• About us
  • Contact us
  • Disclaimer
Tuesday, July 14, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

Coastal Times by Coastal Times
May 28, 2026
in ರಾಜಕೀಯ, ರಾಜ್ಯ
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ
25
VIEWS
WhatsappTelegramShare on FacebookShare on Twitter

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕೆಲವು ದಿನಗಳಿಂದ ನಡೆಯುತ್ತಿದ್ದ ಸಿಎಂ ಕುರ್ಚಿ ಕದನಕ್ಕೆ ತೆರೆ ಬಿದ್ದಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದಾರೆ. ಇಂದು ಮಧ್ಯಾಹ್ನ ಲೋಕಭವನಕ್ಕೆ ಆಗಮಿಸಿದ ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭು ಶಂಕರ್ ಅವರಿಗೆ ಸಲ್ಲಿಸಿದರು. ಈ ಮೂಲಕ ಕಳೆದ ಮೂರು ವರ್ಷಗಳ ಅವರ ಆಡಳಿತ ಅಂತ್ಯಗೊಂಡಿತು.

ರಾಜ್ಯಪಾಲರು ಇಂದೋರ್ ಗೆ ತೆರಳಿರುವ ಕಾರಣ ಸಿದ್ದರಾಮಯ್ಯ ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಹಸ್ತಾಂತರಿಸಿದರು. ಸದ್ಯಕ್ಕೆ ರಾಜೀನಾಮೆ ಪತ್ರವನ್ನು ಕಾರ್ಯದರ್ಶಿಗಳು ಸ್ವೀಕರಿಸಿದ್ದರೂ, ಸಂವಿಧಾನದ ನಿಯಮಾವಳಿಗಳ ಪ್ರಕಾರ ರಾಜ್ಯಪಾಲರು ಖುದ್ದಾಗಿ ಸಹಿ ಮಾಡಿದ ಬಳಿಕವೇ ರಾಜೀನಾಮೆ ಅಧಿಕೃತವಾಗಿ ಅಂಗೀಕಾರವಾಗಲಿದೆ.

ಮೂಲಗಳ ಪ್ರಕಾರ ರಾಜ್ಯಪಾಲರು ಇಂದು ರಾತ್ರಿ 7:30ಕ್ಕೆ ಬೆಂಗಳೂರಿಗೆ ಮರಳುವ ಸಾಧ್ಯತೆಯಿದೆ. ಹೀಗಾಗಿ ರಾಜ್ಯಪಾಲರು ಮರಳಿದ ಬಳಿಕವಷ್ಟೇ ರಾಜೀನಾಮೆ ಅಂಗೀಕಾರದ ಔಪಚಾರಿಕ ಪ್ರಕ್ರಿಯೆಗಳು ಪೂರ್ಣಗೊಳ್ಳಲಿವೆ.

ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡುತ್ತಲೇ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾಗಿ ಹೇಳಿದರು. ಆದರೆ ರಾಜ್ಯಪಾಲರು ಬೆಂಗಳೂರಿನಲ್ಲಿ ಇಲ್ಲದ ಕಾರಣ, ರಾಜೀನಾಮೆ ಪತ್ರವನ್ನು ಅವರ ಕಚೇರಿಯ ಕಾರ್ಯದರ್ಶಿಗೆ ಹಸ್ತಾಂತರಿಸಲಾಗಿದೆ ಎಂದು ತಿಳಿಸಿದರು. ರಾಜೀನಾಮೆ ನೀಡಿದ ನಂತರ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ತಾವು ಯಾವಾಗಲೂ ಹೈಕಮಾಂಡ್ ತೀರ್ಮಾನಕ್ಕೆ ಬದ್ಧರಾಗಿದ್ದು, ನಾಯಕರು ಸೂಚಿಸಿದಂತೆ ಗುರುವಾರವೇ ರಾಜೀನಾಮೆ ಸಲ್ಲಿಸಿರುವುದಾಗಿ ಸ್ಪಷ್ಟಪಡಿಸಿದರು.

‘ಹೈಕಮಾಂಡ್ ಯಾವಾಗ ಸೂಚಿಸುತ್ತಾರೋ ಆಗ ರಾಜಿನಾಮೆ ನೀಡುತ್ತೇನೆ ಎಂದು ಹೇಳಿದ್ದೆ. ಅದರ ಪ್ರಕಾರ ಮೊನ್ನೆ ಹೈಕಮಾಂಡ್ ರಾಜಿನಾಮೆ ನೀಡಿ ಎಂದು ಹೇಳಿದರು. ಹೀಗಾಗಿ ನಾನು ನಾಡಿದ್ದು ರಾಜಿನಾಮೆ ನೀಡುತ್ತೇನೆ ಎಂದು ಹೇಳಿದ್ದೆ. ಇಂದು ನನ್ನ ರಾಜಿನಾಮೆ ನೀಡಿದ್ದೇನೆ. ರಾಜ್ಯಪಾಲರು ನನ್ನ ರಾಜಿನಾಮೆ ಪತ್ರವನ್ನು ಅವರು ಆಗಮಿಸಿದ ಬಳಿಕ ಅಂಗೀಕಾರ ಮಾಡುತ್ತಾರೆ ಎಂಬ ಸಂಪೂರ್ಣ ವಿಶ್ವಾಸವಿದೆ. ಅಲ್ಲದೆ ಸಂವಿಧಾನದ ಪ್ರಕಾರ ಮಾಡಲೇಬೇಕು ಕೂಡ. ಒಂದು ಸಾರಿ ಮುಖ್ಯಮಂತ್ರಿಗಳು ರಾಜಿನಾಮೆ ಕೊಟ್ಟ ಮೇಲೆ ಅಂಗೀಕಾರ ಮಾಡಿ, ಮುಂದಿನ ಮುಖ್ಯಮಂತ್ರಿಗಳಿಗೆ ಅವಕಾಶ ಮಾಡಿಕೊಡುವುದು ಅವರ ಕರ್ತವ್ಯ ಎಂದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಮಕ್ಕಳಿಗೆ ಪ್ರಕೃತಿ ಮತ್ತು ಎಲ್ಲಾ ಜೀವಿಗಳನ್ನು ಪ್ರೀತಿಸುವುದನ್ನು ಕಲಿಸಿ: ಮಾತಾ ಅಮೃತಾನಂದಮಯಿ ದೇವಿ

Next Post

2026ರ ಫಿಫಾ ವಿಶ್ವಕಪ್​ಗೆ 26 ಸದಸ್ಯರ ಅರ್ಜೆಂಟೀನಾ ತಂಡ ಪ್ರಕಟ ಲಿಯೋನೆಲ್​ ಮೆಸ್ಸಿಗೆ ನಾಯಕ ಪಟ್ಟ

Related Posts

ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್
ಆರೋಗ್ಯ

ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್

May 23, 2026
53
ವಚನಾನಂದ ಶ್ರೀಗಳಿಗೆ ಹೆಚ್ಚಿದ ಬಂಧನದ ಭೀತಿ: ನಿರೀಕ್ಷಣಾ ಜಾಮೀನು ರದ್ದು ಕೋರಿ ಕೋರ್ಟ್​ಗೆ ಪೊಲೀಸರ ಮನವಿ
ರಾಜ್ಯ

ವಚನಾನಂದ ಶ್ರೀಗಳಿಗೆ ಹೆಚ್ಚಿದ ಬಂಧನದ ಭೀತಿ: ನಿರೀಕ್ಷಣಾ ಜಾಮೀನು ರದ್ದು ಕೋರಿ ಕೋರ್ಟ್​ಗೆ ಪೊಲೀಸರ ಮನವಿ

May 22, 2026
28
Next Post
2026ರ ಫಿಫಾ ವಿಶ್ವಕಪ್​ಗೆ 26 ಸದಸ್ಯರ ಅರ್ಜೆಂಟೀನಾ ತಂಡ ಪ್ರಕಟ ಲಿಯೋನೆಲ್​ ಮೆಸ್ಸಿಗೆ ನಾಯಕ ಪಟ್ಟ

2026ರ ಫಿಫಾ ವಿಶ್ವಕಪ್​ಗೆ 26 ಸದಸ್ಯರ ಅರ್ಜೆಂಟೀನಾ ತಂಡ ಪ್ರಕಟ ಲಿಯೋನೆಲ್​ ಮೆಸ್ಸಿಗೆ ನಾಯಕ ಪಟ್ಟ

Discussion about this post

Recent News

ಬಂಟ್ವಾಳ ರೈಲ್ವೆ ನಿಲ್ದಾಣಕ್ಕೆ ಹೊಸ ರೂಪ! ಜುಲೈ 17 ಕ್ಕೆ ಪ್ರಧಾನಿ ಮೋದಿಯಿಂದ ಲೋಕಾರ್ಪಣೆ

ಬಂಟ್ವಾಳ ರೈಲ್ವೆ ನಿಲ್ದಾಣಕ್ಕೆ ಹೊಸ ರೂಪ! ಜುಲೈ 17 ಕ್ಕೆ ಪ್ರಧಾನಿ ಮೋದಿಯಿಂದ ಲೋಕಾರ್ಪಣೆ

July 13, 2026
23
“Mangalore IAS – A School for Civil Services” ಸಂಸ್ಥೆ ಉದ್ಘಾಟನೆ

“Mangalore IAS – A School for Civil Services” ಸಂಸ್ಥೆ ಉದ್ಘಾಟನೆ

July 12, 2026
41
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬಂಟ್ವಾಳ ರೈಲ್ವೆ ನಿಲ್ದಾಣಕ್ಕೆ ಹೊಸ ರೂಪ! ಜುಲೈ 17 ಕ್ಕೆ ಪ್ರಧಾನಿ ಮೋದಿಯಿಂದ ಲೋಕಾರ್ಪಣೆ

ಬಂಟ್ವಾಳ ರೈಲ್ವೆ ನಿಲ್ದಾಣಕ್ಕೆ ಹೊಸ ರೂಪ! ಜುಲೈ 17 ಕ್ಕೆ ಪ್ರಧಾನಿ ಮೋದಿಯಿಂದ ಲೋಕಾರ್ಪಣೆ

July 13, 2026
“Mangalore IAS – A School for Civil Services” ಸಂಸ್ಥೆ ಉದ್ಘಾಟನೆ

“Mangalore IAS – A School for Civil Services” ಸಂಸ್ಥೆ ಉದ್ಘಾಟನೆ

July 12, 2026
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ; ನಾಲ್ಕು ವರ್ಷಗಳಿಂದ ಅಡಗಿಕೊಂಡಿದ್ದ ಇಬ್ಬರು ಆರೋಪಿ ನೌಶಾದ್, ಅಬ್ದುಲ್ ನಾಸಿರ್ ಬಂಧನ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ; ನಾಲ್ಕು ವರ್ಷಗಳಿಂದ ಅಡಗಿಕೊಂಡಿದ್ದ ಇಬ್ಬರು ಆರೋಪಿ ನೌಶಾದ್, ಅಬ್ದುಲ್ ನಾಸಿರ್ ಬಂಧನ

July 12, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d