ಬೆಂಗಳೂರು: ರಾಜ್ಯದ ಜನತೆ ಎರಡು ಬಾರಿ ಕೋವಿಡ್ ಸಂಕಷ್ಟವನ್ನು ಮತ್ತು ಅತಿವೃಷ್ಟಿಯಿಂದ ಪ್ರವಾಹ, ನೆರೆ ಪರಿಸ್ಥಿತಿಯನ್ನು ಎದುರಿಸಿದ್ದಾರೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೆ ನ್ಯಾಯ, ಸರ್ಕಾರದ ಸೌಲಭ್ಯ ಸಿಗುವಂತೆ ಮತ್ತು ಪ್ರಾದೇಶಿಕ ಅಸಮತೋಲನವನ್ನು ಹೋಗಲಾಡಿಸಲು ಮುಖ್ಯಮಂತ್ರಿಯಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.
ಇಂದು ರಾಜಭವನದ ಗಾಜಿನ ಮನೆಯಲ್ಲಿ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಹೊರಗೆ ಬಂದು ಸುದ್ದಿಗಾರರ ಜೊತೆ ಮಾತನಾಡಿ, ನಾನು ಇಂದು ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿ ಅನೇಕ ರಾಜಕೀಯ, ಆರ್ಥಿಕ ಮತ್ತು ಸಾಮಾಜಿಕ ಸವಾಲುಗಳು ಸಾಕಷ್ಟಿವೆ. ಈ ಸಂದರ್ಭದಲ್ಲಿ ನಮ್ಮ ಪಕ್ಷದಲ್ಲಿರುವ ಎಲ್ಲಾ ನಾಯಕರನ್ನು ಒಗ್ಗೂಡಿಸಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅಧಿಕಾರ ನಡೆಸುತ್ತೇನೆ, ಜನಪರ ಆಡಳಿತ ನೀಡುವುದು ನಮ್ಮ ಗುರಿಯಾಗಿದೆ ಎಂದರು.
Discover more from Coastal Times Kannada
Subscribe to get the latest posts sent to your email.
Discussion about this post