ಸುರತ್ಕಲ್, ಫೆ 28:ನಿನ್ನೆಯಿಂದ ನಾಪತ್ತೆಯಾಗಿದ್ದ ಸುರತ್ಕಲ್‌ನ ಖಾಸಗಿ ಶಾಲೆಯ ನಾಲ್ವರು ವಿದ್ಯಾರ್ಥಿಗಳ ಮೃತದೇಹ ಹಳೆಯಂಗಡಿಯ ಕೊಪ್ಪಳ ಆಣೆಕಟ್ಟಿನ ರೈಲ್ವೆ ಸೇತುವೆ ಕೆಳಭಾಗದ ನದಿಯಲ್ಲಿ ಪತ್ತೆ ದಾರುಣ ಘಟನೆ ನಡೆದಿದೆ. ಮೃತ ಮಕ್ಕಳನ್ನು ಹಳೆಯಂಗಡಿ ತೋಕೂರು ನಿವಾಸಿ ವಸಂತ ಅವರ ಪುತ್ರ ರಾಘವೇಂದ್ರ (15), ಚಿತ್ರಾಪುರ ನಿವಾಸಿ ದೇವದಾಸ ಅವರ ಪುತ್ರ ಅನ್ವಿತ್( 15), ಸುರತ್ಕಲ್ ಅಗರಮೇಲ್ ನಿವಾಸಿ ಚಂದ್ರಕಾಂತ ಅವರ ಮಗ ಯಶ್ವಿತ್ (15) ಹಾಗೂ ಸುರತ್ಕಲ್ ಗೊಡ್ಡೆಕೊಪ್ಲ ನಿವಾಸಿ ವಿಶ್ವನಾಥ ಅವರ ಮಗ ನಿರೂಪ್ (15) ಮೃತ ದುರ್ದೈವಿಗಳು.
ಘಟನೆ ಹಿನ್ನೆಲೆ : ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ತಾಲೂಕಿನ ಸುರತ್ಕಲ್ ಪಟ್ಟಣದ ವಿದ್ಯಾದಾಯಿನಿ ಪ್ರೌಢಶಾಲೆಯಲ್ಲಿ SSLC ಓದುತ್ತಿದ್ದ ವಿದ್ಯಾರ್ಥಿಗಳು ನಿನ್ನೆ SSLC ಇಂಗ್ಲಿಷ್ ಪೂರ್ವಸಿದ್ಧತಾ ಪರೀಕ್ಷೆಗೆ ಹಾಜರಾಗಿದ್ದರು. ಪರೀಕ್ಷೆ ಬರೆದು ಶಾಲೆಯಿಂದ ಹೊರಬಂದ 4 ವಿದ್ಯಾರ್ಥಿಗಳು ನಾಪತ್ತೆಯಾಗಿದ್ದರು. ನಾಪತ್ತೆ ಪ್ರ ಕರಣ ದಾಖಲಾಗುತ್ತಿದ್ದಂತೆಯೇ ಕಾರ್ಯಾಚರಣೆಗೆ ಇಳಿದಿದ್ದ ಸುರತ್ಕ ಲ್ ಠಾಣಾ ಪೊಲೀಸರು, ಶಾಲೆ ಮತ್ತು ಬಸ್ ನಿಲ್ದಾಣದ ಬಳಿಯ ಸಿಸಿಟಿವಿ ದೃಶ್ಯಾ ವಳಿಗಳನ್ನು ತರಿಸಿಕೊಂಡಿದ್ದರು. ವಿದ್ಯಾರ್ಥಿಗಳು ಸುರತ್ಕಲ್ ಬಸ್ ನಿಲ್ದಾಣದಿಂದ ಬಸ್ ಹತ್ತಿ ಹಳೆಯಂಗಡಿ ಬಸ್ ನಿಲ್ದಾಣದಲ್ಲಿ ಬಸ್ ಇಳಿದಿರುವುದನ್ನು ಪತ್ತೆಹಚ್ಚಿದ್ದರು. ಜೊತೆಗೆ ವಿದ್ಯಾರ್ಥಿಯೋರ್ವನ ಬಳಿ ಇತ್ತೆನ್ನಲಾದ ಮೊಬೈಲ್ ಟವರ್ ಲೋಕೇಶನ್ ಆಧರಿಸಿ ವಿದ್ಯಾರ್ಥಿಗಳು ನದಿಯ ದಡಕ್ಕೆ ಬಂದಿರುವುದನ್ನು ಖಚಿತ ಪಡಿಸಿಕೊಂಡು ಸ್ಥ ಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ನದಿಯ ದಡದಲ್ಲಿ ಮಕ್ಕಳ ಶಾಲೆಯ ಚೀಲಗಳು, ಚಪ್ಪಲಿ ಶಾಲೆಯ ಸಮವಸ್ತ್ರಗಳು ಪತ್ತೆಯಾಗಿವೆ. ಎಲ್ಲಾ ಶವಗಳನ್ನು ಮರಣೋತ್ತರ ಪರೀಕ್ಷೆ ಗಾಗಿ ನಗರದ ವೆನ್ ಲಾಕ್ ಆಸ್ಪತ್ರೆ ಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Discover more from Coastal Times Kannada
Subscribe to get the latest posts sent to your email.
Discussion about this post