ಮಂಗಳೂರು, ಮೇ, 26: ಜನತೆ ಕಾಂಗ್ರೆಸ್‌ನ ಆಶ್ವಾಸನೆಯನ್ನು ನಂಬಿ ಮತ ಹಾಕಿದ್ದಾರೆ. ಆದರೆ ಕಾಂಗ್ರೆಸ್ ರಾಜ್ಯದಲ್ಲಿ ಗೆದ್ದು ಇಂದಿಗೆ 20 ದಿನ ಕಳೆದರೂ ಯಾವುದೇ ಯೋಜನೆಗಳ ಬಗ್ಗೆ ಮಾತುಗಳಿಲ್ಲ. ಕರೆಂಟ್ ಬಿಲ್ ನೀಡಲು ಬರುವ ಸಿಬ್ಬಂದಿ ಮೇಲೆ ಹಲ್ಲೆಗಳಾಗುತ್ತಿದೆ. ರಾಜ್ಯದ ಜನತೆ ಸರಿ ಇದ್ದಾರೆ. ಹಾಗಾಗಿ ಬಿಲ್ ಕಟ್ಟಬಾರದೆಂದು ನಾನು ಕರೆ ಕೊಡುತ್ತೇನೆ ಎಂದು ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಚುನಾವಣೆ ಪೂರ್ವದಲ್ಲಿ ಐದು ಉಚಿತ ಭರವಸೆ ನೀಡುತ್ತೇವೆ ಎಂದು ಹೇಳುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಸರ್ಕಾರ ಬಂದ 24 ಗಂಟೆಯಲ್ಲಿ ಗ್ಯಾರಂಟಿ ಭರವಸೆಗಳನ್ನು ಅನುಷ್ಠಾನಕ್ಕೆ ತರುತ್ತೇವೆ ಅಂದಿದ್ದರು. ಸುಳ್ಳು ಆಶ್ವಾಸನೆ ಕೊಟ್ಟು ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೇರಿದೆ. ಯಾವುದೇ ಮಾನದಂಡಗಳಿಲ್ಲದೆ ಭಾಗ್ಯಗಳು ಸಿಗುತ್ತದೆಂದು ಹೇಳಿದ್ದರು. ಆದರೆ ಗ್ಯಾರಂಟಿ ಭರವಸೆಗಳನ್ನು ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿದೆ. ಎಲ್ಲಾದರೂ ಜನರಿಗೆ ತೊಂದರೆಯಾದಲ್ಲಿ ನಾವು ಸಮ್ಮುನಿರುವುದಿಲ್ಲ ಎಂದು ಹೇಳಿದರು.
Discover more from Coastal Times Kannada
Subscribe to get the latest posts sent to your email.








Discussion about this post