• About us
  • Contact us
  • Disclaimer
Saturday, September 12, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಸುರತ್ಕಲ್ ಜಲೀಲ್ ಹತ್ಯೆ ಪ್ರಕರಣ ; ಮೂವರ ಬಂಧನ, ಹಿಂದು ಹೆಣ್ಣಿನ ಅಕ್ರಮ ಸಂಬಂಧ ಕಾರಣಕ್ಕೆ ಕೊಲೆ !

Coastal Times by Coastal Times
December 26, 2022
in ಕ್ರೈಮ್ ನ್ಯೂಸ್
ಸುರತ್ಕಲ್ ಜಲೀಲ್ ಹತ್ಯೆ ಪ್ರಕರಣ ; ಮೂವರ ಬಂಧನ, ಹಿಂದು ಹೆಣ್ಣಿನ ಅಕ್ರಮ ಸಂಬಂಧ ಕಾರಣಕ್ಕೆ ಕೊಲೆ !
450
VIEWS
WhatsappTelegramShare on FacebookShare on Twitter

ಮಂಗಳೂರು, ಡಿ 26 : ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕೃಷ್ಣಾಪುರ 4ನೇ ಬ್ಲಾಕ್ ನೈತಂಗಡಿ ಬಳಿ ಶನಿವಾರ ರಾತ್ರಿ ನಡೆದ ಜಲೀಲ್ ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.

ಕೃಷ್ಣಾಪುರ ನೈತಂಗಡಿ ನಿವಾಸಿ ಶೈಲೇಶ್ ಅಲಿಯಾಸ್ ಶೈಲೇಶ್ ಪೂಜಾರಿ(21), ಉಡುಪಿಯ ಹೆಜಮಾಡಿ ನಿವಾಸಿ ಸವಿನ್ ಕಾಂಚನ್ ಅಲಿಯಾಸ್ ಮುನ್ನ (24) ಹೆಜಮಾಡಿ ಉಡುಪಿ, ಕೃಷ್ಣಾಪುರ 3ನೇ ಬ್ಲಾಕ್ ನಿವಾಸಿ ಪವನ್ ಅಲಿಯಾಸ್ ಪಚ್ಚು (23) ಬಂಧಿತ ಆರೋಪಿಗಳು. ಇವರನ್ನು ಪೊಲೀಸರು ಬಂಧಿಸಿದ್ದು ಇಂದು ಸಂಜೆ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಕಸ್ಟಡಿಗೆ ತೆಗೆದುಕೊಳ್ಳುವ ಸಾಧ್ಯತೆಯಿದೆ. ಜಲೀಲ್, ಸ್ಥಳೀಯ ಹಿಂದು ಮಹಿಳೆಯ ಜೊತೆಗೆ ಅಕ್ರಮ ಸಂಬಂಧ ಇರಿಸಿಕೊಂಡಿದ್ದಕ್ಕೆ ಇವರು ಹತ್ಯೆ ಮಾಡಿದ್ದಾರೆ ಎನ್ನುವ ಮಾಹಿತಿಯಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ‌ಮಹಿಳೆಯ ಜೊತೆ ಅಕ್ರಮ ಸಂಬಂಧ ಇರಿಸಿಕೊಂಡಿದ್ದ ಬಗ್ಗೆ ಶೈಲೇಶ್ ಮತ್ತಿತರರು ಸೇರಿ ಎರಡು ವರ್ಷಗಳ ಹಿಂದೆ ಗಲಾಟೆ ನಡೆಸಿದ್ದರು.

ಆರೋಪಿಗಳನ್ನು ರವಿವಾರ ರಾತ್ರಿ ಬಂಧಿಸಲಾಗಿದ್ದು, ಅವರನ್ನು ವಿಚಾರಣೆಗೆ ಒಳಪಡಿಸಿದ್ದೇವೆ. ಸದ್ಯದ ವಿಚಾರಣೆಯಲ್ಲಿ ಬಂಧಿತ ಮೂವರು ಕೃತ್ಯದಲ್ಲಿ ಭಾಗಿಯಾಗಿರುವುದು ಕಂಡುಬಂದಿದೆ. ಯಾವ ಕಾರಣಕ್ಕೆ ಈ ಕೊಲೆ ಮಾಡಲಾಗಿದೆ, ಇದರಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೆ ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಕಸ್ಟಡಿಗೆ ಪಡೆಯಲಾಗುವುದು ಎಂದು ಶಶಿಕುಮಾರ್ ಅವರು ತಿಳಿಸಿದ್ದಾರೆ.

ಬಂಧಿತರ ಪೈಕಿ ಇಬ್ಬರ ವಿರುದ್ಧ ಸುರತ್ಕಲ್ ಠಾಣೆ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. 2021ರಲ್ಲಿ ನಡೆದ ಕೊಲೆ ಯತ್ನ ಪ್ರಕರಣದಲ್ಲಿ ಇವರು ಭಾಗಿಯಾಗಿರುವುದು ತಿಳಿದುಬಂದಿದೆ ಎಂದವರು ಹೇಳಿದರು.  ಜಲೀಲ್ ಕೊಲೆ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಅವರ ಬಂಧನಕ್ಕೆ ಕ್ರಮ ಕೈಕೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಮಹಿಳೆಯರು ಸೇರಿದಂತೆ ಸುಮಾರು 12 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದೇವೆ. ಜಲೀಲ್ ಕುಟುಂಬಸ್ಥರ ಮನವಿಯಂತೆ ಪ್ರಕರಣಕ್ಕೆ ಸಂಬಂಧಿಸಿ ಸಮಗ್ರ ತನಿಖೆ ನಡೆಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಹೇಳಿದ್ದಾರೆ.

ಅಬ್ದುಲ್ ಜಲೀಲ್ ಅವರನ್ನು ಶನಿವಾರ ರಾತ್ರಿ ಕೃಷ್ಣಾಪುರ 4ನೆ ಬ್ಲಾಕ್ ನೈತಂಗಡಿ ಬಳಿಯಿರುವ ಅವರ ಫ್ಯಾನ್ಸಿ ಮತ್ತು ಚಪ್ಪಲಿಯ ಅಂಗಡಿಯಲ್ಲಿ ಕೊಲೆಗೈಯಲಾಗಿದೆ. ಅಂಗಡಿಗೆ ನುಗ್ಗಿದ ಇಬ್ಬರು ಮುಸುಕುಧಾರಿ ದುಷ್ಕರ್ಮಿಗಳು ಜಲೀಲ್ ಅವರಿಗೆ ಚೂರಿಯಿಂದ ಇರಿದು ಪರಾರಿಯಾಗಿದ್ದರು. ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಅವರು ಕೊನೆಯುಸಿರೆಳೆದಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

“ಆತ್ಮತೃಪ್ತಿಗಾಗಿ ನೆರವು ಯೋಜನೆ, ನಿಮ್ಮ ಆಶೀರ್ವಾದವೇ ನನಗೆ ಬಲುದೊಡ್ಡ ಆಸ್ತಿ” – ಕೆ. ಪ್ರಕಾಶ್ ಶೆಟ್ಟಿ

Next Post

ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ ಸಾಗಾಟ ; 3 ಲಕ್ಷ ಮೌಲ್ಯದ ಗಾಂಜಾ ಸಹಿತ ಕೇರಳದ ನಾಲ್ವರು ಡ್ರಗ್ ಪೆಡ್ಲರ್ ಅರೆಸ್ಟ್

Related Posts

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ
ಕ್ರೈಮ್ ನ್ಯೂಸ್

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
40
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ
ಕ್ರೈಮ್ ನ್ಯೂಸ್

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
59
Next Post
ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ ಸಾಗಾಟ ; 3 ಲಕ್ಷ ಮೌಲ್ಯದ ಗಾಂಜಾ ಸಹಿತ ಕೇರಳದ ನಾಲ್ವರು ಡ್ರಗ್ ಪೆಡ್ಲರ್ ಅರೆಸ್ಟ್

ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ ಸಾಗಾಟ ; 3 ಲಕ್ಷ ಮೌಲ್ಯದ ಗಾಂಜಾ ಸಹಿತ ಕೇರಳದ ನಾಲ್ವರು ಡ್ರಗ್ ಪೆಡ್ಲರ್ ಅರೆಸ್ಟ್

Discussion about this post

Recent News

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
40
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
59
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
ಸೆ.19: ಕಾಞಂಗಾಡ್‌ನ  ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

ಸೆ.19: ಕಾಞಂಗಾಡ್‌ನ ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

September 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d