ಮಂಗಳೂರು, ಫೆ.27: ಸುರತ್ಕಲ್ ವಿದ್ಯಾದಾಯಿನೀ ಶಾಲೆಯಲ್ಲಿ ಹತ್ತನೇ ತರಗತಿ ಕಲಿಯುತ್ತಿದ್ದ ನಾಲ್ವರು ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ. ಮಂಗಳವಾರ ಮಧ್ಯಾಹ್ನ ಇಂಗ್ಲಿಷ್ ಪ್ರಿಪರೇಟರಿ ಪರೀಕ್ಷೆ ಇತ್ತು. ಮಧ್ಯಾಹ್ನ ಪರೀಕ್ಷೆ ಬರೆದ ಬಳಿಕ ನಾಲ್ವರು ಮಕ್ಕಳು ನಾಪತ್ತೆಯಾಗಿದ್ದಾರೆ. ಯಶ್ವಿತ್, ನಿರೂಪ್, ಅನ್ವಿತ್, ರಾಘವೇಂದ್ರ ಕಾಣೆಯಾದ ವಿದ್ಯಾರ್ಥಿಗಳು.
ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಕೇಸು ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಒಂದೇ ತರಗತಿಯ ನಾಲ್ವರು ವಿದ್ಯಾರ್ಥಿಗಳು ಇಂದು ಇಂಗ್ಲಿಷ್ ಪೂರ್ವ ಸಿದ್ಧತಾ ಪರೀಕ್ಷೆ ಬರೆದು ನಂತರ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.
Discussion about this post