• About us
  • Contact us
  • Disclaimer
Thursday, September 10, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮೃತ ಅಭಿಮಾನಿಯ ಕುಟುಂಬಕ್ಕೆ 2 ಕೋಟಿ ರೂಪಾಯಿ ನೆರವು ಘೋಷಿಸಿದ ಅಲ್ಲು ಅರ್ಜುನ್​, ಪುಷ್ಪ 2 ತಂಡ

Coastal Times by Coastal Times
December 26, 2024
in ಸಿನಿಮಾ
ಮೃತ ಅಭಿಮಾನಿಯ ಕುಟುಂಬಕ್ಕೆ 2 ಕೋಟಿ ರೂಪಾಯಿ ನೆರವು ಘೋಷಿಸಿದ ಅಲ್ಲು ಅರ್ಜುನ್​, ಪುಷ್ಪ 2 ತಂಡ
47
VIEWS
WhatsappTelegramShare on FacebookShare on Twitter

ಹೈದರಾಬಾದ್‌ : ಡಿಸೆಂಬರ್ 4ರಂದು ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಸಾವನ್ನಪ್ಪಿದ ಮಹಿಳೆಯ ಕುಟುಂಬಕ್ಕೆ ನಟ ಅಲ್ಲು ಅರ್ಜುನ್ ಮತ್ತು ಅವರ ಬ್ಲಾಕ್‌ಬಸ್ಟರ್ ಪುಷ್ಪ 2 ಚಿತ್ರ ತಂಡ 2 ಕೋಟಿ ರೂಪಾಯಿಯ ಆರ್ಥಿಕ ನೆರವು ಘೋಷಿಸಿದೆ.

ಡಿಸೆಂಬರ್​ 5ರಂದು ‘ಪುಷ್ಪ 2: ದಿ ರೂಲ್​’ ಅದ್ಧೂರಿಯಾಗಿ ಚಿತ್ರಮಂದಿರ ಪ್ರವೇಶಿಸಿತ್ತು. ಡಿ.4ರ ರಾತ್ರಿ ವಿಶೇಷ ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು. ಈ ಜನಸಮೂಹದಲ್ಲಿ ಅಭಿಮಾನಿ ಪ್ರಾಣ ಕಳೆದುಕೊಂಡಿದ್ದರು. ದುರಂತವೆಂದರೆ, ಕಾಲ್ತುಳಿತದಲ್ಲಿ ರೇವತಿ ಎಂಬ ಮಹಿಳೆ ಮೃತಪಟ್ಟರೆ, ಅವರ 8 ವರ್ಷ ವಯಸ್ಸಿನ ಮಗ ಶ್ರೀ ತೇಜ್ ಗಂಭೀರವಾಗಿ ಗಾಯಗೊಂಡಿದ್ದರು. ಸದ್ಯ ಅವರಿಗೆ ಚಿಕಿತ್ಸೆ ಮುಂದುವರಿದಿದೆ.

ಬಾಲಕನಿರುವ ಆಸ್ಪತ್ರೆಗೆ ಭೇಟಿ ಕೊಟ್ಟ ಅಲ್ಲು ಅರ್ಜುನ್ ತಂದೆ: ಗಾಯಾಳು ಬಾಲಕ ಚಿಕಿತ್ಸೆ ಪಡೆಯುತ್ತಿರುವ ಕಿಮ್ಸ್ ಆಸ್ಪತ್ರೆಗೆ ಅಲ್ಲು ಅರ್ಜುನ್ ಅವರ ತಂದೆ, ಹಿರಿಯ ನಿರ್ಮಾಪಕ ಅಲ್ಲು ಅರವಿಂದ್ ಮತ್ತು ಪುಷ್ಪಾ 2 ನಿರ್ಮಾಪಕರು ಭೇಟಿ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಲ್ಲು ಅರವಿಂದ್, ಬಾಲಕನ ಸ್ಥಿತಿ ಸುಧಾರಿಸಿದೆ ಎಂಬುದನ್ನು ಖಚಿತಪಡಿಸಿದ್ದಾರೆ. ಬಾಲಕ ಚೇತರಿಸಿಕೊಳ್ಳುತ್ತಿದ್ದಾನೆ ಎಂದು ವೈದ್ಯರು ಭರವಸೆ ನೀಡಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಶ್ರೀ ತೇಜ್​ ಅವರನ್ನು ಈಗ ವೆಂಟಿಲೇಟರ್‌ನಿಂದ ತೆಗೆದು, ಚಿಕಿತ್ಸೆ ಮುಂದುವರಿಸಿದ್ದಾರೆ. ಶೀಘ್ರದಲ್ಲೇ ಸಂಪೂರ್ಣ ಚೇತರಿಸಿಕೊಳ್ಳುವ ನಿರೀಕ್ಷೆಯಿದೆ.

2 ಕೋಟಿ ರೂಪಾಯಿಗಳ ಪೈಕಿ ಅಲ್ಲು ಅರ್ಜುನ್ ಅವರಿಂದ 1 ಕೋಟಿ ರೂ., ಪುಷ್ಪ 2 ನಿರ್ಮಿಸಿರುವ ದಕ್ಷಿಣ ಚಿತ್ರರಂಗದ ಖ್ಯಾತ ಚಲನಚಿತ್ರ ನಿರ್ಮಾಣ ಸಂಸ್ಥೆ ಮೈತ್ರಿ ಮೂವೀ ಮೇಕರ್ಸ್‌ನಿಂದ 50 ಲಕ್ಷ ರೂ. ಮತ್ತು ನಿರ್ದೇಶಕ ಸುಕುಮಾರ್ ಅವರಿಂದ 50 ಲಕ್ಷ ರೂಪಾಯಿ ಬಂದಿದೆ. ಸಂತ್ರಸ್ತ ಕುಟುಂಬಕ್ಕೆ ವಿತರಿಸಲು ತೆಲಂಗಾಣ ಚಲನಚಿತ್ರ ಅಭಿವೃದ್ಧಿ ನಿಗಮದ (ಎಫ್‌ಡಿಸಿ) ಅಧ್ಯಕ್ಷ ದಿಲ್ ರಾಜು ಅವರಿಗೆ ಅಲ್ಲು ಅರವಿಂದ್ ಖುದ್ದು ಚೆಕ್‌ಗಳನ್ನು ಹಸ್ತಾಂತರಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ, ಅಲ್ಲು ಅರವಿಂದ್ ಅವರು ಬಾಲಕ ಶ್ರೀ ತೇಜ್ ಚೇತರಿಸಿಕೊಳ್ಳುತ್ತಿರುವ ಬಗ್ಗೆ ತಮ್ಮ ಸಮಾಧಾನ ವ್ಯಕ್ತಪಡಿಸಿದ್ದಾರೆ. ಜೊತೆಗೆ, ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಕಾನೂನು ಪ್ರಕ್ರಿಯೆಗಳಿಂದಾಗಿ ಮೃತ ರೇವತಿ ಕುಟುಂಬವನ್ನು ಖುದ್ದು ಭೇಟಿ ಮಾಡಲು ಸಾಧ್ಯವಾಗಿಲ್ಲ ಎಂದು ತಿಳಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರಿನ ಸಮಾಜ ಸೇವಾ ಸಹಕಾರಿ ಸಂಘಕ್ಕೆ 500 ನಕಲಿ ಚಿನ್ನದ ಬಳೆ ಅಡವಿಟ್ಟು 2 ಕೋಟಿ ರೂ. ಕೊಳ್ಳೆ

Next Post

ಮಾಜಿ ಪ್ರಧಾನಿ, ಆರ್ಥಿಕ ತಜ್ಞ ಮನಮೋಹನ್​ ಸಿಂಗ್ ನಿಧನ ; ಕರ್ನಾಟಕದಲ್ಲಿ ಇಂದು ಸರ್ಕಾರಿ ರಜೆ ಘೋಷಣೆ

Related Posts

13 ವರ್ಷಗಳ ದುನಿಯಾ ವಿಜಯ್-ನಾಗರತ್ನ ಕಾನೂನು ಸಮರ ಅಂತ್ಯ: ಪತ್ನಿಗೆ 2 ಕೋಟಿ ರೂ ಜೀವನಾಂಶ ನೀಡಲು ಹೈಕೋರ್ಟ್ ಆದೇಶ
ಸಿನಿಮಾ

13 ವರ್ಷಗಳ ದುನಿಯಾ ವಿಜಯ್-ನಾಗರತ್ನ ಕಾನೂನು ಸಮರ ಅಂತ್ಯ: ಪತ್ನಿಗೆ 2 ಕೋಟಿ ರೂ ಜೀವನಾಂಶ ನೀಡಲು ಹೈಕೋರ್ಟ್ ಆದೇಶ

September 3, 2026
49
94ನೇ ವಯಸ್ಸಿಗೆ ಕೊನೆಯುಸಿರೆಳೆದ ದಕ್ಷಿಣ ಭಾರತದ ಖ್ಯಾತ ನಟಿ ಸಾಹುಕಾರ್ ಜಾನಕಿ
ಸಿನಿಮಾ

94ನೇ ವಯಸ್ಸಿಗೆ ಕೊನೆಯುಸಿರೆಳೆದ ದಕ್ಷಿಣ ಭಾರತದ ಖ್ಯಾತ ನಟಿ ಸಾಹುಕಾರ್ ಜಾನಕಿ

August 21, 2026
14
Next Post
ಮಾಜಿ ಪ್ರಧಾನಿ, ಆರ್ಥಿಕ ತಜ್ಞ ಮನಮೋಹನ್​ ಸಿಂಗ್ ನಿಧನ ; ಕರ್ನಾಟಕದಲ್ಲಿ ಇಂದು ಸರ್ಕಾರಿ ರಜೆ ಘೋಷಣೆ

ಮಾಜಿ ಪ್ರಧಾನಿ, ಆರ್ಥಿಕ ತಜ್ಞ ಮನಮೋಹನ್​ ಸಿಂಗ್ ನಿಧನ ; ಕರ್ನಾಟಕದಲ್ಲಿ ಇಂದು ಸರ್ಕಾರಿ ರಜೆ ಘೋಷಣೆ

Discussion about this post

Recent News

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ನೇಮಕ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ನೇಮಕ

September 10, 2026
9
ಮುಂಬೈ ಸರಣಿ ಬಾಂಬ್​ ಸ್ಫೋಟದ ಅಪರಾಧಿ ಅಬು ಸಲೇಮ್ ಬಿಡುಗಡೆ ಕೋರಿ ಸಲ್ಲಿಸಿದ್ದ ಅರ್ಜಿ ಸುಪ್ರೀಂನಲ್ಲಿ ವಜಾ

ಮುಂಬೈ ಸರಣಿ ಬಾಂಬ್​ ಸ್ಫೋಟದ ಅಪರಾಧಿ ಅಬು ಸಲೇಮ್ ಬಿಡುಗಡೆ ಕೋರಿ ಸಲ್ಲಿಸಿದ್ದ ಅರ್ಜಿ ಸುಪ್ರೀಂನಲ್ಲಿ ವಜಾ

September 10, 2026
22
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ನೇಮಕ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ನೇಮಕ

September 10, 2026
ಮುಂಬೈ ಸರಣಿ ಬಾಂಬ್​ ಸ್ಫೋಟದ ಅಪರಾಧಿ ಅಬು ಸಲೇಮ್ ಬಿಡುಗಡೆ ಕೋರಿ ಸಲ್ಲಿಸಿದ್ದ ಅರ್ಜಿ ಸುಪ್ರೀಂನಲ್ಲಿ ವಜಾ

ಮುಂಬೈ ಸರಣಿ ಬಾಂಬ್​ ಸ್ಫೋಟದ ಅಪರಾಧಿ ಅಬು ಸಲೇಮ್ ಬಿಡುಗಡೆ ಕೋರಿ ಸಲ್ಲಿಸಿದ್ದ ಅರ್ಜಿ ಸುಪ್ರೀಂನಲ್ಲಿ ವಜಾ

September 10, 2026
ರಾಷ್ಟ್ರೀಯ ಹೆದ್ದಾರಿ-75 ರ ನೆಲ್ಯಾಡಿ ಸಂತ ಜಾರ್ಜ್ ಹಾಗೂ ಬೆಥನಿ ವಿದ್ಯಾಸಂಸ್ಥೆಗಳ ಬಳಿ- ಯು-ಟರ್ನ್ ನೀಡಲು ಆಗ್ರಹಿಸಿ ನೆಲ್ಯಾಡಿಯಲ್ಲಿ ಪ್ರತಿಭಟನೆ

ರಾಷ್ಟ್ರೀಯ ಹೆದ್ದಾರಿ-75 ರ ನೆಲ್ಯಾಡಿ ಸಂತ ಜಾರ್ಜ್ ಹಾಗೂ ಬೆಥನಿ ವಿದ್ಯಾಸಂಸ್ಥೆಗಳ ಬಳಿ- ಯು-ಟರ್ನ್ ನೀಡಲು ಆಗ್ರಹಿಸಿ ನೆಲ್ಯಾಡಿಯಲ್ಲಿ ಪ್ರತಿಭಟನೆ

September 10, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d