ಮಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಯಲ್ಲಿ ಬುಧವಾರ ಜೂನ್ 27 ಏಕಕಾಲಕ್ಕೆ 6 ಕಡೆಗಳಲ್ಲಿ ರಾಷ್ಟ್ರೀಯ ತನಿಖಾ ದಳ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದರು. ಇದೀಗ ಇದರ ಬೆನ್ನಲ್ಲೇ ಕೊಲೆ ಆರೋಪಿಗಳಿಗೆ ಡೆಡ್‌ಲೈನ್ ನೀಡಲಾಗಿದ್ದು, ಜೂನ್ 30ರೊಳಗೆ ಶರಣಾಗದಿದ್ದಲ್ಲಿ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಸುಳ್ಯ ನಗರದಲ್ಲಿ ಎನ್ಐಎ ಅಧಿಕಾರಿಗಳು ಧ್ವನಿವರ್ಧಕದ ಮೂಲಕ ಉದ್ಘೋಷಣೆ ಮಾಡಿದ್ದಾರೆ ಎನ್ನಲಾಗಿದೆ. ಆರೋಪಿಗಳ ಸುಳಿವು ಕೊಟ್ಟಲ್ಲಿ ನಗದು ಬಹುಮಾನವನ್ನು ನೀಡಲಾಗುವುದು ಎಂದು ಸಾರ್ವಜನಿಕರಲ್ಲಿ ವಿನಂತಿಸಲಾಗುತ್ತಿದೆ. ತಲೆಮರೆಸಿಕೊಂಡಿರುವ ಆರೋಪಿಗಳಾದ ಉಮರ್ ಫಾರೂಕ್ ಹಾಗೂ ಮುಸ್ತಫಾ ಅವರ ಶರಣಾಗತಿಗೆ ಉದ್ಘೋಷಣೆ ಮಾಡಲಾಗುತ್ತಿದ್ದು, ಸುಳ್ಯದ ಕಲ್ಲುಮುಟ್ಲುನಲ್ಲಿ ವಾಸವಿದ್ದ ಆರೋಪಿ ಉಮ್ಮರ್ ಫಾರೂಕ್ ಅವರ ಮನೆಗೂ ಹೋಗಿ ನ್ಯಾಯಾಲಯದ ಆದೇಶ ಪ್ರತಿಯನ್ನು ಅಂಟಿಸಿ ಬಂದಿದ್ದಾರೆ. ಬುಧವಾರವೂ ಬೆಳ್ಳಾರೆಯಲ್ಲಿ ಧ್ವನಿವರ್ಧಕದ ಮೂಲಕ ಎನ್ಐಎ ನ್ಯಾಯಾಲಯದ ಆದೇಶವನ್ನು ಉದ್ಘೋಷಣೆ ಮಾಡಿ ಆರೋಪಿ ಮುಸ್ತಫ ಮನೆಗೂ ಹೋಗಿ ಆದೇಶ ಪ್ರತಿಯನ್ನು ಅಂಟಿಸಿ ಬಂದಿದ್ದಾರೆಂದು ತಿಳಿದುಬಂದಿದೆ.
ಮಂಗಳವಾರ ಬೆಳ್ಳಾರೆಯಲ್ಲಿಯೂ ಧ್ವನಿವರ್ಧಕದ ಮೂಲಕ ಎನ್ಐಎ ನ್ಯಾಯಾಲಯದ ಆದೇಶವನ್ನು ಉದ್ಘೋಷಣೆ ಮಾಡಿ ಆರೋಪಿ ಮನೆಗೆ ಹೋಗಿ ಆದೇಶ ಪ್ರತಿ ಅಂಟಿಸಿದ್ದಾರೆ ಎಂದು ತಿಳಿದು ಬಂದಿದೆ.
Discover more from Coastal Times Kannada
Subscribe to get the latest posts sent to your email.








Discussion about this post