ನೋಯ್ಡಾ: ಇಲ್ಲಿ ಅಕ್ರಮವಾಗಿ ನಿರ್ಮಿಸಿರುವ ಸೂಪರ್‌ಟೆಕ್‌ನ ಬಹು ಅಂತಸ್ತಿನ ಅವಳಿ ಕಟ್ಟಡಗಳನ್ನು ಸುಪ್ರೀಂ ಕೋರ್ಟ್‌ನ ಆದೇಶದಂತೆ ಇಂದು ಮಧ್ಯಾಹ್ನ ಸರಿಯಾಗಿ 2.30 ಕ್ಕೆ ನೆಲಸಮಗೊಳಿಸಲಾಯಿತು. ಅಕ್ರಮ ಕಟ್ಟಡದ ವಿರುದ್ಧ ಧ್ವನಿ ಎತ್ತಿದ್ದ ಸ್ಥಳೀಯ ನಾಗರಿಕರು ಕಟ್ಟಡ ನೆಲಸಮವಾಗುವುದನ್ನು ಕಂಡು ಸಂಭ್ರಮಿಸಿದರು. ಬೃಹತ್ ಅವಳಿ ಕಟ್ಟಡಗಳು ನೆಲಸಮಗೊಳ್ಳುತ್ತಿದ್ದಂತೆಯೇ ಸ್ಥಳದಲ್ಲಿ ಭಾರಿ ಶಬ್ಧದೊಂದಿಗೆ ದಟ್ಟ ಹೊಗೆ ಆವರಿಸಿತು. ದೆಹಲಿಯ ಇತಿಹಾಸ ಪ್ರಸಿದ್ಧ ಕುತುಬ್ ಮಿನಾರ್‌ಗಿಂತಲೂ ಎತ್ತರವಾದ ಈ ಕಟ್ಟಡಗಳನ್ನು ಕೇವಲ 9 ಸೆಕೆಂಡ್ ಅವಧಿಯಲ್ಲಿ ವಾಟರ್‌ಫಾಲ್ ಇಂಪ್ಲೋಷನ್ ತಂತ್ರಜ್ಞಾನದ ಮೂಲಕ ನೆಲಸಮ ಮಾಡಲಾಯಿತು.
#WATCH | Once taller than Qutub Minar, Noida Supertech twin towers, reduced to rubble #SupertechTwinTowersDemolition #TwinTowers #Noida #NoidaTowerDemolition pic.twitter.com/JvryYvD9gx
— The Times Of India (@timesofindia) August 28, 2022
100 ಮೀಟರ್ ಎತ್ತರದ ಅವಳಿ ಕಟ್ಟಡಗಳನ್ನು ಸುಪ್ರೀಂ ಕೋರ್ಟ್ ಆದೇಶದಂತೆ ನೆಲಸಮಗೊಳಿಸಲಾಯಿತು. ಎಮರಾಲ್ಡ್ ಕೋರ್ಟ್ ಸೊಸೈಟಿ ಆವರಣದಲ್ಲಿ ನಿಯಮ ಉಲ್ಲಂಘಿಸಿ ನಿರ್ಮಾಣ ಮಾಡಿರುವ ಕಟ್ಟಡಗಳನ್ನು ನೆಲಸಮಗೊಳಿಸಲು 3,700 ಕೆ.ಜಿ ಸ್ಫೋಟಕಗಳನ್ನು ಬಳಸಲಾಗಿತ್ತು. ಸೆಕ್ಟರ್ 93ಎನಲ್ಲಿರುವ ಎಮರಾಲ್ಡ್ ಕೋರ್ಟ್ ಮತ್ತು ಹತ್ತಿರದ ಎಟಿಎಸ್ ವಿಲೇಜ್ ಸೊಸೈಟಿಗಳ ಸುಮಾರು 5,000 ನಿವಾಸಿಗಳು ಭಾನುವಾರ ಬೆಳಿಗ್ಗೆ 7 ಗಂಟೆಯೊಳಗೆ ಆವರಣ ಖಾಲಿ ಮಾಡುವಂತೆ ಸೂಚಿಸಲಾಗಿತ್ತು. ಈ ಪೈಕಿ ಅನೇಕ ಮಂದಿ ಶನಿವಾರವೇ ಸ್ಥಳಾಂತರಗೊಂಡಿದ್ದಾರೆ. ಸುಮಾರು 3,000 ವಾಹನಗಳನ್ನು ತೆರವುಗೊಳಿಸಲಾಗುತ್ತಿದ್ದು, 200ರಷ್ಟು ಸಾಕುಪ್ರಾಣಿಗಳನ್ನು ಸ್ಥಳಾಂತರ ಮಾಡಲಾಗಿತ್ತು. ಭಾರತದಲ್ಲಿ ನೆಲಸಮವಾಗಲಿರುವ ಅತ್ಯಂತ ಎತ್ತರದ ಕಟ್ಟಡ ಇದಾಗಿರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post