸ್ಸಿನ ಐಡಿ ಪ್ರೂಫ್​ ಕೇಳಿದ್ದಾರೆ. ಆ ಬಳಿಕ ವಿದ್ಯಾರ್ಥಿಗಳು ಹೊರಹೋಗಿದ್ದಾರೆ. ಇದರ ಮಾಹಿತಿ ತಿಳಿದ ತಕ್ಷಣ ಪೊಲೀಸ್​ ಅಧಿಕಾರಿಗಳು ಭೇಟಿ ನೀಡಿ ಅಹಿತಕರ ಘಟನೆ ನಡೆಯದಂತೆ ಕ್ರಮ ವಹಿಸಿದ್ದಾರೆ” ಎಂದರು. “ಬೌನ್ಸರ್ ನೀಡಿರುವ ಮಾಹಿತಿ ಪ್ರಕಾರ, ಪಬ್​ ಮೇಲೆ ಯಾವುದೇ ದಾಳಿ ಆಗಿಲ್ಲ. ಸಂಘಟನೆಯವರು ಬಂದು ಮಾಹಿತಿ ಕೇಳಿದ್ದಾರೆ. ನಿಖರವಾಗಿ ನಡೆದಿರುವುದೇನು ಎಂಬುದನ್ನು ತಿಳಿಯಲು ಪಬ್​ನ ಸಿಸಿಟಿವಿ ದೃಶ್ಯ ಪರಿಶೀಲಿಸಲಾಗುವುದು. ವಿದ್ಯಾರ್ಥಿಗಳ ಬಳಿಯೂ ನಡೆದ ಘಟನೆ ಬಗ್ಗೆ ಮಾಹಿತಿ ತೆಗೆದುಕೊಂಡು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಈ ರೀತಿ ಹೊರಗಿನಿಂದ ಬಂದು ಪರಿಶೀಲನೆ ಮಾಡಲು ಯಾರಿಗೂ ಅವಕಾಶ ಇಲ್ಲ. ಅಬಕಾರಿ ಮತ್ತು ಪೊಲೀಸ್ ಇಲಾಖೆ ನಿಯಮಿತವಾಗಿ ಪರಿಶೀಲಿಸುತ್ತದೆ. ಹೊರಗಿನಿಂದ ಬಂದು ಪರಿಶೀಲನೆ ಮಾಡಿದ ಬಗ್ಗೆ ಪರಿಶೀಲಿಸಲಾಗುವುದು” ಎಂದು ಅವರು ತಿಳಿಸಿದರು.

“ಕೆಲವೆಡೆ ಅಪ್ರಾಪ್ತರಿಗೆ ಮದ್ಯ ನೀಡುವ ಬಗ್ಗೆ ಮಾಹಿತಿ ಇತ್ತು. ಇದನ್ನು ನಿಯಮಿತವಾಗಿ ಪರಿಶೀಲನೆ ಮಾಡಲಾಗುತ್ತಿದೆ. ಇತ್ತೀಚೆಗೆ ನಡೆದ ವಿದ್ಯಾರ್ಥಿಗಳ ಕಿಸ್ಸಿಂಗ್ ಪ್ರಕರಣದ ಹಿನ್ನೆಲೆಯಲ್ಲಿ ರೆಸ್ಟೋರೆಂಟ್ ಪಬ್​ಗೆ ಅಪ್ರಾಪ್ತರು ಬಂದರೆ ಅಪರಾಧಗಳು ನಡೆಯುವ ಸಾಧ್ಯತೆ ಇರುವುದರಿಂದ ಅದನ್ನು ಪರಿಶೀಲನೆ ನಡೆಸಲಾಗುವುದು. ಕಿಸ್ಸಿಂಗ್ ಪ್ರಕರಣದ ವಿದ್ಯಾರ್ಥಿಗಳಿಗೂ ಈ ವಿದ್ಯಾರ್ಥಿಗಳಿಗೂ ಸಂಬಂಧ ಇಲ್ಲ. ಕಿಸ್ಸಿಂಗ್ ಪ್ರಕರಣದ ವಿದ್ಯಾರ್ಥಿಗಳು ಕಸ್ಟಡಿಗೆ ಹೋಗುವ ಕಾರಣ ಈ ಪಾರ್ಟಿ ನಡೆದಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿರುವ ಚರ್ಚೆಗಳಿಗೆ ಸಂಬಂಧ ಕಂಡುಬಂದಿಲ್ಲ.” “ಬಾರ್ ರೂಲ್ಸ್ ಪ್ರಕಾರ 21 ವರ್ಷದವರೆಗೆ ಮದ್ಯ ಸರಬರಾಜು ಅವಕಾಶ ಇಲ್ಲ. ಬಾರ್​ನವರು ಪರಿಶೀಲಿಸಿದಾಗ ವಿದ್ಯಾರ್ಥಿಗಳು ತೃತೀಯ ವರ್ಷದ ಪದವಿಯವರು ಎಂದು ಹೇಳಿದ್ದಾರೆ. ಅದು ಸಾಧಾರಣವಾಗಿ ಅದೇ ವರ್ಷಕ್ಕೆ ಬರುತ್ತದೆ. ಅದರಲ್ಲಿ ಅಪ್ರಾಪ್ತ ವಯಸ್ಕರಿದ್ದರೆ ಪರಿಶೀಲಿಸಲಾಗುವುದು” ಎಂದು ಕಮೀಷನರ್ ಹೇಳಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಬಲ್ಮಠ ರಿಸೈಕಲ್ ದಿ ಲಾಂಜ್ ಪಬ್ ಮೇಲೆ‌ ಬಜರಂಗದಳ ಕಾರ್ಯಕರ್ತರಿಂದ ಕಾಲೇಜು ವಿದ್ಯಾರ್ಥಿಗಳ ತುಂಡುಡುಗೆ ಪಾರ್ಟಿಗೆ ತಡೆ

Next Post

ಬೆಳ್ಳಾರೆ : ಬೈಕ್ ನಲ್ಲಿ ಬಂದ ದುಷ್ಕರ್ಮಿಗಳಿಂದ ಬಿಜೆಪಿ ಕಾರ್ಯಕರ್ತನ ಕಡಿದು ಕೊಲೆ, ಎರಡೇ ದಿನದಲ್ಲಿ ಪ್ರತೀಕಾರ,

Related Posts

‘ಸನಾತನಿ ಸಿಂಹ’ ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ ಕಮೆಂಟ್ ; ಆರೋಪಿ ಆನಂದ ಸೆರೆ
ಕರಾವಳಿ

‘ಸನಾತನಿ ಸಿಂಹ’ ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ ಕಮೆಂಟ್ ; ಆರೋಪಿ ಆನಂದ ಸೆರೆ

June 29, 2026
5
ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್
ಕರಾವಳಿ

ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

June 26, 2026
69
Next Post
ಬೆಳ್ಳಾರೆ : ಬೈಕ್ ನಲ್ಲಿ ಬಂದ ದುಷ್ಕರ್ಮಿಗಳಿಂದ ಬಿಜೆಪಿ ಕಾರ್ಯಕರ್ತನ ಕಡಿದು ಕೊಲೆ, ಎರಡೇ ದಿನದಲ್ಲಿ ಪ್ರತೀಕಾರ,

ಬೆಳ್ಳಾರೆ : ಬೈಕ್ ನಲ್ಲಿ ಬಂದ ದುಷ್ಕರ್ಮಿಗಳಿಂದ ಬಿಜೆಪಿ ಕಾರ್ಯಕರ್ತನ ಕಡಿದು ಕೊಲೆ, ಎರಡೇ ದಿನದಲ್ಲಿ ಪ್ರತೀಕಾರ,

Discussion about this post

Recent News

‘ಸನಾತನಿ ಸಿಂಹ’ ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ ಕಮೆಂಟ್ ; ಆರೋಪಿ ಆನಂದ ಸೆರೆ

‘ಸನಾತನಿ ಸಿಂಹ’ ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ ಕಮೆಂಟ್ ; ಆರೋಪಿ ಆನಂದ ಸೆರೆ

June 29, 2026
5
ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

June 26, 2026
39
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

‘ಸನಾತನಿ ಸಿಂಹ’ ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ ಕಮೆಂಟ್ ; ಆರೋಪಿ ಆನಂದ ಸೆರೆ

‘ಸನಾತನಿ ಸಿಂಹ’ ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ ಕಮೆಂಟ್ ; ಆರೋಪಿ ಆನಂದ ಸೆರೆ

June 29, 2026
ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

June 26, 2026
ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

June 26, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d