ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೋವಿಡ್‌ಗೆ ನಗರದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. 51ರ ಹರೆಯದ ನಗರದ ನಿವಾಸಿ ಬಿಪಿ , ಶುಗರ್ ಮತ್ತು ಅಸ್ತಮಾ ಕಾಯಿಲೆಯಿಂದ ಬಳಲುತ್ತಿದ್ದರು. ಡಿ.19ರಂದು ಆಸ್ಪತ್ರೆಗೆ ದಾಖಲಾಗಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೋವಿಡ್ ಬಾಧಿತ ಈ ರೋಗಿ ಮೃತಪಟ್ಟಿರುವುದಾಗಿ ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ.
ಕೇರಳದಲ್ಲಿ ಕೋವಿಡ್ ರೂಪಾಂ ತರಿ ಜೆಎನ್.1 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ ಇರಿಸಿ, ಪ್ರತೀ ದಿನ 331 ಮಂದಿಯನ್ನು ಕೋವಿಡ್ ತಪಾಸಣೆಗೆ ಒಳಪಡಿಸು ವಂತೆ ಆರೋಗ್ಯ ಸಚಿವರು ಸೂಚನೆ ನೀಡಿದ್ದರು. ಇಂದು 392 ಮಂದಿಯ ತಪಾಸಣೆ ನಡೆಸಲಾಗಿದ್ದು, ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ. ಕೋವಿಡ್ ವೈರಸ್ ಸೋಂಕಿತ 8 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ತಪಾಸಣೆ ಪ್ರಮಾಣವನ್ನು ಏರಿಕೆ ಮಾಡಲಾಗಿದ್ದು, ಪಾಸಿಟಿವ್ ಕೂಡ ಹೆಚ್ಚಾಗು ತ್ತಿದೆ. ಸೋಮವಾರ 62 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, 5 ಮಂದಿಗೆ ಸೋಂಕು ದೃಢಪಟ್ಟಿದೆ. ಪುತ್ತೂರು ಮೂಲದ ಬೆಂಗಳೂರಿನ ಒಬ್ಬರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಒಟ್ಟು ಕೋವಿಡ್ ಪ್ರಕರಣ 9ಕ್ಕೆ ಏರಿಕೆ ಕಂಡಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ದ.ಕ.ದಲ್ಲಿ ಕೋವಿಡ್ ದೃಢಪಟ್ಟ ಮೂವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇಬ್ಬರು ಖಾಸಗಿ ಮತ್ತು ಒಬ್ಬರು ಸರಕಾರಿ ಆಸ್ಪತ್ರೆ ಯಲ್ಲಿ ಐಸಿಯುನಲ್ಲಿದ್ದಾರೆ. ಇಬ್ಬರು ಗೃಹ ನಿಗಾವಣೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post