ನವದೆಹಲಿ: ದೇಶದ ಮಾಜಿ ಪ್ರಧಾನಮಂತ್ರಿ, ಆರ್ಥಿಕ ತಜ್ಞ ಮನಮೋಹನ್ ಸಿಂಗ್ ಅವರು ವಿಧಿವಶರಾಗಿದ್ದಾರೆ. ಇಂದು ರಾತ್ರಿ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ (ಏಮ್ಸ್) ದಾಖಲಿಸಲಾಗಿತ್ತು. 92 ವರ್ಷದ ಮಾಜಿ ಪ್ರಧಾನಿಯನ್ನು ರಾತ್ರಿ 8 ಗಂಟೆ ಸುಮಾರಿಗೆ ಆಸ್ಪತ್ರೆಯ ತುರ್ತು ನಿಗಾ ವಿಭಾಗದಲ್ಲಿ ದಾಖಲಿಸಲಾಗಿತ್ತು.
ಡಾ. ಸಿಂಗ್ ಅವರ ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನೆಲೆ ಅವರನ್ನು ಗುರುವಾರ ಸಂಜೆ ಏಮ್ಸ್ಗೆ ಕರೆತರಾಗಿತ್ತು. ಬಳಿಕ ಅವರನ್ನು ತುರ್ತು ನಿಗಾ ಘಟಕದಲ್ಲಿ ದಾಖಲಿಸಲಾಗಿತ್ತು. ಅವರು ವಿಧಿವಶರಾಗಿದ್ದಾರೆ ಎಂದು ಏಮ್ಸ್ ವೈದ್ಯರು ತಿಳಿಸಿದ್ದಾರೆ.
ಮನಮೋಹನ್ ಸಿಂಗ್ ಅವರು 1991- 96ರ ಅವಧಿಯಲ್ಲಿ ಮಾಜಿ ಪ್ರಧಾನಿ ಪಿ. ವಿ. ನರಸಿಂಹರಾವ್ ಅವರ ನೇತೃತ್ವದ ಸರ್ಕಾರದಲ್ಲಿ ಹಣಕಾಸು ಸಚಿವರಾಗಿ ಕಾರ್ಯನಿರ್ವಹಿಸಿ ಮೆಚ್ಚುಗೆ ಗಳಿಸಿದ್ದರು. ದೇಶದ ಆರ್ಥಿಕತೆಯಲ್ಲಿ ವ್ಯಾಪಕ ಸುಧಾರಣೆಗಳನ್ನು ತಂದಿದ್ದರು. ಕಾಂಗ್ರೆಸ್ ನೇತೃತ್ವದಲ್ಲಿ 2004 ರಿಂದ 2014ರ ವರೆಗಿನ ಯುಪಿಎ ಸರ್ಕಾರದ ಎರಡು ಅವಧಿಯಲ್ಲಿ ಪ್ರಧಾನಿಯಾಗಿದ್ದರು. ಬಳಿಕ ರಾಜ್ಯಸಭೆಗೆ ಆಯ್ಕೆಯಾಗಿದ್ದ ಅವರು, ಈ ವರ್ಷದ ಏಪ್ರಿಲ್ನಲ್ಲಿ ರಾಜಕೀಯದಿಂದ ನಿವೃತ್ತ ಪಡೆದಿದ್ದರು.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶುಕ್ರವಾರ (ಇಂದು) ಸರ್ಕಾರಿ ರಜೆ ಘೋಷಣೆ ಮಾಡಿದೆ. ಮನಮೋಹನಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ.
Discover more from Coastal Times Kannada
Subscribe to get the latest posts sent to your email.
Discussion about this post