ಮಂಗಳೂರು: ಮಲಪ್ರಭಾ ಕಾಲುವೆ ವಿಚಾರದಲ್ಲಿ ನನ್ನ ಮೇಲೆ ಆರೋಪ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಮೆದುಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್ ಟೀಕಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಮಲಪ್ರಭಾ ಕಾಲುವೆ ಬಗ್ಗೆ ಅವರಿಗೆ ಗೊತ್ತಿಲ್ಲ. ಮಲಪ್ರಭಾ ಕಾಲುವೆ ನಿರ್ಮಾಣ ಮಾಡಲು ತಾಂತ್ರಿಕವಾಗಿ ಬಹಳ ಕಷ್ಟವಿತ್ತು. ಮಲಪ್ರಭಾ ಕಾಲುವೆ ನಿರ್ಮಾಣ ಮಾಡಿರುವ ಬಗ್ಗೆ ನನಗೆ ಹೆಮ್ಮೆಯಿದೆ. ನನ್ನ ಮೇಲೆ ಮಲಪ್ರಭಾ ಯೋಜನೆಯಲ್ಲಿ 420 ಕೋಟಿ ಅವ್ಯವಹಾರ ಆರೋಪ ಮಾಡಿರುವ ನಳಿನ್ ಕುಮಾರ್ ಕಟೀಲ್ ಅವರಿಗೆ ಮೆದುಳು ಇಲ್ಲ. ಅವರ ಮೇಲೆ ಕಾನೂನು ಕ್ರಮ ಜರುಗಿಸಲು ನೋಟೀಸ್ ನೀಡುತ್ತೇನೆ ಎಂದು ಹೇಳಿದರು. ರಾಜ್ಯವನ್ನು ಯುಪಿ ಮಾಡೆಲ್ ಮಾಡಲು ಮುಖ್ಯಮಂತ್ರಿ ಹೊರಟಿದ್ದಾರೆ. ಉತ್ತರ ಪ್ರದೇಶ ಅಭಿವೃದ್ಧಿಯಲ್ಲಿ ಕೊನೆಯ ಮೂರನೇ ಸ್ಥಾನದಲ್ಲಿದೆ. ನಮಗೆ ನಾವೆ ಮಾಡೆಲ್. ಸರ್ವ ಜನಾಂಗದ ಶಾಂತಿಯ ತೋಟವಾಗಿರುವ ಕರ್ನಾಟಕದ ಇಮೇಜ್ಗೆ ಸಂಪೂರ್ಣ ಧಕ್ಕೆ ಮಾಡಲು ಹೊರಟಿದ್ದಾರೆ ಎಂದರು.
ಕರ್ನಾಟಕ’ ರಾಜ್ಯದಲ್ಲಿ 40 ಶೇ. ಕಮೀಷನ್ ಪಡೆಯುವ ಆರೋಪ ಹೊಂದಿರುವ ಇಲಾಖೆಗಳ ಮೇಲೆ ಐ.ಟಿ, ಇ.ಡಿ ದಾಳಿ ಏಕೆ ನಡೆಯುತ್ತಿಲ್ಲ. ಮೋದಿ ಅಧಿಕಾರಕ್ಕೆ ಬರುವ ಮೊದಲು ದೇಶದ ಜನಕ್ಕೆ ಅಚ್ಛೇದಿನ ಇತ್ತು ಈಗ ಇಲ್ಲ ಎನ್ನುವು ದನ್ನು ದೇಶದ ಜನ ಹೇಳುತ್ತಿದ್ದಾರೆ. ದೇಶದಲ್ಲಿ ಮೋದಿ ಅಧಿಕಾರಕ್ಕೆ ಬಂದ ಬಳಿಕ ದೇಶ ಯುವ ಜನರಿಗೆ ಭ್ರಮ ನಿರಸನ ವಾಗಿದೆ. ಸಾಕಷ್ಟು ಕಂಪೆನಿಗಳು ಖಾಸಗಿಯವರ ಪಾಲಾಗಿದೆ. ನಿರುದ್ಯೋಗದ ಪ್ರಮಾಣ ಏರಿಕೆ ಯಾಗಿದೆ. ಜನ ಸಾಮಾನ್ಯರ ನಿತ್ಯ ಬಳಕೆಯ ಪೆಟ್ರೋಲ್, ಅಡುಗೆ ಅನಿಲ, ಖಾದ್ಯ ತೈಲದ ಬೆಲೆ ಗಗನಕ್ಕೇರಿದೆ. ಮೋದಿ ವರ್ಷ ಕ್ಕೆ ಎರಡು ಕೋಟಿ ಉದ್ಯೋಗ ನೀಡುವ ಭರವಸೆ ಈಡೇರಿಸಿಲ್ಲ. ನೋಟ್ ಬ್ಯಾನ್ ಮೂಲಕ ಜನರನ್ನು ಸಂಕಷ್ಟಕ್ಕೀಡು ಮಾಡಿದ ಕೇಂದ್ರ ಸರ್ಕಾರ ಕೊರೋನ ಸಂದರ್ಭದಲ್ಲಿ ಕೋಟ್ಯಂತರ ಮೊತ್ತದ ಹಣ ಖರ್ಚು ಮಾಡಿದೆ ಎನ್ನುತ್ತಾರೆ. ಆದರೆ ಈ ಹಣ ಜನರಿಗೆ ತಲುಪಿಲ್ಲ’ ಎಂದು ಎಂದು ಎಂ.ಬಿ.ಪಾಟೀಲ್ ಆರೋಪಿಸಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post