ಮಂಗಳೂರು: ಟಿಪ್ಪರ್- ಸ್ಕೂಟರ್ ಮಧ್ಯೆ ನಡೆದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನಗರದ ಹೊರವಲಯದ ಅಡ್ಯಾರ್ ನಲ್ಲಿ ಶನಿವಾರ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಅಡ್ಯಾರ್ ಪದವು ನಿವಾಸಿ ಶರಫುದ್ದೀನ್ (16) ಎಂದು ಗುರುತಿಸಲಾಗಿದೆ.
ಅಡ್ಯಾರ್ ಪದವು ನಿವಾಸಿ ಶರಫುದ್ದೀನ್ (16) ಮೃತ ವಿದ್ಯಾರ್ಥಿ. ನಗರದ ಮಿಲಾಗ್ರಿಸ್ ಶಾಲೆಯಲ್ಲಿ ಈತ ಹತ್ತನೇ ತರಗತಿಯಲ್ಲಿ ಓದುತ್ತಿದ್ದ. ಗೆಳೆಯನೊಂದಿಗೆ ಆಕ್ಟಿವಾ ಸ್ಕೂಟರಿನಲ್ಲಿ ಸಂಚರಿಸುತ್ತಿದ್ದ ವೇಳೆ ಘಟನೆ ನಡೆದಿದೆ, ಡಿಕ್ಕಿ ಹೊಡೆದ ರಭಸಕ್ಕೆ ಹಿಂಬದಿ ಸವಾರನಾಗಿದ್ದ ಶರಫುದ್ದೀನ್ ರಸ್ತೆಗೆಸೆಯಲ್ಪಟ್ಟಿದ್ದು ತಲೆಯ ಭಾಗಕ್ಕೆ ತೀವ್ರ ರಕ್ತಸ್ರಾವವುಂಟಾಗಿತ್ತು. ಕೂಡಲೇ ಸ್ಥಳೀಯರು ಶರಫುದ್ದೀನ್ ನನ್ನು ಸಮೀಪದ ಫಸ್ಟ್ ನ್ಯೂರೋ ಆಸ್ಪತ್ರೆಗೆ ದಾಖಲಿಸಿದ್ದರು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಇನ್ನೋರ್ವನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ.
Discussion about this post