ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಮಸೀದಿ ಆವರಣಕ್ಕೆ ನುಗ್ಗಿ ಜೈ ಶ್ರೀ ರಾಮ್ ಘೋಷಣೆ ಕೂಗಿದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಪುತ್ತೂರಿನ ಬಿಳಿನೆಲೆ ಗ್ರಾಮದ ಕೀರ್ತನ್ ಮತ್ತು ಮಂಗಳೂರಿನ ಕೈಕಂಬದ ಸಚಿನ್ ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಬೈಕ್‌ನಲ್ಲಿ ಬಂದ ಆರೋಪಿಗಳು ಭಾನುವಾರ ರಾತ್ರಿ ಮಸೀದಿಯ ಆವರಣಕ್ಕೆ ನುಗ್ಗಿ ಘೋಷಣೆಗಳನ್ನು ಕೂಗಿದ್ದಾರೆ. ಘೋಷಣೆ ಶಬ್ದ ಕೇಳಿ ಹೊರಬಂದ ಮಸೀದಿಯ ಮೌಲಾನನ್ನು ನೋಡಿದ ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದರು. ಈ ಘಟನೆ ಮಸೀದಿಯಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.
Discussion about this post