• About us
  • Contact us
  • Disclaimer
Sunday, May 3, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ನೂತನ ಸಂಸತ್‌ ಭವನ ಲೋಕಾರ್ಪಣೆಗೊಳಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ

Coastal Times by Coastal Times
May 28, 2023
in ರಾಷ್ಟ್ರೀಯ ಸುದ್ದಿ
ನೂತನ ಸಂಸತ್‌ ಭವನ ಲೋಕಾರ್ಪಣೆಗೊಳಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ
51
VIEWS
WhatsappTelegramShare on FacebookShare on Twitter

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ತಲೆಯೆತ್ತಿ ನಿಂತಿರುವ ಪ್ರಜಾಪ್ರಭುತ್ವದ ನೂತನ ದೇಗುಲ ‘ಸಂಸತ್ ಭವನ’ವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಲೋಕಾರ್ಪಣೆಗೊಳಿಸಿದರು. ಇಂದು ಬೆಳಗ್ಗೆ 7.15 ಕ್ಕೆ ಸಾಂಪ್ರದಾಯಿಕ ಬಿಳಿ ಉಡುಗೆಯಲ್ಲಿ ಪ್ರಧಾನಿ ಮೋದಿ ಅವರು ಗೇಟ್ ನಂ.1 ರಿಂದ ಸಂಸತ್ ಆವರಣಕ್ಕೆ ಆಗಮಿಸಿದರು. ಅವರನ್ನು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಸ್ವಾಗತಿಸಿದರು. ಮಹಾತ್ಮ ಗಾಂಧಿ ಪ್ರತಿಮೆ ಪಕ್ಕದಲ್ಲಿ ಆಯೋಜಿಸಿದ್ದ ಪೂಜಾ ವಿಧಾನಗಳಲ್ಲಿ ಇಬ್ಬರೂ ಭಾಗಿಯಾದರು. ಕರ್ನಾಟಕದ ಶೃಂಗೇರಿ ಮಠದ ಪುರೋಹಿತರು ವೇದ ಘೋಷಗಳನ್ನು ಪಠಿಸಿದರು. ಹೊಸ ಸಂಸತ್ ಭವನದ ಉದ್ಘಾಟನಾ ಸಮಾರಂಭ ಸಾಂಘವಾಗಿ ನಡೆಯಲು “ಗಣಪತಿ ಹೋಮ” ನಡೆಸಲಾಯಿತು.

ಪೂಜಾ ವಿಧಾನಗಳು ಮುಗಿದ ಬಳಿಕ ಬಹುಚರ್ಚಿತ ರಾಜದಂಡವಾದ ‘ಸೆಂಗೋಲ್​’ ಅನ್ನು ತಮಿಳುನಾಡಿನ ವಿವಿಧ ಅಧೀನಂಗಳಿಂದ ಪ್ರಧಾನಿ ಮೋದಿ ಅವರಿಗೆ ಹಸ್ತಾಂತರ ಮಾಡಲಾಯಿತು. ಪೂಜ್ಯರ ಆಶೀರ್ವಾದ ಪಡೆದ ಪ್ರಧಾನಿಗಳು, ಅದರ ಮುಂದೆ ಸಾಷ್ಟಾಂಗ ನಮಸ್ಕಾರ ಮಾಡಿದರು. ಬಳಿಕ ಪವಿತ್ರ ರಾಜದಂಡದೊಂದಿಗೆ ಮೋದಿ ಅವರು ನಾದಸ್ವರ ಮತ್ತು ವೇದ ಮಂತ್ರಗಳ ಪಠಣಗಳ ನಡುವೆ ಮೆರವಣಿಗೆಯಲ್ಲಿ ಹೊಸ ಸಂಸತ್ ಭವನಕ್ಕೆ ಸೆಂಗೋಲ್ ಅನ್ನು ಕೊಂಡೊಯ್ದರು.

ಲೋಕಸಭೆಯ ಸಭಾಂಗಣದಲ್ಲಿ ಸ್ಪೀಕರ್ ಕುರ್ಚಿಯ ಬಲಭಾಗದಲ್ಲಿ ನಿಗದಿಪಡಿಸಲಾಗಿದ್ದ ವಿಶೇಷ ಆವರಣದಲ್ಲಿ ರಾಜದಂಡವನ್ನು ಸ್ಪೀಕರ್​ ಓಂ ಬಿರ್ಲಾ ಅವರ ಸಮೇತ ತೆರಳಿ ಅಲ್ಲಿ ಪ್ರತಿಷ್ಠಾಪಿಸಿದರು. ಅಲ್ಲಿ ಇಡಲಾಗಿದ್ದ ಜ್ಯೋತಿಯನ್ನ ಬೆಳಗಿಸುವ ಮೂಲಕ ನೂತನ ಸಂಸತ್​ ಭವನದ ಉದ್ಘಾಟನೆಗೆ ಅಧಿಕೃತ ಚಾಲನೆ ನೀಡಿದರು.

ಸೆಂಗೋಲ್​ ಸ್ಥಾಪನೆಯ ಬಳಿಕ ಅಲ್ಲಿಂದ ಹೊರಬಂದ ಪ್ರಧಾನಿ ಮೋದಿ ಅವರು, ನೂತನ ಸಂಸತ್ ಕಟ್ಟಡ ನಿರ್ಮಾಣ ಕಾರ್ಯದಲ್ಲಿ ತೊಡಗಿಕೊಂಡಿದ್ದ ಕೆಲ ಕಾರ್ಮಿಕರಿಗೆ ಗೌರವ ಸಲ್ಲಿಸಿದರು. ಶಾಲು ಮತ್ತು ಸ್ಮರಣಿಗೆ ನೀಡಿ ಅವರನ್ನು ಸನ್ಮಾನಿಸಿದರು. ಬಳಿಕ ನೂತನ ಸಂಸತ್ ಭವನದ ಉದ್ಘಾಟನೆಯನ್ನು ಗುರುತಿಸಲು ಫಲಕವೊಂದನ್ನು ಮೋದಿಯವರು ಅನಾವರಣಗೊಳಿಸಿದರು.

ಇದಾದ ಬಳಿಕ ಸಂಸತ್​ನ ಲಾಬಿಯಲ್ಲಿ ಏರ್ಪಡಿಸಲಾಗಿದ್ದ ಸರ್ವಧರ್ಮ ಸಮ್ಮಿಲನ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಭಾಗವಹಿಸಿದರು. ಹಿಂದೂ, ಮುಸ್ಲಿಂ, ಜೈನ, ಬೌದ್ಧ, ಕ್ರೈಸ್ತ ಧರ್ಮ ಸೇರಿದಂತೆ ಎಲ್ಲ ಧರ್ಮಗಳ ಮುಖಂಡರು ಪ್ರಾರ್ಥನೆ ಸಲ್ಲಿಸಿದರು. ನೂತನ ಸಂಸತ್​ ಕಟ್ಟಡವು ಐತಿಹಾಸಿಕ ರಾಜಕೀಯ ವಿದ್ಯಮಾನಗಳಿಗೆ ಸಾಕ್ಷಿಯಾಗಲಿ ಎಂದು ಹರಸಿದರು.

ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಶಾ, ಎಸ್ ಜೈಶಂಕರ್ ಮತ್ತು ಜಿತೇಂದ್ರ ಸಿಂಗ್, ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಸಿದ್ದು ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ? ಇಲ್ಲಿದೆ ಸಂಪೂರ್ಣ ಪಟ್ಟಿ

Next Post

ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಕಾನೂನು ಅರಿವು ಕಾರ್ಯಾಗಾರ

Related Posts

ಲ್ಯಾಂಡಿಂಗ್​ ವೇಳೆ ರನ್​ವೇನಲ್ಲಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ ; 100ಕ್ಕೂ ಹೆಚ್ಚು ಜನರಿಗೆ ಗಾಯ
ರಾಷ್ಟ್ರೀಯ ಸುದ್ದಿ

ಲ್ಯಾಂಡಿಂಗ್​ ವೇಳೆ ರನ್​ವೇನಲ್ಲಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ ; 100ಕ್ಕೂ ಹೆಚ್ಚು ಜನರಿಗೆ ಗಾಯ

March 24, 2026
46
LPG ಹೊತ್ತ 2 ಹಡಗುಗಳು ಹಾರ್ಮುಜ್ ಜಲಸಂಧಿ ದಾಟಿದ್ದು, ಇದೇ 16ರಂದು ಭಾರತ ತಲುಪಲಿವೆ ಕೇಂದ್ರ ಸರ್ಕಾರ
ರಾಷ್ಟ್ರೀಯ ಸುದ್ದಿ

LPG ಹೊತ್ತ 2 ಹಡಗುಗಳು ಹಾರ್ಮುಜ್ ಜಲಸಂಧಿ ದಾಟಿದ್ದು, ಇದೇ 16ರಂದು ಭಾರತ ತಲುಪಲಿವೆ ಕೇಂದ್ರ ಸರ್ಕಾರ

March 15, 2026
66
Next Post
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಕಾನೂನು ಅರಿವು ಕಾರ್ಯಾಗಾರ

ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಕಾನೂನು ಅರಿವು ಕಾರ್ಯಾಗಾರ

Discussion about this post

Recent News

ಮಹಿಳೆಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಸಾವಿನ ರಹಸ್ಯ

ಮಹಿಳೆಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಸಾವಿನ ರಹಸ್ಯ

May 1, 2026
1
ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

April 30, 2026
20
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಹಿಳೆಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಸಾವಿನ ರಹಸ್ಯ

ಮಹಿಳೆಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಸಾವಿನ ರಹಸ್ಯ

May 1, 2026
ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

April 30, 2026
ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

April 30, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d