ಮಂಗಳೂರು: ಅಸ್ತ್ರ ಪ್ರೊಡಕ್ಷನ್ ಲಾಂಛನದಲ್ಲಿ ಸ್ವರಾಜ್ ಶೆಟ್ಟಿ, ನಿರ್ದೇಶನದಲ್ಲಿ ಲಂಚುಲಾಲ್ ಕೆ ಎಸ್ ನಿರ್ಮಾಣದಲ್ಲಿ ತಯಾರಾದ “ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ.
ನೆತ್ತರೆಕೆರೆ ಸಿನಿಮಾ ಸಿನಿಮಾರಂಗದಲ್ಲಿ ಹೊಸ ಸಂಚಲನವನ್ನು ಸೃಷ್ಟಿಸಲಿದೆ. ನೆತ್ತರೆಕೆರೆ ವಿಭಿನ್ನ ಬಗೆಯ ಕಮರ್ಷಿಯಲ್ ಚಿತ್ರವಾಗಿದೆ. ಪಾತ್ರಗಳು ಭಿನ್ನವಾಗಿದೆ. ಸಿನಿಮಾದ ಬಗ್ಗೆ ಪ್ರೇಕ್ಷಕರಲ್ಲಿ ಕಾತರ, ಕುತೂಹಲ ಹೆಚ್ಚಿದೆ. ಸಿನಿಮಾಕ್ಕೆ ಚೇಳಾರ್, ಮುಲ್ಕಿ, ಕಿನ್ನಿಗೋಳಿಯಲ್ಲಿ ಚಿತ್ರೀಕರಣಗೊಂಡಿದೆ.
ಸ್ವರಾಜ್ ಶೆಟ್ಟಿ, ಸಿನಿಮಾಕ್ಕೆ ಚಿತ್ರಕತೆ, ಸಂಭಾಷಣೆಯೊಂದಿಗೆ ನಿರ್ದೇಶನದ ಜವಾಬ್ದಾರಿಯನ್ನೂ ವಹಿಸಿಕೊಂಡಿದ್ದಾರಲ್ಲದೆ ನಾಯಕ ನಟನಾಗಿಯೂ ಅಭಿನಯಿಸಿದ್ದಾರೆ. ನಾಯಕಿಯಾಗಿ ದಿಶಾಲಿ ಪೂಜಾರಿ ನಟಿಸಿದ್ದಾರೆ. ವಿಶೇಷ ಪಾತ್ರದಲ್ಲಿ ಬಹುಭಾಷಾ ತಾರಾ ನಟ ಸುಮನ್ ತಲ್ವಾರ್, ಲಂಚುಲಾಲ್ ಕೆ ಎಸ್ ಅಭಿನಯಿಸಿದ್ದಾರೆ ಸಿನಿಮಾದಲ್ಲಿ ಯುವ ಶೆಟ್ಟಿ, ಪುಷ್ಪರಾಜ್ ಬೊಳ್ಳೂರು, ಅನಿಲ್ ಉಪ್ಪಳ, ಭವ್ಯಾ ಪೂಜಾರಿ, ಪೃಥ್ವಿನ್ ಪೊಳಲಿ, ಉತ್ಸವ್ ವಾಮಂಜೂರು, ನೀತ್ ಪೂಜಾರಿ, ವಿಜಯ ಮಯ್ಯ ಚಂದ್ರಶೇಖರ ಸಿದ್ದಕಟ್ಟೆ, ಮನೀಶ್ ಶೆಟ್ಟಿ ಉಪಿರ, ನಮಿತ ಕಿರಣ್, ಸುನೀತಾ, ವಿನಾಯಕ್ ಜಪ್ಪು, ಭಗವಾನ್, ಕೀರ್ತನ್ ಮುಲ್ಕಿ ಇದ್ದಾರೆ.
ಸಿನಿಮಾಕ್ಕೆ ಚಿತ್ರಕತೆ ನಿರ್ದೇಶನ ಸ್ವರಾಜ್ ಶೆಟ್ಟಿ, ಕ್ಯಾಮರಾ: ಉದಯ ಬಲ್ಲಾಳ್, ಸಂಗೀತ: ವಿನೋದ್ ರಾಜ್ ಕೋಕಿಲಾ, ಸಂಕಲನ: ಗಣೇಶ್ ನೀರ್ಚಾಲ್,
ಸಾಹಸ: ಮಾಸ್ ಮಾದ, ಟೈಗರ್ ಶಿವ, ಎಕ್ಸಿಟಿವ್ ಪ್ರೊಡ್ಯುಸರ್ : ಯತೀಶ್ ಪೂಜಾರಿ, ಲೈನ್ ಪ್ರೊಡ್ಯುಸ: ವಿಜಯ ಮಯ್ಯ, ಪ್ರೊಡಕ್ಷನ್ ಮ್ಯಾನೇಜರ್: ರಾಜೇಶ್ ಕುಡ, ನಿರ್ದೇಶನ ವಿಭಾಗದಲ್ಲಿ ಅವಿನಾಶ್ ಎಸ್ ಆಪ್ತ, ನೀತ್ ಪೂಜಾರಿ, ಕಾರ್ತಿಕ್ ಜಯಚಂದ್ರನ್, ತುಳಸಿದಾಸ್ ಮಂಜೇಶ್ವರ್, ಮೇಕಪ್ : ಚೇತನ್, ಆರ್ಟ್: ವಿಪಿನ್,
ನೆತ್ತೆರೆಕೆರೆ ಸಿನಿಮಾ ಮಂಗಳೂರಿನಲ್ಲಿ ಪಿವಿಆರ್, ಸಿನಿಪೊಲಿಸ್, ಭಾರತ್ ಸಿನಿಮಾಸ್, ಸುರತ್ಕಲ್ ನಲ್ಲಿ ಸಿನಿಗ್ಯಾಲಕ್ಸಿ, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಉಡುಪಿಯಲ್ಲಿ ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಐನಾಕ್ಸ್, ಭಾರತ್ ಸಿನಿಮಾಸ್, ಕಾರ್ಕಳದಲ್ಲಿ ರಾಧಿಕಾ, ಪ್ಲಾನೆಟ್, ಬೆಳ್ತಂಗಡಿಯಲ್ಲಿ ಭಾರತ್, ದೇರಳಕಟ್ಟೆಯಲ್ಲಿ ಭಾರತ್ ಸಿನಿಮಾಸ್ ಚಿತ್ರಮಂದಿರದಲ್ಲಿ “ನೆತ್ತೆರೆಕೆರೆ” ಸಿನಿಮಾ ತೆರೆ ಕಾಣಲಿದೆ
ಈ ಸಂದರ್ಭದಲ್ಲಿ ಸುದ್ದಿಗೋಷ್ಟಿಯಲ್ಲಿ ಅಸ್ತ್ರ ಗ್ರೂಪ್‌ನ ಸಿಇಒ ಲಂಚುಲಾಲ್ ಕೆ.ಎಸ್. ಸಿನಿಮಾ ನಿರ್ದೇಶಕ ನಟ ಸ್ವರಾಜ್ ಶೆಟ್ಟಿ, ನಟಿ ದಿಶಾಲಿ ಪೂಜಾರಿ, ಯುವ ಶೆಟ್ಟಿ, ಗಣೇಶ್ ನೀರ್ಚಾಲ್, ಸಚಿನ್ ಎಸ್. ಉಪ್ಪಿನಂಗಡಿ ಉಪಸ್ಥಿತರಿದ್ದರು.
Discover more from Coastal Times Kannada
Subscribe to get the latest posts sent to your email.
Discussion about this post