• About us
  • Contact us
  • Disclaimer
Tuesday, October 13, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬೆಚ್ಚಿಬಿದ್ದ ಬೆಂಗಳೂರು: ಪತ್ನಿಯನ್ನ ತುಂಡರಿಸಿ ಸೂಟ್ ಕೇಸ್​ನಲ್ಲಿ ತುಂಬಿಟ್ಟ ಪತಿ

Coastal Times by Coastal Times
March 28, 2025
in ಕ್ರೈಮ್ ನ್ಯೂಸ್
ಬೆಚ್ಚಿಬಿದ್ದ ಬೆಂಗಳೂರು: ಪತ್ನಿಯನ್ನ ತುಂಡರಿಸಿ ಸೂಟ್ ಕೇಸ್​ನಲ್ಲಿ ತುಂಬಿಟ್ಟ ಪತಿ
135
VIEWS
WhatsappTelegramShare on FacebookShare on Twitter

ಬೆಂಗಳೂರು,ಮಾ​ 27: ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಕೊಂದು ಬಳಿಕ ಆಕೆ ದೇಹವನ್ನು ತುಂಡರಿಸಿ ಸೂಟ್ ಕೇಸ್ ಗೆ ತುಂಬಿರುವ  ಘೋರಭಯಾನಕ ಘಟನೆ ಬೆಂಗಳೂರಿನ ಹುಳಿಮಾವು ಸಮೀಪದ ದೊಡ್ಡ ಕನ್ನಹಳ್ಳಿಯ ಮನೆಯೊಂದರಲ್ಲಿ ನಡೆದಿದೆ.  ಮಹಾರಾಷ್ಟ್ರ ಮೂಲದ ಆರೋಪಿ ಪತಿ ರಾಕೇಶ್​ ಎಂಬಾತ ಪತ್ನಿ ಗೌರಿ ಅನಿಲ್ ಸಾಂಬೆಕರ್(32) ಕೊಂದು ಬಳಿಕ ಮೃತದೇಹವನ್ನು ತುಂಡರಿಸಿ ಸೂಟ್ ಕೇಸ್​ನಲ್ಲಿ ತುಂಬಿಟ್ಟಿದ್ದಾನೆ. ಬಳಿಕ ಈ ವಿಚಾರವನ್ನು ಆಕೆಯ ಪೋಷಕರಿಗೆ ಕರೆ ಮಾಡಿ ತಿಳಿಸಿದ್ದಾನೆ. ಬಳಿಕ ಮಹಾರಾಷ್ಟ್ರ ಪೊಲೀಸರ ಮಾಹಿತಿ ಆಧರಿಸಿ ಬೆಂಗಳೂರಿನ ಹುಳಿಮಾವು ಪೊಲೀಸರು ಮನೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಇನ್ನು ರಾಕೇಶ್​ ಕ್ರೌರ್ಯದ  ಸುದ್ದಿ ಕೇಳಿ ಅಕ್ಕಪಕ್ಕದ ಜನ ಬೆಚ್ಚಿಬಿದ್ದಿದ್ದಾರೆ.

ಕಳೆದ ಒಂದು ವರ್ಷದ ಹಿಂದೆ ಬೆಂಗಳೂರಿನ ದೊಡ್ಡಕಮ್ಮನಹಳ್ಳಿ ಮನೆಯಲ್ಲಿ ವಾಸವಿದ್ದ ಮಹಾರಾಷ್ಟ್ರ ಮೂಲದ ರಾಕೇಶ್​ ಹಾಗೂ ಗೌರಿ ಅನಿಲ್ ಸಾಂಬೆಕರ್ ದಂಪತಿ, ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರು. ಆದ್ರೆ, ವರ್ಕ್ ಫ್ರಂ ಹೋಂ ಹಿನ್ನೆಲೆಯಲ್ಲಿ ಮನೆಯಿಂದಲೇ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಆದ್ರೆ,  ಏಕೆ ಕೊಲೆ ಮಾಡಿ ಈ ಕೃತ್ಯ ಎಸಗಿದ್ದಾನೆ ಎನ್ನುವುದರ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ತಿಳಿದುಬಂದಿದಲ್ಲ. ಇದೀಗ ಹುಳಿಮಾವು ದೊಡ್ಡಕಮ್ಮನಹಳ್ಳಿಯ ಮನೆಗೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

ಪತ್ನಿಯ ಪೋಷಕರಿಗೆ ಕರೆ ಮಾಡಿದ ಆರೋಪಿ: ಮಹಾರಾಷ್ಟ್ರ ಮೂಲದ ರಾಕೇಶ್​ ಎಂಬಾತ ತನ್ನ ಪತ್ನಿ ಗೌರಿ ಸಾಂಬೆಕರ್ (32) ಎಂಬವಳನ್ನು ಕೊಲೆಗೈದು, ಬಳಿಕ ಮೃತದೇಹವನ್ನು ತುಂಡು ತುಂಡು ಮಾಡಿ ಸೂಟ್​​ಕೇಸ್​ನಲ್ಲಿ ತುಂಬಿಟ್ಟಿದ್ದ. ನಂತರ ‘ಪತ್ನಿ ಆತ್ಮಹತ್ಯೆಗೆ ಶರಣಾಗಿರುವುದಾಗಿ’ ಆಕೆಯ ಪೋಷಕರಿಗೆ ಕರೆ ಮಾಡಿ ತಿಳಿಸಿದ್ದಾನೆ. ಇದರಿಂದ ಬೆಚ್ಚಿಬಿದ್ದ ಗೌರಿ ಪೋಷಕರು ಕೂಡಲೇ ಮಹಾರಾಷ್ಟ್ರದ ಸ್ಥಳೀಯ ಪೊಲೀಸ್​ ಠಾಣೆಗೆ ತೆರಳಿ ರಾಕೇಶ್​ ಕೃತ್ಯವನ್ನು ತಿಳಿಸಿದ್ದಾರೆ.ಈ ಮಾಹಿತಿ ಮೇರೆಗೆ ಹುಳಿಮಾವು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿದ್ದಾರೆ. ಇನ್ನು ಸ್ಥಳಕ್ಕೆ ಡಿಸಿಪಿ ಸಾರಾ ಫಾತಿಮಾ ಸಹ ಭೇಟಿ  ಪರಿಶೀಲನೆ ನಡೆಸಿದ್ದಾರೆ.

ತಿಂಗಳ ಹಿಂದಷ್ಟೇ ರಾಕೇಶ್, ಗೌರಿ ಈ ಮನೆಗೆ ಬಾಡಿಗೆ ಬಂದಿದ್ದು, ನಿನ್ನೆ (ಮಾರ್ಚ್​ 26) ರಾತ್ರಿ 12.30ಕ್ಕೆ ಕೃತ್ಯವೆಸಗಿ ಮನೆಯಿಂದ ಹೊರಬಂದಿದ್ದ ಪರಾರಯಾಗಿದ್ದಾನೆ. ಇನ್ನು ಮನೆಯಿಂದ ಹೋಗುವ ಮುನ್ನ ರಾಕೇಶ್, ಅದೇ ಕಟ್ಟಡದಲ್ಲಿ ನೆಲೆಸಿದ್ದ ಮತ್ತೊಬ್ಬರಿಗೆ ಕರೆ ಮಾಡಿ ನನ್ನ ಪತ್ನಿ ಮೃತಪಟ್ಟಿರುವುದಾಗಿ ತಿಳಿಸಿದ್ದಾನೆ. ಇದರಿಂದ ಹೆದರಿದ ಬಾಡಿಗೆ ಮನೆ ನಿವಾಸಿ ಮಾಲೀಕರಿಗೆ ಕರೆ ಮಾಹಿತಿ ನೀಡಿದ್ದಾರೆ. ಬಳಿಕ ಮನೆ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ FSL ತಜ್ಞರ ಪರಿಶೀಲನೆ ಮಾಡುತ್ತಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಸಿಸಿ ಕ್ಯಾಮರಾಗೆ ಸ್ಪ್ರೇ ಮಾಡಿ ATMನಿಂದ 30 ಲಕ್ಷ ಹಣ ದೋಚಿದ ಕಳ್ಳರು

Next Post

ಸಿಸಿಬಿ ಪೊಲೀಸರ ಕಾರ್ಯಾಚರಣೆ ; ಹೈಡ್ರೋವೀಡ್ ಗಾಂಜಾ, ಚರಸ್ ಮಾರಾಟ ಮಾಡುತ್ತಿದ್ದ ಯುವಕರಿಬ್ಬರ ಸೆರೆ

Related Posts

ಮಂಗಳೂರು ಪಂಜಿಮೊಗರು ಅನೈತಿಕ ಸಂಬಂಧ ಶಂಕೆ; ಪತ್ನಿಯ ಭೀಕರ ಕೊಲೆ, ಪತಿಯ ಬಂಧನ
ಕ್ರೈಮ್ ನ್ಯೂಸ್

ಮಂಗಳೂರು ಪಂಜಿಮೊಗರು ಅನೈತಿಕ ಸಂಬಂಧ ಶಂಕೆ; ಪತ್ನಿಯ ಭೀಕರ ಕೊಲೆ, ಪತಿಯ ಬಂಧನ

October 13, 2026
31
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯಾಚಾರ! ಬೆಂಗಳೂರಲ್ಲಿ ಸತೀಶ್ ಪಾತ್ರಿ ಬಂಧನ
ಕ್ರೈಮ್ ನ್ಯೂಸ್

ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯಾಚಾರ! ಬೆಂಗಳೂರಲ್ಲಿ ಸತೀಶ್ ಪಾತ್ರಿ ಬಂಧನ

October 12, 2026
85
Next Post
ಸಿಸಿಬಿ ಪೊಲೀಸರ ಕಾರ್ಯಾಚರಣೆ ; ಹೈಡ್ರೋವೀಡ್ ಗಾಂಜಾ, ಚರಸ್ ಮಾರಾಟ ಮಾಡುತ್ತಿದ್ದ ಯುವಕರಿಬ್ಬರ ಸೆರೆ

ಸಿಸಿಬಿ ಪೊಲೀಸರ ಕಾರ್ಯಾಚರಣೆ ; ಹೈಡ್ರೋವೀಡ್ ಗಾಂಜಾ, ಚರಸ್ ಮಾರಾಟ ಮಾಡುತ್ತಿದ್ದ ಯುವಕರಿಬ್ಬರ ಸೆರೆ

Discussion about this post

Recent News

ಮಂಗಳೂರು ಪಂಜಿಮೊಗರು ಅನೈತಿಕ ಸಂಬಂಧ ಶಂಕೆ; ಪತ್ನಿಯ ಭೀಕರ ಕೊಲೆ, ಪತಿಯ ಬಂಧನ

ಮಂಗಳೂರು ಪಂಜಿಮೊಗರು ಅನೈತಿಕ ಸಂಬಂಧ ಶಂಕೆ; ಪತ್ನಿಯ ಭೀಕರ ಕೊಲೆ, ಪತಿಯ ಬಂಧನ

October 13, 2026
31
ಕರ್ನಾಟಕ ಸೇರಿ 6 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ: ರಾಜ್ಯದ ಗವರ್ನರ್ ಆಗಿ​ ಡಾ.ಸುಧಾ ಯಾದವ್

ಕರ್ನಾಟಕ ಸೇರಿ 6 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ: ರಾಜ್ಯದ ಗವರ್ನರ್ ಆಗಿ​ ಡಾ.ಸುಧಾ ಯಾದವ್

October 13, 2026
16
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ಪಂಜಿಮೊಗರು ಅನೈತಿಕ ಸಂಬಂಧ ಶಂಕೆ; ಪತ್ನಿಯ ಭೀಕರ ಕೊಲೆ, ಪತಿಯ ಬಂಧನ

ಮಂಗಳೂರು ಪಂಜಿಮೊಗರು ಅನೈತಿಕ ಸಂಬಂಧ ಶಂಕೆ; ಪತ್ನಿಯ ಭೀಕರ ಕೊಲೆ, ಪತಿಯ ಬಂಧನ

October 13, 2026
ಕರ್ನಾಟಕ ಸೇರಿ 6 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ: ರಾಜ್ಯದ ಗವರ್ನರ್ ಆಗಿ​ ಡಾ.ಸುಧಾ ಯಾದವ್

ಕರ್ನಾಟಕ ಸೇರಿ 6 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ: ರಾಜ್ಯದ ಗವರ್ನರ್ ಆಗಿ​ ಡಾ.ಸುಧಾ ಯಾದವ್

October 13, 2026
ಸೈಂಟ್ ಆಗ್ನೆಸ್ ಕಾಲೇಜು ವಿದ್ಯಾರ್ಥಿನಿಯರ ಪ್ರತಿಭಟನೆಗೆ ಸಂಬಂಧಿಸಿದಂತೆ ಆಡಳಿತ ಮಂಡಳಿಯ ಸ್ಪಷ್ಟೀಕರಣ

ಸೈಂಟ್ ಆಗ್ನೆಸ್ ಕಾಲೇಜು ವಿದ್ಯಾರ್ಥಿನಿಯರ ಪ್ರತಿಭಟನೆಗೆ ಸಂಬಂಧಿಸಿದಂತೆ ಆಡಳಿತ ಮಂಡಳಿಯ ಸ್ಪಷ್ಟೀಕರಣ

October 13, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d