ಮಂಗಳೂರು, ಸೆ.25; ಕುದ್ರೋಳಿ ಶ್ರೀ ಗೋಜರ್ಣನಾಥ ಕ್ಷೇತ್ರದ ನವೀಕರಣದ ರೂವಾರಿ ಮಾಜಿ ವಿತ್ತ ಸಚಿವ ಬಿ.ಜನಾರ್ದನ ಪೂಜಾರಿ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿಯಲ್ಲಿ ಗುರುವಾರ ಮಂಗಳೂರು ದಸರಾ ಸಮಾರಂಭದ ಅಧ್ಯಕ್ಷತೆವಹಿಸಿ ಮಂಗಳೂರು ದಸರಾ ಸನ್ಮಾನ 2025 ನೆರವೇರಿಸಿದರು.
ಕರ್ನಾಟಕ ವಿಧಾನ ಸಭಾ ಅಧ್ಯಕ್ಷ ಯು.ಟಿ.ಖಾದರ್ ಮಂಗಳೂರು ದಸರಾ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಮಾತನಾಡುತ್ತಾ, ಜಿಲ್ಲೆಯ ಸಾಂಸ್ಕೃತಿಕ ವೈಶಿಷ್ಟ್ಯಗಳನ್ನು ಕುದ್ರೋಳಿಯಲ್ಲಿ ನಡೆಯುತ್ತಿರುವ ಮಂಗಳೂರು ದಸರಾದಲ್ಲಿ ಕಾಣಲು ಸಾಧ್ಯ. ನಾನು ಬಾಲ್ಯದಿಂದಲೂ ರಾಜಕೀಯ ಗುರುಗಳಾದ ಮಾಜಿ ವಿತ್ತ ಸಚಿವ ಬಿ ಜನಾರ್ದನ ಪೂಜಾರಿಯವರ ನೇತೃತ್ವದಲ್ಲಿ ನಡೆಯುತ್ತಿರುವ ದಸರಾ ದೇವಸ್ಥಾನದ ಕೆಲಸ ಗಮನಿಸಿದ್ದೇನೆ. ಕುದ್ರೋಳಿ ಶ್ರೀ ಕ್ಷೇತ್ರ ಸೌಹಾರ್ದ ಪರಂಪರೆಯ ಸಂದೇಶವನ್ನು ದೇಶಕ್ಕೆ ಸಾರುವ ಕೇಂದ್ರ. ಎಲ್ಲಾ ಜಾತಿ,ಧರ್ಮ ನಮ್ಮನ್ನು ಒಂದು ಗೂಡಿಸಬೇಕು ನಮ್ಮನ್ನು ವಿಂಗಡಿಸುವಂತಾಗಬಾರದು.ಬ್ರಹ್ಮಶ್ರೀ ನಾರಾಯಣ ಗುರುಗಳು ನಮಗೆ ನೀಡಿದ ಸಂದೇಶವೂ ಅದೇ ಆಗಿದೆ. ನಾವೆಲ್ಲರೂ ಭಾರತೀಯರು ನಾವೆಲ್ಲ ಒಂದು ಎಂದುಅರಿತುಕೊಂಡಾಗ ಸಮಾಜದ ಸಾಮೂಹಿಕ ಅಭಿವೃದ್ಧಿ ಸಾಧ್ಯ ಎಂದರು.
ಕರ್ನಾಟಕ ಸರಕಾರದ ಧಾರ್ಮಿಕ ದತ್ತಿಮತ್ತು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಶುಭ ಹಾರೈಸಿದರು. ಜಿಲ್ಲಾ ಉಸ್ತುವಾರಿ ಅಚಿವ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡುತ್ತಾ, ಮೈಸೂರು ದಸರಾದ ಬಳಿಕ ರಾಜ್ಯದಲ್ಲಿ ಮಂಗಳೂರು ದಸರಾ ಪ್ರತಿವರ್ಷ ಜನಾಕರ್ಷಣೆ ಪಡೆಯುತ್ತಿದೆ.ಜನಾರ್ದನ ಪೂಜಾರಿಯವರು ನೇತೃತ್ವದಲ್ಲಿ ಅವರ ಕಳಕಳಿಯಿಂದ ದಸರಾ ನಾಡಹಬ್ಬವಾಗಿ ಎಲ್ಲಾಜನ ಪಾಲ್ ಗೊಳ್ಳುತ್ತಿರುವುದು ನಮ್ಮ ಪರಂಪರೆ ಯಾಗಿದೆ.ಧಾರ್ಮಿಕ ಚಟುವಟಿಕೆಗಳು ನಮ್ಮ ಬದುಕಿನ ಅಂಗವಾಗಿ ಇದೆ.ಇದರೊಂದಿಗೆ ನಾವು ಪರಸ್ಪರ ಪ್ರೀತಿ ವಿಶ್ವಾಸದೊಂದಿಗೆ ಸಾಗಬೇಕಾಗಿದೆ.ಮುಂದಿನ ವರ್ಷ ದಿಂದ ಮಂಗಳೂರು ದಸರಾ ಉತ್ಸವಕ್ಕೂ ಸರಕಾರದ ಅನುದಾನ ನೀಡುವ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
ದಸರಾ ಗೌರವ ಸಮ್ಮಾನ್-2025 : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ್ ಆಳ್ವ, ರಾಣಿ ಅಬ್ಬಕ್ಕ ಮ್ಯೂಸಿಯಂನ ತುಕರಾಂ ಪೂಜಾರಿ, ಲೇಡಿಗೋಷನ್‌ನ ವೈದ್ಯಾಧಿಕಾರಿ ಡಾ| ದುರ್ಗಾಪ್ರಸಾದ್ ಎಂ.ಆರ್. ಅವರಿಗೆ ದಸರಾ ಗೌರವ್ ಸಮ್ಮಾನ್ 2025 ಪ್ರಶಸ್ತಿ ಪ್ರದಾನ ಮಾಡಲಾಯಿತು.
ಸಂಸದ ಬ್ರಿಜೇಶ್ ಚೌಟ,ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ,ಮುಖ್ಯ ಸಚೇತಕ ಅಶೋಕ್ ದೇವಪ್ಪ ಪಟ್ಟಣ್, ಗಡಿನಾಡ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನ ಮರದ, ಮಾಜಿ ಸಚಿವ ರಮಾನಾಥ ರೈ,ಹರೀಶ್ ಕುಮಾರ್ , ಕುದ್ರೋಳಿ ಕೇತ್ರಾಭಿವೃದ್ಧಿ ಸಮಿತಿಯ ಅಧ್ಯಕ್ಷ ದೇವೇಂದ್ರ ಪೂಜಾರಿ ದೇವಳದ ಆಡಳಿತ ಮಂಡಳಿ ಅಧ್ಯಕ್ಷ ಜೈರಾಜ್ ಎಚ್. ಸೋಮಸುಂದರಂ, ಉಪಾಧ್ಯಕ್ಷೆ ಉರ್ಮಿಳಾ ರಮೇಶ್, ಕಾರ್ಯದರ್ಶಿ ಬಿ. ಮಾಧವ ಸುವರ್ಣ,ಸದಸ್ಯ ಹೆಚ್.ಎಸ್.ಸಾಯಿರಾಂ, ಕ್ಷೇತ್ರಾಭಿವೃದ್ಧಿ ಸಮಿತಿಯ ಚೇರ್ ಮನ್ ದೇವೇಂದ್ರ ಪೂಜಾರಿ,ಉಪಾಧ್ಯಕ್ಷ ಡಾ.ಬಿ.ಜಿ. ಸುವರ್ಣ ,ಟ್ರಸ್ಟಿಕೃತೀನ್ ಅಮೀನ್, ಸಮಿತಿಯ ಸದಸ್ಯ ಹರಿಕೃಷ್ಣ ಬಂಟ್ವಾಳ್, ಲೀಲಾಕ್ಷ ಕರ್ಕೆರಾ,ಸಂತೋಷ್ ಪೂಜಾರಿ ದೇವಳದ ಆಡಳಿತ ಮಂಡಳಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.ಆಡಳಿತ ಸಮಿತಿಯ ಕೋಶಾಧಿಕಾರಿ ಆರ್.ಪದ್ಮರಾಜ್ ಸ್ವಾಗತಿಸಿದರು. ಸ್ಮಿತೇಶ್ ಎಸ್ ಬಾರ್ಯ ಕಾರ್ಯಕ್ರಮ ನಿರೂಪಿಸಿದರು.
Discover more from Coastal Times Kannada
Subscribe to get the latest posts sent to your email.
Discussion about this post