ಮಂಗಳೂರು, ಆಗಸ್ಟ್ 26: ಮುಸ್ಲಿಂ ವಿದ್ಯಾರ್ಥಿನಿ ಒಬ್ಬಳನ್ನು ಪ್ರೀತಿಸುತ್ತಿದ್ದಾನೆ ಎಂಬ ಕಾರಣಕ್ಕೆ ಕಾಸರಗೋಡು ಜಿಲ್ಲೆಯ ಉಪ್ಪಳ ಮೂಲದ ಮುಸ್ಲಿಂ ವಿದ್ಯಾರ್ಥಿಯನ್ನು ಅಪಹರಿಸಿ ಅಡ್ಯಾರಿನ ಫ್ಲಾಟ್ ಒಂದರಲ್ಲಿ ಕೂಡಿ ಹಾಕಿ ಹಲ್ಲೆಗೈದ ಘಟನೆ ನಡೆದಿದ್ದು, ಈ ಬಗ್ಗೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧಿಸಿ ಪೊಲೀಸರು ಆರು ಮಂದಿ ವಿದ್ಯಾರ್ಥಿಗಳು ಸೇರಿ 7 ಮಂದಿಯನ್ನು ಬಂಧಿಸಿದ್ದಾರೆ.
ಬಂಧಿತರನ್ನು ಪಾಣೆಮಂಗಳೂರು ಸಮೀಪದ ಆಲಡ್ಕದ ಇಬ್ರಾಹೀಂ ತಾಬೀಶ್ (19), ಗೂಡಿನ ಬಳಿಯ ಅಬ್ದುಲ್ಲಾ ಹನ್ನಾನ್ (19), ಸಜಿಪ ಮುನ್ನೂರು ಗ್ರಾಮದ ಶಕೀಫ್ (19), ಬಂಟ್ವಾಳ ಮೂಡ ಗ್ರಾಮದ ಶಾಹೀಕ್ (19), ಬಜಾಲ್ ನಂತೂರಿನ ಯುಪಿ ತನ್ವೀರ್ (20), ಬಜಾಲ್ ಫೈಸಲ್ ನಗರದ ಅಬ್ದುಲ್ ರಶೀದ್ (19), ಗೂಡಿನ ಬಳಿಯ ಮನ್ಸೂರ್ (37) ಎಂದು ಗುರುತಿಸಲಾಗಿದೆ.
ನಗರದ ಸೈಂಟ್ ಅಲೋಶಿಯಸ್ ಕಾಲೇಜಿನ ಎದುರಿನಿಂದ ಶಾಮೀರ್ ಹಾಗೂ ಇಬ್ರಾಹಿಂ ಫಾಶಿಂ ಎಂಬಿಬ್ಬರನ್ನು ಕಾರಿನಲ್ಲಿ ಅಪಹರಿಸಿದ್ದು, ಅಡ್ಯಾರಿನ ಫ್ಲಾಟ್ ಒಂದರಲ್ಲಿ ಕೂಡಿಹಾಕಿ ಹಲ್ಲೆ ನಡೆಸಿದ್ದರು. ಘಟನೆಯಲ್ಲಿ ಬಂಟ್ವಾಳದ ಎಸ್ಡಿಪಿಐ ಮುಖಂಡರೊಬ್ಬರ ಪುತ್ರನೂ ಭಾಗಿಯಾಗಿದ್ದ ಆರೋಪಗಳಿದ್ದವು. ಹಲ್ಲೆಗೀಡಾದ ಇಬ್ರಾಹಿಂ ಫಾಶಿಂ(19) ಕಾಸರಗೋಡು ಜಿಲ್ಲೆಯ ಉಪ್ಪಳ ನಿವಾಸಿಯಾಗಿದ್ದು, ಕಾಸರಗೋಡಿನಲ್ಲಿ ಆಸ್ಪತ್ಪೆಗೆ ದಾಖಲಾಗಿದ್ದ. ಸ್ವಧರ್ಮೀಯ ಯುವಕರೇ ಹಲ್ಲೆಗೈದು ಜೀವ ಬೆದರಿಕೆ ಹಾಕಿದ ಬಗ್ಗೆ ಮಂಗಳೂರಿನ ಬಂದರು ಠಾಣೆಯಲ್ಲಿ ಇಬ್ರಾಹಿಂ ಫಾಶಿಂ ದೂರು ನೀಡಿದ್ದು ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಇಬ್ರಾಹೀಂ ಫಾಹೀಮ್ ನೀಡಿದ ದೂರಿನಂತೆ ಬಂದರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
Discussion about this post