ಮಂಗಳೂರು, ಅ.27 : ಉತ್ತರ ಪ್ರದೇಶದ ಯೋಗಿ ಸರ್ಕಾರದ ಮಾದರಿಯಲ್ಲೇ ಗೋಹತ್ಯೆ ನಡೆಸುವ ಅಕ್ರಮ ದಂಧೆಕೋರರಿಗೆ ರಾಜ್ಯದಲ್ಲೂ ಆಸ್ತಿ ಮುಟ್ಟುಗೋಲಿನ ಶಾಕ್ ನೀಡಲಾಗಿದೆ. ಗೋ ಹಂತಕರ ವಿರುದ್ಧ ರಾಜ್ಯದಲ್ಲೇ ಮೊದಲ ಬಾರಿಗೆ ಕಠಿಣ ಕ್ರಮಕ್ಕೆ ಸರಕಾರ ಮುಂದಾಗಿದ್ದು, ಮಂಗಳೂರು ಉತ್ತರ ವಿಧಾನಸಭೆ ಕ್ಷೇತ್ರದ ಮೂರು ಕಡೆಗಳಲ್ಲಿ ಅಕ್ರಮ ಕಸಾಯಿಖಾನೆ ನಡೆಯುತ್ತಿದ್ದ ಕಟ್ಟಡಗಳನ್ನು ಕಂದಾಯ ಇಲಾಖೆ ಕಾನೂನು ಪ್ರಕಾರ ಮುಟ್ಟುಗೋಲು ಹಾಕಿಕೊಂಡಿದೆ.
ಗಂಜಿಮಠದ ಯೂಸೂಫ್, ಅರ್ಕುಳದ ಬಾತೀಶ್, ಕಾಟಿಪಳ್ಳದ ಹಕೀಂ ಜಾಗವನ್ನು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ 2020ರ ಕಲಾಂ 8 (4) ಅಡಿಯಲ್ಲಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಅನಧಿಕೃತವಾಗಿ, ಅಕ್ರಮವಾಗಿ ಕಸಾಯಿ ಖಾನೆಗಳನ್ನು ನಡೆಸುತ್ತಿದ್ದ ಈ ಜಾಗಗಳು ಈಗ ಅಧಿಕೃತವಾಗಿ ಸರಕಾರದ ವಶಕ್ಕೆ ಬಂದಂತಾಗಿದೆ.
ಕಾನೂನು ಪ್ರಕಾರವೇ ಕಾಯಿದೆ ಜಾರಿ ಮಾಡಿ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗಿದ್ದು, ಜಾಗವನ್ನು ಮೂವರು ಅಧಿಕೃತರ ಹೆಸರಿನಿಂದ ಸರ್ಕಾರದ ಹೆಸರಲ್ಲಿ ಆರ್.ಟಿ.ಸಿ ನೋಂದಣಿ ಕೂಡಾ ಮಾಡಲಾಗಿದೆ.ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಸೂಚನೆಯಂತೆ ಸಹಾಯಕ ಆಯುಕ್ತ ಮದನ್ ಮೋಹನ್ ಕ್ರಮ ಜರುಗಿಸಿದ್ದಾರೆ. ಪೊಲೀಸ್ ಠಾಣೆಗಳ ವರದಿ ಆಧರಿಸಿ ಜಾಗ ಮಾರಾಟ, ಬಾಡಿಗೆ ಹಾಗೂ ಅಲ್ಲಿ ಯಾವುದೇ ಚಟುವಟಿಕೆ ನಡೆಸದಂತೆ ಮುಟ್ಟುಗೋಲು ಹಾಕಲಾಗಿದೆ. ಎರಡು ವರ್ಷಗಳ ಹಿಂದೆ ಕಾಯ್ದೆ ಜಾರಿ ಬೆನ್ನಲ್ಲೇ ಪರಿಣಾಮಕಾರಿ ಅನುಷ್ಠಾನಕ್ಕೆ ಶಾಸಕ ಭರತ್ ಶೆಟ್ಟಿ ಸೂಚಿಸಿದ್ದರು.
Discover more from Coastal Times Kannada
Subscribe to get the latest posts sent to your email.
Discussion about this post