• About us
  • Contact us
  • Disclaimer
Wednesday, July 22, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ನವಮಂಗಳೂರು ಬಂದರು: ಹೊಸ ಗೋದಾಮು ನಿರ್ಮಾಣ, ಎನ್ಎಂಪಿಎಯಿಂದ ಸಿಡಬ್ಲುಸಿ ಮತ್ತು ಎಸ್ಡಿಸಿಎಲ್ ಜತೆ ಒಪ್ಪಂದ

Coastal Times by Coastal Times
June 27, 2023
in ಕರಾವಳಿ
ನವಮಂಗಳೂರು ಬಂದರು: ಹೊಸ ಗೋದಾಮು ನಿರ್ಮಾಣ, ಎನ್ಎಂಪಿಎಯಿಂದ ಸಿಡಬ್ಲುಸಿ ಮತ್ತು ಎಸ್ಡಿಸಿಎಲ್ ಜತೆ ಒಪ್ಪಂದ
38
VIEWS
WhatsappTelegramShare on FacebookShare on Twitter

ಮಂಗಳೂರು: ನವಮಂಗಳೂರು ಬಂದರು ಪ್ರದೇಶದಲ್ಲಿ ಗೋದಾಮು ಮತ್ತು ಕಂಟೈನರ್‌ ಸರಕು ಕೇಂದ್ರ (ಸಿಎಫ್‌ಎಸ್‌) ನಿರ್ಮಾಣ ಯೋಜನೆಯನ್ನು ನವಮಂಗಳೂರು ಬಂದರು ಪ್ರಾಧಿಕಾರವು (ಎನ್‌ಎಂಪಿಎ, ಕೇಂದ್ರೀಯ ಉಗ್ರಾಣ ನಿಗಮ (ಸಿಡಬ್ಲ್ಯುಸಿ) ಮತ್ತು ಸಾಗರಮಾಲಾ ಡೆವಲಪ್‌ಮೆಂಟ್‌ ಕಂಪನಿ ಲಿಮಿಟೆಡ್‌ (ಎಸ್‌ಡಿಸಿಎಲ್‌) ಜೊತೆ ಸೇರಿ ಅನುಷ್ಠಾನಗೊಳಿಸಲಿದೆ.

ಬಂದರಿನ 16.6 ಎಕರೆಗಳಷ್ಟು ವಿಶಾಲ ಜಾಗದಲ್ಲಿ ರೂ.125.42 ಕೋಟಿ ವೆಚ್ಚದಲ್ಲಿ ಗೋದಾಮು ನಿರ್ಮಾಣ ಯೋಜನೆಯನ್ನು ಅನುಷ್ಠಾನಗೊಳಿಸುವ ಒಪ್ಪಂದಕ್ಕೆ ಎನ್ಎಂಪಿಎ ಅಧ್ಯಕ್ಷ ಡಾ. ವೆಂಕಟರಮಣ ಅಕ್ಕರಾಜು, ಸಿಡಬ್ಲುಸಿ ಆಡಳಿತ ನಿರ್ದೇಶಕ ಅಮಿತ್ ಕುಮಾರ್ ಸಿಂಗ್ ಹಾಗೂ ಎಸ್ಡಿಸಿಎಲ್ನ ಆಡಳಿತ ನಿರ್ದೇಶಕ ದಿಲೀಪ್ ಕುಮಾರ್ ಗುಪ್ತಾ ಅವರು ಪಣಂಬೂರಿನ ಎನ್ಎಂಪಿಎ ಕಚೇರಿ ಸಭಾಂಗಣದಲ್ಲಿ ಜಂಟಿ ಒಪ್ಪಂದಕ್ಕೆ ಸಹಿ ಹಾಕಿದರು.

ಡಾ.ವೆಂಕಟರಮಣ ಅಕ್ಕರಾಜು, ‘ಈ ಯೋಜನೆಗೆ ಬಂದರಿನ ಸುಮಾರು ರೂ.44.25 ಕೋಟಿ ಮೌಲ್ಯದ ಜಾಗವನ್ನು ಎನ್‌ಎಂಪಿಎ ಒದಗಿಸಲಿದೆ. ನಿರ್ಮಾಣ ವೆಚ್ಚವನ್ನು ಸಿಡಬ್ಲ್ಯುಸಿ ಮತ್ತು ಎಸ್‌ಡಿಸಿಎಲ್‌ ಭರಿಸಲಿವೆ. 2025ರ ಜೂನ್‌ ವೇಳೆಗೆ ಉಗ್ರಾಣ ಹಾಗೂ ಕಂಟೈನರ್‌ ಸರಕು ಕೇಂದ್ರದ ಕಾಮಗಾರಿ ಪೂರ್ಣಗೊಳ್ಳಲಿದೆ’ ಎಂದು ಮಾಹಿತಿ ನೀಡಿದರು.

‘ಬಂದರಿಗೆ ರಾಜ್ಯದ ಇತರ ಪ್ರದೇಶಗಳಿಂದ ಸರ್ವ ಋತು ರಸ್ತೆಗಳ ಸಂಪರ್ಕ ಇಲ್ಲದಿದ್ದರೂ ಎನ್ಎಂಪಿಎ 2022–23ರಲ್ಲಿ ತೆರಿಗೆ ಕಳೆದು ರೂ.375 ಕೋಟಿ ವರಮಾನ ಗಳಿಸಿತ್ತು. 2023–24ರಲ್ಲಿ ರೂ.450 ಕೋಟಿ ವರಮಾನ ಗಳಿಸುವ ಗುರಿ ಹೊಂದಲಾಗಿದೆ. 2022–23ರಲ್ಲಿ 1.65 ಲಕ್ಷ ಕಂಟೈನರ್‌ ಸರಕುಗಳನ್ನು ನಿರ್ವಹಿಸಿದ್ದೇವೆ. ಇದನ್ನು ಈ ವರ್ಷ 1.85 ಲಕ್ಷದಿಂದ 2 ಲಕ್ಷ ಕಂಟೈನರ್‌ಗಳಿಗೆ ಹೆಚ್ಚಿಸುವ ಗುರಿ ಇಟ್ಟುಕೊಂಡಿದ್ದೇವೆ’ ಎಂದು ತಿಳಿಸಿದರು.

ಅಮಿತ್‌ ಕುಮಾರ್‌ ಸಿಂಗ್‌, ‘ಎನ್‌ಎಂಪಿಎ ಜೊತೆ ಸೇರಿ ಈ ಯೋಜನೆ ಜಾರಿಗೊಳಿಸುವುದು ಹೆಮ್ಮೆಯ ವಿಷಯ. ಅಂತರರಾಷ್ಟ್ರೀಯ ಮಾನದಂಡಗಳಿಗೆ ಅನುಗುಣವಾಗಿ ನಿರ್ಮಾಣವಾಗಲಿರುವ ಈ ಗೋದಾಮು ಉತ್ಕೃಷ್ಟ ಗುಣಮಟ್ಟವನ್ನು ಹೊಂದಿರಲಿದೆ. ರಫ್ತುದಾರರಿಗೆ ಸರಕು ಸಾಗಣೆ ವೆಚ್ಚವನ್ನು ಕಡಿತಗೊಳಿಸುವುದಕ್ಕೂ ನೆರವಾಗಲಿದೆ’ ಎಂದರು.

ದಿಲೀಪ್‌ ಕುಮಾರ್‌ ಗುಪ್ತ, ‘ಈ ಗೋದಾಮಿನಲ್ಲಿ ಹವಾಮಾನ, ಉಷ್ಣಾಂಶ ಹಾಗೂ ಅನಿಲ ನಿಯಂತ್ರಣ ಸೌಕರ್ಯ ಕಲ್ಪಿಸಲಾಗುತ್ತದೆ. ವಿಶೇಷ ಉದ್ದೇಶದ ಘಟಕದ (ಎಸ್‌ಪಿವಿ) ಸ್ಥಾನಮಾನವನ್ನು ಎಸ್‌ಡಿಸಿಎಲ್‌ ಹೊಂದಿದ ಬಳಿಕ, ಮೊದಲು ಗೋದಾಮನ್ನು ನಿರ್ಮಿಸುತ್ತಿರುವುದೇ ಕಾಫಿ ಮಂಡಳಿಗೆ. ಜಂಟಿ ಸಹಭಾಗಿತ್ವದ ಈ ಯೋಜನೆ ಇತರ ಬಂದರುಗಳಿಗೂ ಮಾದರಿ ಆಗಲಿದೆ’ ಎಂದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಸರಗಳ್ಳತನ ಹಾಗೂ ದ್ವಿಚಕ್ರ ವಾಹನ ದೋಚುತ್ತಿದ್ದ ಖತರ್ನಾಕ್ ಕಳ್ಳರಿಬ್ಬರ ಬಂಧನ, 13.82 ಲಕ್ಷ ರೂ.ಮೌಲ್ಯದ ಸೊತ್ತು ವಶ

Next Post

ಪ್ರವೀಣ್ ನೆಟ್ಟಾರು ಕೊಲೆ ಆರೋಪಿಗಳಿಗೆ ಡೆಡ್‌ಲೈನ್; ಜೂನ್‌ 30ರೊಳಗೆ ಶರಣಾಗದಿದ್ದರೆ ಆಸ್ತಿ ಮುಟ್ಟುಗೋಲು!

Related Posts

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ
ಕರಾವಳಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
86
ಮಂಗಳೂರು: ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್‌ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಪೊಲೀಸರಿಗೆ ಸನ್ಮಾನ
ಕರಾವಳಿ

ಮಂಗಳೂರು: ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್‌ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಪೊಲೀಸರಿಗೆ ಸನ್ಮಾನ

July 21, 2026
29
Next Post
ಪ್ರವೀಣ್ ನೆಟ್ಟಾರು ಕೊಲೆ ಆರೋಪಿಗಳಿಗೆ ಡೆಡ್‌ಲೈನ್; ಜೂನ್‌ 30ರೊಳಗೆ ಶರಣಾಗದಿದ್ದರೆ ಆಸ್ತಿ ಮುಟ್ಟುಗೋಲು!

ಪ್ರವೀಣ್ ನೆಟ್ಟಾರು ಕೊಲೆ ಆರೋಪಿಗಳಿಗೆ ಡೆಡ್‌ಲೈನ್; ಜೂನ್‌ 30ರೊಳಗೆ ಶರಣಾಗದಿದ್ದರೆ ಆಸ್ತಿ ಮುಟ್ಟುಗೋಲು!

Discussion about this post

Recent News

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
86
ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

July 22, 2026
37
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

July 22, 2026
ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ, ಮಂಗಳೂರಿನ ಹಾಪ್‌ಕಾಮ್ಸ್ ಜಿಎಂ ರವಿ ಶೆಟ್ಟಿ ಸ್ಥಳದಲ್ಲೇ ಸಾವು

ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ, ಮಂಗಳೂರಿನ ಹಾಪ್‌ಕಾಮ್ಸ್ ಜಿಎಂ ರವಿ ಶೆಟ್ಟಿ ಸ್ಥಳದಲ್ಲೇ ಸಾವು

July 21, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d