• About us
  • Contact us
  • Disclaimer
Wednesday, October 14, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ಆರೋಪಿ ಬಂಧನಕ್ಕೆ ತೆರಳಿದ್ದ ಬೆಂಗಳೂರಿನ ಪೊಲೀಸ್​ ಇನ್ಸ್​ಪೆಕ್ಟರ್ ಸೇರಿ ನಾಲ್ವರು ಸಾವು

Coastal Times by Coastal Times
August 28, 2026
in ಕ್ರೈಮ್ ನ್ಯೂಸ್
ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ಆರೋಪಿ ಬಂಧನಕ್ಕೆ ತೆರಳಿದ್ದ ಬೆಂಗಳೂರಿನ ಪೊಲೀಸ್​ ಇನ್ಸ್​ಪೆಕ್ಟರ್ ಸೇರಿ ನಾಲ್ವರು ಸಾವು
80
VIEWS
WhatsappTelegramShare on FacebookShare on Twitter

ರಾಜ್‌ಗಢ: ಮಧ್ಯಪ್ರದೇಶದ ರಾಜ್‌ಗಢದಲ್ಲಿ ಶುಕ್ರವಾರ ಮುಂಜಾನೆ ಭೀಕರ ಅಪಘಾತ ಸಂಭವಿಸಿದ್ದು, ಆರೋಪಿಯ ಬಂಧನಕ್ಕೆ ತೆರಳಿದ್ದ ಬೆಂಗಳೂರಿನ ಸೈಬರ್​ ಕ್ರೈಂ ಪೊಲೀಸ್​ ಇನ್ಸ್​ಪೆಕ್ಟರ್​ ಸೇರಿದಂತೆ ​ನಾಲ್ವರು ಮೃತಪಟ್ಟಿದ್ದಾರೆ.

ಬೆಂಗಳೂರಿನ ಆಗ್ನೇಯ ಸೈಬರ್ ಕ್ರೈಂ ಠಾಣೆಯ ಇನ್ಸ್‌ಪೆಕ್ಟರ್ ರವಿ ಕೆ.ಬಿ. ಮೃತಪಟ್ಟವರು. ಅಲ್ಲದೇ, ಅವರ ಜೊತೆಗಿದ್ದ ಪೊಲೀಸ್​ ಸಿಬ್ಬಂದಿಯಾದ ವಿಶ್ವನಾಥ್ ಮತ್ತು ರಮೇಶ್ ಗಾಯಗೊಂಡಿದ್ದಾರೆ.

ವೇಗವಾಗಿ ಸಾಗುತ್ತಿದ್ದ ಬಸ್ ನಿಯಂತ್ರಣ ತಪ್ಪಿ ರಾಜ್‌ಗಢದ ಬಿಯೋರಾದ ಭೋಪಾಲ್ ಬೈಪಾಸ್ ಸೇತುವೆಯ ಗೋಡೆಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಮೇಲಿನ ಡೆಕ್​ನ ಸೀಟ್​ಗಳಲ್ಲಿ ಮಲಗಿದ್ದ ಪ್ರಯಾಣಿಕರು ಕಿಟಕಿಗಳಿಂದ ಹೊರಗೆ ಎಸೆಯಲ್ಪಟ್ಟು ಸೇತುವೆಯಿಂದ ಕೆಳಗೆ ಬಿದ್ದಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ಅಲ್ಲದೇ, ಘಟನೆಯಲ್ಲಿ 11 ಪ್ರಯಾಣಿಕರನ್ನು ಮಧ್ಯಪ್ರದೇಶದ ಬಿಯೋರಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ. ಪ್ರಯಾಣಿಕರನ್ನು ಸ್ಥಳೀಯರು ಮತ್ತು ಪೊಲೀಸರ ಸಹಾಯದಿಂದ ರಕ್ಷಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆರೋಪಿಯ ಬಂಧನಕ್ಕೆ ಹೊರಟಿದ್ದ ಇನ್ಸ್​ಪೆಕ್ಟರ್: ಘಟನೆ ಬಗ್ಗೆ ಮಾಹಿತಿ ನೀಡಿದ ರಾಜ್‌ಗಢ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಟೋಲಾನಿ, “ಪ್ರಾಥಮಿಕ ತನಿಖೆ ಪ್ರಕಾರ ಅತಿವೇಗವೇ ಘಟನೆಗೆ ಕಾರಣ ಎಂದು ತೋರುತ್ತದೆ. ಬಸ್ ಸೇತುವೆಯ ಗೋಡೆಗೆ ಡಿಕ್ಕಿ ಹೊಡೆದ ಸ್ಥಳದಲ್ಲಿ ತಿರುವು ಇದೆ. ಘಟನೆಯಲ್ಲಿ ಬೆಂಗಳೂರು ಸೈಬರ್ ಸೆಲ್‌ನಲ್ಲಿ ಸಬ್ – ಇನ್ಸ್‌ಪೆಕ್ಟರ್ ರವಿ ಕೆ.ಬಿ. ಅವರೂ ಸಹ ಪ್ರಾಣ ಕಳೆದುಕೊಂಡಿದ್ದಾರೆ. ಅವರು ಪ್ರಕರಣವೊಂದರ ಆರೋಪಿಯನ್ನು ಬಂಧಿಸಲು ಇಲ್ಲಿಗೆ ಬಂದಿದ್ದರು. ರವಿ ಅವರ ತಂಡದ ಸಿಬ್ಬಂದಿಯಾದ ವಿಶ್ವನಾಥ್ ಮತ್ತು ರಮೇಶ್ ಎಂಬವರೂ ಗಾಯಗೊಂಡಿದ್ದಾರೆ. ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ” ಎಂದು ತಿಳಿಸಿದ್ದಾರೆ.

ಘಟನೆಯ ನಂತರ ಸಚಿವ ನಾರಾಯಣ್ ಸಿಂಗ್ ಪನ್ವಾರ್ ಕೂಡ ಸ್ಥಳಕ್ಕೆ ಭೇಟಿ ನೀಡಿದರು. “ಸೇತುವೆಯ ತಿರುವಿಗೆ ಸಂಬಂಧಿಸಿದ ಸಮಸ್ಯೆ ಬಗ್ಗೆ ನಾವು ತನಿಖೆ ಮಾಡುತ್ತೇವೆ. ಸ್ಪೀಡ್ ಬ್ರೇಕರ್‌ಗಳ ಅಳವಡಿಕೆಯ ಬಗ್ಗೆ ಚರ್ಚಿಸುತ್ತೇವೆ. ಈ ಬಗ್ಗೆ ತನಿಖೆ ನಡೆಸಲಾಗುವುದು” ಎಂದು ಸಚಿವರು ಹೇಳಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಬಂಟ್ವಾಳ: ತೋಡಕುಕ್ಕಿನಾರ್ ದೇವಸ್ಥಾನ ಕಳವು ಪ್ರಕರಣ; ಖುಲಾಸೆಗೊಂಡಿದ್ದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ

Next Post

ಕ್ರಿಕೆಟ್ ಆಸ್ಟ್ರೇಲಿಯಾ ಅನಯಾ ಬಂಗಾರ್​ಗೆ ಆಡುವ ಅವಕಾಶ; ಮಹಿಳಾ ಆಟಗಾರ್ತಿಯರ ವಿರೋಧ

Related Posts

ಪೆಹಲ್ಗಾಮ್ ಹತ್ಯಾಕಾಂಡದ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್ ಮುಂಬೈ ಪೊಲೀಸ್ ಸೋಗಿನಲ್ಲಿ ಪುತ್ತೂರಿನ ವ್ಯಕ್ತಿಯೊಬ್ಬರಿಗೆ 1.3 ಕೋಟಿ ರೂ. ವಂಚನೆ!
ಕ್ರೈಮ್ ನ್ಯೂಸ್

ಪೆಹಲ್ಗಾಮ್ ಹತ್ಯಾಕಾಂಡದ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್ ಮುಂಬೈ ಪೊಲೀಸ್ ಸೋಗಿನಲ್ಲಿ ಪುತ್ತೂರಿನ ವ್ಯಕ್ತಿಯೊಬ್ಬರಿಗೆ 1.3 ಕೋಟಿ ರೂ. ವಂಚನೆ!

October 13, 2026
26
ಮಂಗಳೂರು ಪಂಜಿಮೊಗರು ಅನೈತಿಕ ಸಂಬಂಧ ಶಂಕೆ; ಪತ್ನಿಯ ಭೀಕರ ಕೊಲೆ, ಪತಿಯ ಬಂಧನ
ಕ್ರೈಮ್ ನ್ಯೂಸ್

ಮಂಗಳೂರು ಪಂಜಿಮೊಗರು ಅನೈತಿಕ ಸಂಬಂಧ ಶಂಕೆ; ಪತ್ನಿಯ ಭೀಕರ ಕೊಲೆ, ಪತಿಯ ಬಂಧನ

October 13, 2026
47
Next Post
ಕ್ರಿಕೆಟ್ ಆಸ್ಟ್ರೇಲಿಯಾ ಅನಯಾ ಬಂಗಾರ್​ಗೆ ಆಡುವ ಅವಕಾಶ; ಮಹಿಳಾ ಆಟಗಾರ್ತಿಯರ ವಿರೋಧ

ಕ್ರಿಕೆಟ್ ಆಸ್ಟ್ರೇಲಿಯಾ ಅನಯಾ ಬಂಗಾರ್​ಗೆ ಆಡುವ ಅವಕಾಶ; ಮಹಿಳಾ ಆಟಗಾರ್ತಿಯರ ವಿರೋಧ

Discussion about this post

Recent News

ಸುಳ್ಯ: ತಡರಾತ್ರಿ ಮೀನು ಹಿಡಿಯಲು ಹೋಗಿದ್ದ ವೇಳೆ ಹಂದಿಗೆ ಇಟ್ಟಿದ್ದ ವಿದ್ಯುತ್ ತಂತಿಯನ್ನು ತುಳಿದು ಇಬ್ಬರು ಯುವಕರು ಸಾವು

ಸುಳ್ಯ: ತಡರಾತ್ರಿ ಮೀನು ಹಿಡಿಯಲು ಹೋಗಿದ್ದ ವೇಳೆ ಹಂದಿಗೆ ಇಟ್ಟಿದ್ದ ವಿದ್ಯುತ್ ತಂತಿಯನ್ನು ತುಳಿದು ಇಬ್ಬರು ಯುವಕರು ಸಾವು

October 13, 2026
54
ಪೆಹಲ್ಗಾಮ್ ಹತ್ಯಾಕಾಂಡದ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್ ಮುಂಬೈ ಪೊಲೀಸ್ ಸೋಗಿನಲ್ಲಿ ಪುತ್ತೂರಿನ ವ್ಯಕ್ತಿಯೊಬ್ಬರಿಗೆ 1.3 ಕೋಟಿ ರೂ. ವಂಚನೆ!

ಪೆಹಲ್ಗಾಮ್ ಹತ್ಯಾಕಾಂಡದ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್ ಮುಂಬೈ ಪೊಲೀಸ್ ಸೋಗಿನಲ್ಲಿ ಪುತ್ತೂರಿನ ವ್ಯಕ್ತಿಯೊಬ್ಬರಿಗೆ 1.3 ಕೋಟಿ ರೂ. ವಂಚನೆ!

October 13, 2026
26
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸುಳ್ಯ: ತಡರಾತ್ರಿ ಮೀನು ಹಿಡಿಯಲು ಹೋಗಿದ್ದ ವೇಳೆ ಹಂದಿಗೆ ಇಟ್ಟಿದ್ದ ವಿದ್ಯುತ್ ತಂತಿಯನ್ನು ತುಳಿದು ಇಬ್ಬರು ಯುವಕರು ಸಾವು

ಸುಳ್ಯ: ತಡರಾತ್ರಿ ಮೀನು ಹಿಡಿಯಲು ಹೋಗಿದ್ದ ವೇಳೆ ಹಂದಿಗೆ ಇಟ್ಟಿದ್ದ ವಿದ್ಯುತ್ ತಂತಿಯನ್ನು ತುಳಿದು ಇಬ್ಬರು ಯುವಕರು ಸಾವು

October 13, 2026
ಪೆಹಲ್ಗಾಮ್ ಹತ್ಯಾಕಾಂಡದ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್ ಮುಂಬೈ ಪೊಲೀಸ್ ಸೋಗಿನಲ್ಲಿ ಪುತ್ತೂರಿನ ವ್ಯಕ್ತಿಯೊಬ್ಬರಿಗೆ 1.3 ಕೋಟಿ ರೂ. ವಂಚನೆ!

ಪೆಹಲ್ಗಾಮ್ ಹತ್ಯಾಕಾಂಡದ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್ ಮುಂಬೈ ಪೊಲೀಸ್ ಸೋಗಿನಲ್ಲಿ ಪುತ್ತೂರಿನ ವ್ಯಕ್ತಿಯೊಬ್ಬರಿಗೆ 1.3 ಕೋಟಿ ರೂ. ವಂಚನೆ!

October 13, 2026
ಮಂಗಳೂರು ಪಂಜಿಮೊಗರು ಅನೈತಿಕ ಸಂಬಂಧ ಶಂಕೆ; ಪತ್ನಿಯ ಭೀಕರ ಕೊಲೆ, ಪತಿಯ ಬಂಧನ

ಮಂಗಳೂರು ಪಂಜಿಮೊಗರು ಅನೈತಿಕ ಸಂಬಂಧ ಶಂಕೆ; ಪತ್ನಿಯ ಭೀಕರ ಕೊಲೆ, ಪತಿಯ ಬಂಧನ

October 13, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d