ಪೆರ್ಲ: ಆಟೋ ರಿಕ್ಷಾ ಮತ್ತು ಶಾಲಾ ಬಸ್ ಪರಸ್ಪರ ಡಿಕ್ಕಿಯಾಗಿ ರಿಕ್ಷಾದಲ್ಲಿ ಸಂಚರಿಸುತ್ತಿದ್ದ ಐದು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬದಿಯಡ್ಕ ಸಮೀಪದ ಪಳ್ಳತ್ತಡ್ಕದಲ್ಲಿ ಸೋಮವಾರ ಸಂಜೆ ನಡೆದಿದೆ. ತಾಯಲಂಗಡಿ ನಿವಾಸಿ ಪ್ರಸ್ತುತ ಮೊಗ್ರಾಲಿನ ನಿವಾಸಿ ರಿಕ್ಷಾ ಚಾಲಕ ಮತ್ತು ನಾಲ್ವರು ಮಹಿಳೆಯರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಪೆರ್ಲ ಭಾಗದಿಂದ ತೆರಳುತ್ತಿದ್ದ ಮಾನ್ಯದ ಆಂಗ್ಲ ಮಾಧ್ಯಮ ಶಾಲೆಯ ಬಸ್ ಮತ್ತು ಮೊಗ್ರಾಲ್ ಪುತ್ತೂರು ಕಡೆಯಿಂದ ಬರುತ್ತಿದ್ದ ಆಟೋ ರಿಕ್ಷಾ ಡಿಕ್ಕಿಯಾಗಿ ಅಪಘಾತ ನಡೆದಿದೆ. ಆಟೋ ರಿಕ್ಷಾದಲ್ಲಿದ್ದ ಚಾಲಕ ಸಹಿತ ಐದು ಮಂದಿ ಮೃತಪಟ್ಟಿದ್ದಾರೆ. ಶಾಲಾ ಮಕ್ಕಳನ್ನು ಪೆರ್ಲದಲ್ಲಿ ಇಳಿಸಿದ ಶಾಲಾ ಬಸ್ ಖಾಲಿಯಾಗಿ ಸಂಚರಿಸುತ್ತಿದ್ದಾಗ ಪಳ್ಳತ್ತಡ್ಕ ಬಳಿಯ ತಿರುವಿನಲ್ಲಿ ಅಪಘಾತ ನಡೆದಿದೆ. ಮೊಗ್ರಾಲ್ ಪುತ್ತೂರಿನ ಒಂದೇ ಕುಟುಂಬದ ಮನೆಯವರು ಆಟೋದಲ್ಲಿ ಸಂಬಂಧಿಕರ ಮನೆಗೆಂದು ಪೆರ್ಲಕ್ಕೆ ಬರುತ್ತಿದ್ದರು. ಈ ಪೈಕಿ ಮೂವರು ಸೋದರಿಯರು ಎನ್ನುವ ಮಾಹಿತಿ ಸಿಕ್ಕಿದೆ.
ಶಾಲಾ ಬಸ್ ಡಿಕ್ಕಿ ಹೊಡೆದ ರಭಸಕ್ಕೆ ರಿಕ್ಷಾ ಸಂಪೂರ್ಣ ನಜ್ಜು ಗುಜ್ಜಾಗಿದೆ. ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಲಾಗಿದೆ.
Discover more from Coastal Times Kannada
Subscribe to get the latest posts sent to your email.
Discussion about this post