• About us
  • Contact us
  • Disclaimer
Thursday, July 30, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬೆಳ್ತಂಗಡಿ : ಧರ್ಮಸ್ಥಳದಲ್ಲಿ ಭಕ್ತರ ಬ್ಯಾಗ್ ನಿಂದ 76ಗ್ರಾಂ ಚಿನ್ನಾಭರಣ ಕಳವು ; ತಾಯಿ- ಮಗಳ ಬಂಧನ

Coastal Times by Coastal Times
November 27, 2025
in ಕ್ರೈಮ್ ನ್ಯೂಸ್
ಬೆಳ್ತಂಗಡಿ : ಧರ್ಮಸ್ಥಳದಲ್ಲಿ ಭಕ್ತರ ಬ್ಯಾಗ್ ನಿಂದ 76ಗ್ರಾಂ ಚಿನ್ನಾಭರಣ ಕಳವು ; ತಾಯಿ- ಮಗಳ ಬಂಧನ
80
VIEWS
WhatsappTelegramShare on FacebookShare on Twitter

ಮಂಗಳೂರು, ನ.26 : ಧರ್ಮಸ್ಥಳ ದೇವಸ್ಥಾನದಲ್ಲಿ ಮಹಿಳೆಯರ ಬ್ಯಾಗ್ ನಿಂದ ಚಿನ್ನಾಭರಣ ಕದ್ದು ಪರಾರಿಯಾಗುತ್ತಿದ್ದ ತಾಯಿ- ಮಗಳಿದ್ದ ತಂಡವನ್ನು ಪೊಲೀಸರು ಬಂಧಿಸಿದ್ದಾರೆ.

2025ರ ಮೇ 3ರಂದು ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ಲತಾ ಎಂಬವರ ಬ್ಯಾಗ್ ನಲ್ಲಿ ಇರಿಸಿದ್ದ 6,79,000 ರೂ. ಮೌಲ್ಯದ 97 ಗ್ರಾಂ ಚಿನ್ನಾಭರಣವನ್ನು ಕಳವು ಮಾಡಿರುವ ಬಗ್ಗೆ ಧರ್ಮಸ್ಥಳ ಪೊಲೀಸ್ ಪ್ರಕರಣ ದಾಖಲಾಗಿತ್ತು. ಪ್ರಕರಣದ ಆರೋಪಿಗಳಾದ  ಹುಬ್ಬಳ್ಳಿ ನಗರದ ಸಟಲ್ಮೆಂಟ್ ನಿವಾಸಿ ಬಿ.ಬಿ.ಜಾನ್(59) ಮತ್ತು ಆಕೆಯ ಮಗಳು ಆರತಿ @ಮಸಾಬಿ @ ಅಸ್ಮಾ (34) ಎಂಬವರನ್ನು ನ.23ರಂದು ಮತ್ತೆ ಕಳ್ಳತನ ಮಾಡಲು ಬರುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳದ ದ್ವಾರದ ಬಳಿ ದಸ್ತಗಿರಿ ಮಾಡಲಾಗಿದೆ.

ನ.24 ರಂದು ಸೋಮವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗಾಗಿ ಐದು ದಿನ ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದ್ದಾರೆ. ಕಳ್ಳತನ ಮಾಡಿದ ಸುಮಾರು 5,32,000 ಸಾವಿರ ಮೌಲ್ಯದ 76 ಗ್ರಾಂ ಚಿನ್ನಾಭರಣ ಆರೋಪಿಗಳ ಹುಬ್ಬಳಿ ಮನೆಯಿಂದ ನ.25 ರಂದು ಮಂಗಳವಾರ ಧರ್ಮಸ್ಥಳ ಪೊಲೀಸರು ಮಹಜರು ನಡೆಸಿ ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

ಆರೋಪಿಗಳಿಬ್ಬರ ಮೇಲೆ ಈ ಹಿಂದೆ ಹಲವು ಕಳ್ಳತನ ಪ್ರಕರಣಗಳು ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ. ಇಬ್ಬರು ಕೂಡ ದೇವಾಲಯಗಳನ್ನು ಟಾರ್ಗೆಟ್ ಮಾಡಿ ಭಕ್ತಾಧಿಗಳ ಸೋಗಿನಲ್ಲಿ ಹೋಗಿ ಚಿನ್ನಾಭರಣ ಮತ್ತು ಹಣ ಕಳ್ಳತನ ಮಾಡುವ ಪ್ರವೃತ್ತಿ ಹೊಂದಿದ್ದಾರೆ ಎಂದು ಹೇಳಲಾಗಿದೆ. ಇಬ್ಬರು ಆರೋಪಿಗಳ ವಿಚಾರಣೆ ಹಾಗೂ ಮಹಜರು ಮುಗಿಸಿರುವ ಧರ್ಮಸ್ಥಳ ಪೊಲೀಸರು ನ.26 ರಂದು ಬುಧವಾರ ಸಂಜೆ 4:30 ಕ್ಕೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಇಬ್ಬರಿಗೂ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಪ್ರಕರಣ್ ಪತ್ತೆ ಕಾರ್ಯದಲ್ಲಿ ಬೆಳ್ತಂಗಡಿ ಉಪ ವಿಭಾಗ ಡಿವೈಎಸ್ಪಿ ರೋಹಿನಿ ಸಿ.ಕೆ ಮಾರ್ಗದರ್ಶನದಲ್ಲಿ ಬೆಳ್ತಂಗಡಿ  ವೃತ ನಿರೀಕ್ಷಕ ಬಿ.ಜಿ ಸುಬ್ಬಾಪುರ್ ಮಠ್ ರವರ ತಂಡದಲ್ಲಿ  ಧರ್ಮಸ್ಥಳ ಪೊಲೀಸ್ ಉಪ ನಿರೀಕ್ಷಕ ಸಮರ್ಥ್ ಗಾಣಿಗೇರ, ಸಿಬ್ಬಂದಿ ರಾಜೇಶ್, ಪ್ರಶಾಂತ್, ಸಂದೀಪ್, ಮಲ್ಲಿಕಾರ್ಜುನ್, ಶಶಿಕುಮಾರ್, ಮಂಜುನಾಥ್ ಪಾಟೀಲ್, ಪ್ರಮೋದಿನಿ, ಸುನಿತಾ, ಸೌಭಾಗ್ಯ, ದೀಪಾ, ಉಷಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಮಾತಾ ಅಮೃತಾನಂದಮಯಿ ಮಠದ ಶ್ರೀ ಬ್ರಹ್ಮಸ್ಥಾನಂ ಕ್ಷೇತ್ರದಲ್ಲಿ “ನವಗ್ರಹ ಶಾಂತಿ ಹೋಮ”

Next Post

ಮಂಗಳೂರು ಹೊರಗುತ್ತಿಗೆ ನೌಕರನಿಂದ ಲಂಚ ಸ್ವೀಕರಿಸುತ್ತಿದ್ದ ಮೂವರು ಲೋಕಾಯುಕ್ತ ಪೊಲೀಸರ ವಶಕ್ಕೆ

Related Posts

ಮಂಗಳೂರು ಪೊಲೀಸರಿಂದ 82 ಕೋಟಿ ರೂ ಮೌಲ್ಯದ ಮಾದಕ ವಸ್ತುಗಳ ನಾಶ!
ಕ್ರೈಮ್ ನ್ಯೂಸ್

ಮಂಗಳೂರು ಪೊಲೀಸರಿಂದ 82 ಕೋಟಿ ರೂ ಮೌಲ್ಯದ ಮಾದಕ ವಸ್ತುಗಳ ನಾಶ!

July 29, 2026
68
ಬಂಟ್ವಾಳ: ಚಿನ್ನದಾಸೆಗೆ ವೃದ್ಧ ಮಹಿಳೆಗೆ ವಿಷವುಣಿಸಿ, ಉಸಿರುಗಟ್ಟಿಸಿ ಕೊಲೆ ಪ್ರಕರಣ; ಮೂವರಿಗೆ ಜೀವಾವಧಿ ಶಿಕ್ಷೆ
ಕ್ರೈಮ್ ನ್ಯೂಸ್

ಬಂಟ್ವಾಳ: ಚಿನ್ನದಾಸೆಗೆ ವೃದ್ಧ ಮಹಿಳೆಗೆ ವಿಷವುಣಿಸಿ, ಉಸಿರುಗಟ್ಟಿಸಿ ಕೊಲೆ ಪ್ರಕರಣ; ಮೂವರಿಗೆ ಜೀವಾವಧಿ ಶಿಕ್ಷೆ

July 29, 2026
30
Next Post
ಮಂಗಳೂರು ಹೊರಗುತ್ತಿಗೆ ನೌಕರನಿಂದ ಲಂಚ ಸ್ವೀಕರಿಸುತ್ತಿದ್ದ ಮೂವರು ಲೋಕಾಯುಕ್ತ ಪೊಲೀಸರ ವಶಕ್ಕೆ

ಮಂಗಳೂರು ಹೊರಗುತ್ತಿಗೆ ನೌಕರನಿಂದ ಲಂಚ ಸ್ವೀಕರಿಸುತ್ತಿದ್ದ ಮೂವರು ಲೋಕಾಯುಕ್ತ ಪೊಲೀಸರ ವಶಕ್ಕೆ

Discussion about this post

Recent News

ಧರ್ಮಸ್ಥಳದ ಬಂಗ್ಲೆ ಗುಡ್ಡದಲ್ಲಿ ಅಸ್ಥಿಪಂಜರ ಸಿಕ್ಕಿರುವ ಪ್ರಕರಣ; DNA ಪರೀಕ್ಷೆಯಲ್ಲಿ ಬಯಲಾಯ್ತು 3 ಅಸ್ಥಿಪಂಜರಗಳ ರಹಸ್ಯ!

ಧರ್ಮಸ್ಥಳದ ಬಂಗ್ಲೆ ಗುಡ್ಡದಲ್ಲಿ ಅಸ್ಥಿಪಂಜರ ಸಿಕ್ಕಿರುವ ಪ್ರಕರಣ; DNA ಪರೀಕ್ಷೆಯಲ್ಲಿ ಬಯಲಾಯ್ತು 3 ಅಸ್ಥಿಪಂಜರಗಳ ರಹಸ್ಯ!

July 30, 2026
52
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ, ಅವೈಜ್ಞಾನಿಕ ಕಾಮಗಾರಿ, ಅಡಿಕೆ ತೋಟಕ್ಕೆ ನುಗ್ಗಿದ ಮಳೆನೀರು

ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ, ಅವೈಜ್ಞಾನಿಕ ಕಾಮಗಾರಿ, ಅಡಿಕೆ ತೋಟಕ್ಕೆ ನುಗ್ಗಿದ ಮಳೆನೀರು

July 30, 2026
23
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಧರ್ಮಸ್ಥಳದ ಬಂಗ್ಲೆ ಗುಡ್ಡದಲ್ಲಿ ಅಸ್ಥಿಪಂಜರ ಸಿಕ್ಕಿರುವ ಪ್ರಕರಣ; DNA ಪರೀಕ್ಷೆಯಲ್ಲಿ ಬಯಲಾಯ್ತು 3 ಅಸ್ಥಿಪಂಜರಗಳ ರಹಸ್ಯ!

ಧರ್ಮಸ್ಥಳದ ಬಂಗ್ಲೆ ಗುಡ್ಡದಲ್ಲಿ ಅಸ್ಥಿಪಂಜರ ಸಿಕ್ಕಿರುವ ಪ್ರಕರಣ; DNA ಪರೀಕ್ಷೆಯಲ್ಲಿ ಬಯಲಾಯ್ತು 3 ಅಸ್ಥಿಪಂಜರಗಳ ರಹಸ್ಯ!

July 30, 2026
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ, ಅವೈಜ್ಞಾನಿಕ ಕಾಮಗಾರಿ, ಅಡಿಕೆ ತೋಟಕ್ಕೆ ನುಗ್ಗಿದ ಮಳೆನೀರು

ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ, ಅವೈಜ್ಞಾನಿಕ ಕಾಮಗಾರಿ, ಅಡಿಕೆ ತೋಟಕ್ಕೆ ನುಗ್ಗಿದ ಮಳೆನೀರು

July 30, 2026
ಮಂಗಳೂರು ಪೊಲೀಸರಿಂದ 82 ಕೋಟಿ ರೂ ಮೌಲ್ಯದ ಮಾದಕ ವಸ್ತುಗಳ ನಾಶ!

ಮಂಗಳೂರು ಪೊಲೀಸರಿಂದ 82 ಕೋಟಿ ರೂ ಮೌಲ್ಯದ ಮಾದಕ ವಸ್ತುಗಳ ನಾಶ!

July 29, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d