• About us
  • Contact us
  • Disclaimer
Sunday, May 10, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಹೊಸ ನಿರೀಕ್ಷೆ ಹುಟ್ಟುಹಾಕಿದ – ವಾದಿರಾಜ ವಾಲಗ ಮಂಡಳಿ ಹಾಸ್ಯಮಯ ಸಿನಿಮಾದ ಚಿತ್ರೀಕರಣ ಮುಕ್ತಾಯ- ನಿರ್ಮಾಪಕ ಡಾ. ಎಂ.ಎನ್ ರಾಜೇಂದ್ರ ಕುಮಾರ್

Coastal Times by Coastal Times
April 28, 2026
in ಕರಾವಳಿ, ಸಿನಿಮಾ
ಹೊಸ ನಿರೀಕ್ಷೆ ಹುಟ್ಟುಹಾಕಿದ – ವಾದಿರಾಜ ವಾಲಗ ಮಂಡಳಿ ಹಾಸ್ಯಮಯ ಸಿನಿಮಾದ ಚಿತ್ರೀಕರಣ ಮುಕ್ತಾಯ- ನಿರ್ಮಾಪಕ ಡಾ. ಎಂ.ಎನ್ ರಾಜೇಂದ್ರ ಕುಮಾರ್
41
VIEWS
WhatsappTelegramShare on FacebookShare on Twitter

ಮಂಗಳೂರು : ಕನ್ನಡ ಚಿತ್ರರಂಗದಲ್ಲಿ ಮತ್ತೊಂದು ವಿಭಿನ್ನ ಪ್ರಯೋಗವಾಗಿ ಮೂಡಿಬರುತ್ತಿರುವ “ವಾದಿರಾಜ ವಾಲಗ ಮಂಡಳಿ” ಸಿನಿಮಾದ ಚಿತ್ರೀಕರಣ ಈಗಾಗಲೇ ಪೂರ್ಣಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಹಂತದ ಕೆಲಸಗಳು ನಡೆಯುತ್ತಿವೆ. “ಎಮ್.ಎನ್.ಆರ್.ಪ್ರೊಡಕ್ಷನ್” ನಲ್ಲಿ ನಿರ್ಮಾಣವಾಗುತ್ತಿರುವ ಹಾಸ್ಯಮಯ ಕನ್ನಡ ಚಲನಚಿತ್ರ ವಿಭಿನ್ನ ಕಥಾಹಂದರ, ವಿಶಿಷ್ಟ ಶೀರ್ಷಿಕ ಹಾಗೂ ಕಲಾವಿದರ ಹೊಸ ಗೆಟಪ್ ಪುಮುಖ ಆಕರ್ಷಣೆಗಳಾಗಿವೆ. ಕನ್ನಡ ಚಿತ್ರರಂಗದಲ್ಲಿ ಹೊಸ ಪುಯೋಗಗಳು ಸದಾ ಸದಾ ಸ್ವಾಗತಾರ್ಹವಾಗಿದ್ದು, “ವಾದಿರಾಜ ವಾಲಗ ಮಂಡಳಿ” ಕೂಡ ಅದೇ ದಾರಿಯಲ್ಲಿ ಗಮನ ಸೆಳೆಯುತ್ತಿದೆ. ಹಾಗಾಗಿ ಸಿನಿಪ್ರೇಮಿಗಳಲ್ಲಿ ಈಗಾಗಲೇ ಕುತೂಹಲ ಹಾಗೂ ನಿರೀಕ್ಷೆಯನ್ನು ಹೆಚ್ಚಿಸಿದೆ ಎಂದು ಚಿತ್ರದ ನಿರ್ಮಾಪಕರಾದ ಡಾ.ಎಂ.ಎನ್ ರಾಜೇಂದ್ರ ಕುಮಾರ್ ರವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

“ವರಾಹ ರೂಪಂ'” ಹಾಡಿನ ಖ್ಯಾತಿಯ ಶಶಿರಾಜ್ ಕಾವೂರು ಈ ಚಿತ್ರದ ಮೂಲಕ ನಿರ್ದೇಶಕರಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಅವರು ಕಥೆ, ಚಿತ್ರಕತೆ ಮತ್ತು ಸಂಭಾಷಣೆಯ ಜೊತೆಗೆ ನಿರ್ದೇಶನದ ಜವಾಬ್ದಾರಿಯನ್ನೂ ಹೊತ್ತಿದ್ದಾರೆ. ಈ ಸಿನಿಮಾ, ಸುಮಾರು 50 ದಿನಗಳ ಕಾಲ ಎರಡು ಹಂತಗಳಲ್ಲಿ ಚಿತ್ರೀಕರಣ ಮುಗಿಸಿದೆ. ಈಗ ಸಂಕಲನ, ಹಿನ್ನೆಲೆ ಸಂಗೀತ ಮತ್ತು ಡಬ್ಬಿಂಗ್ ಕೆಲಸಗಳಲ್ಲಿ ಶಶಿರಾಜ್ ನಿರತರಾಗಿದ್ದಾರೆ. ಈ ಸಿನಿಮಾದಲ್ಲಿ ಜಯಪ್ರಕಾಶ್ ತುಂಬೆ ಸಹ ನಿರ್ಮಾಪಕರಾದರೆ, ಸಂತೋಷ್ ಶೆಟ್ಟಿ, ಕಾರ್ಯಕಾರಿ ನಿರ್ಮಾಪಕರಾಗಿ ಮತ್ತು ರಾಜೇಶ್ ಕುಡ ಮತ್ತು ಕಾರ್ತಿಕ್ ಪ್ರೊಡಕ್ಷನ್ ಮ್ಯಾನೇಜರ್ ಆಗಿ ಸಹಕರಿಸಿದ್ದಾರೆ.

ಚಿತ್ರದಲ್ಲಿ ಹಾಸ್ಯ, ಭಾವನೆ ಹಾಗೂ ಸಾಮಾಜಿಕ ಅಂಶಗಳನ್ನು ಸಂಯೋಜಿಸಿ ಸಂಪೂರ್ಣ ಮನರಂಜನಾ ಪ್ಯಾಕೇಜ್ ರೂಪಿಸಲಾಗಿದೆ. ಕುಟುಂಬ ಸಮೇತ ವೀಕ್ಷಿಸಬಹುದಾದ ಚಿತ್ರವಾಗಿದ್ದು, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿಯೂ ಬಿಡುಗಡೆ ಮಾಡುವ ಯೋಜನೆ ಇದೆ ಎಂದು ಹೇಳಿದರು.

ಕರಾವಳಿಯ ಜನಪ್ರಿಯ ಕಲಾವಿದರಾದ ನವೀನ್ ಡಿ. ಪಡೀಲ್, ಪ್ರಕಾಶ್ ತೂಮಿನಾಡು, ಮೈಮ್ ರಾಮದಾಸ್, ದೀಪಕ್ ರೈ ಪಾಣಾಜೆ ,ಶೋಭರಾಜ್ ಪಾವೂರು, ಚೇತನ್ ರೈ.ಮಾಣಿ, ಪುಷ್ಪರಾಜ್ ಬೊಳ್ಳಾರ್, ಗೋಪಿನಾಥ್ ಭಟ್  ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅರ್ಜುನ್ ವೇದಾಂತ ಮತ್ತು ಅಥರ್ವ ಪ್ರಕಾಶ್ ನಾಯಕ ನಟರಾಗಿ ಅಭಿನಯಿಸಿದ್ದು, ತನ್ವಿ ರಾವ್ ಹಾಗೂ ವೇನ್ಯ ರೈ ನಾಯಕಿಯರಾಗಿ ನಟಿಸಿದ್ದಾರೆ. ಲಕ್ಷ್ಮಣ ಕುಮಾರ್ ಮಲ್ಲೂರು ಸೇರಿದಂತೆ ಹಲವು ಅನುಭವಿ ಕಲಾವಿದರು ಚಿತ್ರದಲ್ಲಿದ್ದಾರೆ.

ಆಗಸ್ಟ್‌ ತಿಂಗಳಲ್ಲಿ ಭರ್ಜರಿ ಬಿಡುಗಡೆ: ಕರಾವಳಿ ಭಾಷೆಯ ನೈಜತೆಯನ್ನು ಉಳಿಸಿಕೊಂಡು, ಅದನ್ನು ಎಲ್ಲಾ ವರ್ಗದ ಪ್ರೇಕ್ಷಕರಿಗೂ ಹತ್ತಿರವಾಗುವಂತೆ “ವಾದಿರಾಜ ವಾಲಗ ಮಂಡಳಿ” ಸಿನಿಮಾ  ಚಿತ್ರಿಕರಣಗೊಂಡಿದ್ದು, ಹಾಸ್ಯಮಯ ಆಗಸ್ಟ್ ತಿಂಗಳಲ್ಲಿ ಮೇಲೆ ಈಗಾಗಲೇ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಚಿತ್ರದ ಸಿನಿಪ್ರೇಮಿಗಳಲ್ಲಿ ಉತ್ತಮ ನಿರೀಕ್ಷೆ ನಿರ್ಮಾಣವಾಗಿದ್ದು, ಬಿಡುಗಡೆಯ ನಂತರ ಉತ್ತಮ ಪ್ರತಿಕ್ರಿಯೆ ಸಿಗುವ ವಿಶ್ವಾಸ ಚಿತ್ರತಂಡಕ್ಕಿದೆ.

ಪತ್ರಿಕಾಗೋಷ್ಠಿಯಲ್ಲಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನ ಆಡಳಿತ ಮಂಡಳಿಯ ನಿರ್ದೇಶಕರು, ಮೇಘರಾಜ್, ವಾದಿರಾಜ ವಾಲಗ ಮಂಡಳಿ ಚಿತ್ರದ ನಿರ್ದೇಶಕ ಶಶಿರಾಜ್ ಕಾವೂರು, ಸಂಗೀತ ನಿರ್ದೇಶಕ ಮಣಿಕಾಂತ್ ಕದ್ರಿ, ಸಹ ನಿರ್ದೇಶಕ ಜಯಪ್ರಕಾಶ್ ತುಂಬೆ, ನಟ ಅರ್ಜುನ್ ವೇದಾಂತ್, ವೇನ್ಯ ರೈ, ಮೈಮ್ ರಾಮದಾಸ್, ರಾಜೇಶ್ ಕುಡ್ಲ, ಶೋಭಾರಾಜ್ ಪಾವೂರು, ಅಕ್ಷತ ವಿಟ್ಲ, ಗೋಪಿನಾಥ್ ಭಟ್ , ಚೇತನ್ ರೈ ಮಾಣಿ ಹಾಗೂ ಇನ್ನಿತೃರರು ಉಪಸ್ಥಿತರಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಕಣ್ಣೂರು : ಮಾದಕ ವ್ಯಸನಿ ಮಗನಿಂದ ತಾಯಿಯನ್ನು ಚಾಕುವಿನಿಂದ ಕೊಚ್ಚಿ ಬರ್ಬರ ಹತ್ಯೆ..!

Next Post

ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ

Related Posts

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು
ಕರಾವಳಿ

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು

May 9, 2026
69
ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್
ಕರಾವಳಿ

ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್

May 8, 2026
45
Next Post
ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ

ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ

Discussion about this post

Recent News

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು

May 9, 2026
69
ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸಾಧ್ಯತೆ

ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸಾಧ್ಯತೆ

May 8, 2026
51
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು

May 9, 2026
ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸಾಧ್ಯತೆ

ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸಾಧ್ಯತೆ

May 8, 2026
ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್

ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್

May 8, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d