ಮಂಗಳೂರು, ಜೂ. 27: ವಿದ್ಯುತ್ ತಂತಿ ತಗುಲಿ ಇಬ್ಬರು ರಿಕ್ಷಾ ಚಾಲಕರು ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ನಗರದ ರೊಸಾರಿಯೊ ಶಾಲೆಯ ಬಳಿ ನಡೆದಿದೆ. ಮೃತ ರಿಕ್ಷಾ ಚಾಲಕರನ್ನು ರಾಜು ಮತ್ತು ದೇವರಾಜು ಎಂದು ಗುರುತಿಸಲಾಗಿದೆ. ಒಬ್ಬರು ಪುತ್ತೂರು ಹಾಗೂ ಇನ್ನೊಬ್ಬರು ಸಕಲೇಶಪುರದವರು. ಇಬ್ಬರೂ ಪಾಂಡೇಶ್ವರದ ರೊಸಾರಿಯೋ ಚರ್ಚ್ ಹಿಂಬದಿ ಬಾಡಿಗೆ ರೂಂನಲ್ಲಿ ವಾಸವಾಗಿದ್ದರು.
ಇಂದು ಬೆಳಗ್ಗೆ 4.30 ರ ಸುಮಾರಿಗೆ ಒಬ್ಬರು ರಿಕ್ಷಾ ತೊಳೆಯುವ ಸಂದರ್ಭ ಸರ್ವಿಸ್ ವೈರ್ ತುಂಡಾಗಿ ಒಬ್ಬರ ಮೇಲೆ ಬಿದ್ದಿದೆ ಈ ವೇಳೆ ವಿದ್ಯುತ್ ಶಾಕ್ ಗೆ ಒಳಗಾದ ವ್ಯಕ್ತಿಯನ್ನು ರಕ್ಷಿಸಲು ತೆರಳಿದ ಇನ್ನೊಬ್ಬರು ಕೂಡ ಆಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಮೃತದೇಹಗಳನ್ನು ವೆನ್ಲಾಕ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ ಎಂದು ತಿಳಿದು ಬಂದಿದೆ.
Discussion about this post