ಮಂಗಳೂರು, ಮಾ.28 :ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಹೈಡ್ರೋವೀಡ್ ಗಾಂಜಾ, ಚರಸ್ ಹಾಗೂ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಯುವಕರಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನಿಂದ ಹೈಡ್ರೋವೀಡ್ ಗಾಂಜಾ, ಚರಸ್ ಹಾಗೂ ಗಾಂಜಾವನ್ನು ಖರೀದಿಸಿ ಮಂಗಳೂರು ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಶಿವಭಾಗ್ 5ನೇ ಕ್ರಾಸ್ ರಸ್ತೆಯಲ್ಲಿದ್ದಾಗ ಕಾರ್ಯಾಚರಣೆ ನಡೆಸಿದ್ದಾರೆ.
ಪಾಂಡೇಶ್ವರ ಸುಭಾಸ್ ನಗರ ನಿವಾಸಿ ತೈಸಿರ್ ಇಸ್ಮಾಯಿಲ್ ಹುಸೈನ್(23), ಬಂಟ್ವಾಳ ಬೋಳಂಗಡಿ ನಿವಾಸಿ ರೋಯಸ್ಟನ್ ಕ್ಸೇವಿಯರ್ ಲೋಬೋ(22) ಎಂಬವರನ್ನು ವಶಕ್ಕೆ ಪಡೆಯಲಾಗಿದೆ. ಅವರ ವಶದಿಂದ 8,00,000/- ಮೌಲ್ಯದ ನಿಷೇಧಿತ ಮಾದಕ ವಸ್ತುವಾದ ಹೈಡ್ರೋವೀಡ್, ಗಾಂಜಾ,ಚರಸ್ ಮತ್ತು ಗಾಂಜಾವನ್ನು ಹಾಗೂ 2 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳಿಂದ ವಶಪಡಿಸಿಕೊಂಡ ಸೊತ್ತಿನ ಮೌಲ್ಯ ರೂ. 9 ಲಕ್ಷ ಆಗಬಹುದು. ಈ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಆರೋಪಿಗಳು ಐಷಾರಾಮಿ ಜೀವನ ಸಾಗಿಸುವ ಉದ್ದೇಶದಿಂದ ಮಾದಕ ವಸ್ತು ಮಾರಾಟದ ದಂಧೆಯನ್ನು ನಡೆಸುತ್ತಿದ್ದರು.
ಕಾರ್ಯಚರಣೆಯಲ್ಲಿ ಪೊಲೀಸ್ ಆಯುಕ್ತರಾದ ಅನುಪಮ್ ಅಗ್ರವಾಲ್ IPS ರವರ ಮಾರ್ಗದರ್ಶನದಲ್ಲಿ, ಉಪ ಪೊಲೀಸ್ ಆಯುಕ್ತರು( ಕಾನೂನು & ಸುವ್ಯವಸ್ಥೆ ವಿಭಾಗ) ರವರಾದ ಶ್ರೀ ಸಿದ್ದಾರ್ಥ ಗೋಯಲ್, IPS ಮತ್ತು ಉಪ ಪೊಲೀಸ್ ಆಯುಕ್ತರು (ಅಪರಾಧ ಮತ್ತು ಸಂಚಾರ ವಿಭಾಗ) ರವರಾದ ಕೆ.ರವಿಶಂಕರ್, KSPS ರವರ ನಿರ್ದೇಶನದಲ್ಲಿ ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ರವರ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ರಫೀಕ್ ಕೆ ಎಂ, ಪಿಎಸ್ಐ ನರೇಂದ್ರ, ಎಎಸ್ಐ ಯವರಾದ ರಾಮ ಪೂಜಾರಿ, ಶೀನಪ್ಪ, ಸುಜನ್ ಶೆಟ್ಟಿ ಮತ್ತು ಸಿಸಿಬಿ ಘಟಕದ ಸಿಬ್ಬಂದಿಯವರು ಪಾಲ್ಗೊಂಡಿದ್ದರು.
Discover more from Coastal Times Kannada
Subscribe to get the latest posts sent to your email.
Discussion about this post