ಮಂಗಳೂರು: ಸುರತ್ಕಲ್ ಕೃಷ್ಣಪುರದಲ್ಲಿ ಶನಿವಾರ ನಡೆದ ಜಲೀಲ್ ಹತ್ಯೆ ಪ್ರಕರಣದಲ್ಲಿ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಕೃಷ್ಣಾಪುರ 4ನೇ ಬ್ಲಾಕಿನ ಲಕ್ಷ್ಮೀಶ ದೇವಾಡಿಗ (28) ಬಂಧಿತ ಆರೋಪಿಯಾಗಿದ್ದಾನೆ
ಜಲೀಲ್ ಹತ್ಯೆ ಪ್ರಕರಣದಲ್ಲಿ ಇದುವರೆಗೆ ಬಂಧಿತರಾದವರ ಸಂಖ್ಯೆ 4ಕ್ಕೇರಿಕೆಯಾಗಿದೆ. ಶೈಲೇಶ್ ಅಲಿಯಾಸ್ ಶೈಲೇಶ್ ಪೂಜಾರಿ(21), ಉಡುಪಿಯ ಹೆಜಮಾಡಿ ನಿವಾಸಿ ಸವಿನ್ ಕಾಂಚನ್ ಅಲಿಯಾಸ್ ಮುನ್ನ (24) ಹೆಜಮಾಡಿ ಉಡುಪಿ, ಕೃಷ್ಣಾಪುರ 3ನೇ ಬ್ಲಾಕ್ ನಿವಾಸಿ ಪವನ್ ಅಲಿಯಾಸ್ ಪಚ್ಚು (23) ಬಂಧಿತ ಆರೋಪಿಗಳು. ಈಗಾಗಾಲೇ 10 ದಿನಗಳ ಪೊಲೀಸ್ ಕಸ್ಟಡಿಯಲ್ಲಿದ್ದು ತನಿಖೆ ಪ್ರಗತಿಯಲ್ಲಿದೆ.
ಹಿಂದೂ ಮಹಿಳೆಯ ವಿಚಾರವಾಗಿ ಜಲೀಲ್ ಕೊಲೆಯಾಗಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದ್ದು ಈ ಬಗ್ಗೆ ಇನ್ನೂ ಹೆಚ್ಚಿನ ತನಿಖೆಯಿಂದ ನಿಜಾಂಶ ಬಯಲಿಗೆ ಬರಲಿದೆ.
Discover more from Coastal Times Kannada
Subscribe to get the latest posts sent to your email.








Discussion about this post