ಉಡುಪಿ: ಉಡುಪಿಯ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜು ಶೌಚಾಲಯದಲ್ಲಿ ವಿದ್ಯಾರ್ಥಿನಿಯರೇ ಹಿಡನ್ ಕ್ಯಾಮೆರಾ ಇಟ್ಟಿದ್ದ ಪ್ರಕರಣ ಇದೀಗ ರಾಜಕೀಯಕ್ಕೆ ಕಾರಣ ಆಗಿತ್ತು. ಅನ್ಯಕೋಮಿನ ವಿದ್ಯಾರ್ಥಿನಿಯರು ಹಿಂದೂಗಳನ್ನ ಟಾರ್ಗೆಟ್ ಮಾಡಿದ್ರು ಅನ್ನೋಮಟ್ಟಿಗೆ ಬಿಜೆಪಿ ಅಬ್ಬರಿಸಿತ್ತು. ಅಯ್ಯೋ ಮಕ್ಕಳಾಟವನ್ನ ರಾಜಕೀಯ ಕಳ್ಳಾಟ ಮಾಡ್ತಾವ್ರೆ ಅಂತ ಕಾಂಗ್ರೆಸ್ ಒಗ್ಗರಣೆ ಹಾಕಿತ್ತು. ಮೊದಲಿನಿಂದ್ಲೂ ಅಂಥದ್ದೇನೂ ಆಗಿಲ್ಲ ಅಂತಲೇ ಹೇಳುತ್ತಾ ಬಂದಿದ್ದ ಪೊಲೀಸ್ರು ಈಗ ಎಫ್‌ಐಆರ್ ಹಾಕಿದ್ದಾರೆ. ಮೂವರು ವಿದ್ಯಾರ್ಥಿನಿಯರ ಜೊತೆಗೆ ಸಾಕ್ಷ್ಯ ನಾಶದ ಆರೋಪದಡಿ ಕಾಲೇಜು ಆಡಳಿತ ಮಂಡಳಿ ವಿರುದ್ಧವೂ ಮಲ್ಪೆ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ವಿಡಿಯೋ ವಿವಾದ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡ್ತಿದ್ದಂತೆ ರಾಷ್ಟ್ರೀಯ ಮಹಿಳಾ ಆಯೋಗ ಎಂಟ್ರಿ ಕೊಟ್ಟಿದೆ. ಮಹಿಳಾ ಆಯೋಗದ ಮುಖ್ಯಸ್ಥೆ ರೇಖಾ ಶರ್ಮಾ ಕೂಡ ಟ್ವೀಟ್ ಮಾಡಿದ್ದು, ನಾವೂ ಪ್ರಕರಣದ ತನಿಖೆ ನಡೆಸ್ತೇವೆ ಎಂದಿದ್ದಾರೆ. ಅಲ್ದೇ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ, ನಟಿ ಖುಷ್ಬೂ ಸುಂದರ್ ಕಾಲೇಜಿಗೆ ತೆರಳಿ ವಿಚಾರಣೆ ನಡೆಸಿದ್ದಾರೆ.
ನೇತ್ರಾ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಮೊಬೈಲ್ ವಿಡಿಯೋ ಪ್ರಕರಣ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬು ಸುಂದರ್ ಉಡುಪಿ ಕಾಲೇಜಿನಲ್ಲಿ ಸತತ ಐದು ಗಂಟೆಗಳ ಸುಧೀರ್ಘ ಸಭೆ ನಡೆಸಿದ್ದಾರೆ. ಸತತ 5 ಗಂಟೆಗಳ ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಖುಷ್ಬು ಸುಂದರ್ ಶೌಚಾಲಯದಲ್ಲಿ ಯಾವುದೇ ಹಿಡನ್ ಕ್ಯಾಮೆರಾ ಇರಲಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.
ಈ ಬಗ್ಗೆ ವಿವರವಾಗಿ ಮಾತನಾಡಿದ ಅವರು, ಈಗಷ್ಟೇ ನಾನು ತನಿಖೆ ಆರಂಭ ಮಾಡಿದ್ದೇನೆ. ಯಾವುದೇ ಮಾಹಿತಿಗಳನ್ನು ಹೊರಗೆ ಹೇಳಲು ಸಾಧ್ಯವಿಲ್ಲ. ಒಳಗಡೆ ಏನು ಚರ್ಚೆ ಆಯ್ತು ಎಂದು ಬಹಿರಂಗಪಡಿಸಲು ಸಾಧ್ಯವಿಲ್ಲ. ಈಗಲೇ ಯಾವುದೇ ಅಂತಿಮ ನಿರ್ಧಾರಕ್ಕೆ ಬರಲು ಸಾಧ್ಯವಿಲ್ಲ. ಈಗಷ್ಟೇ ತನಿಖೆ ಆರಂಭಿಸಿದ್ದೇವೆ, ಈ ವಿಚಾರದಲ್ಲಿ ಯಾವುದೇ ಅಂತಿಮ ತೀರ್ಮಾನಕ್ಕೆ ಬರಬೇಡಿ. ಸಾಕ್ಷಿ ಸಿಕ್ಕಿದೆಯಾ ಎನ್ನುವ ಬಗ್ಗೆ ಹೇಳಲು ಸಾಧ್ಯವಿಲ್ಲ. ಪೊಲೀಸರ ಹೇಳಿಕೆ ಹೊರತಾಗಿ ಸದ್ಯ ಜನರು ಬೇರೆ ಯಾವುದೇ ಊಹಾಪೋಹಗಳಿಗೆ ಕಿವಿ ಕೊಡಬೇಡಿ ಎಂದು ಮನವಿ ಮಾಡಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post