ಸುಳ್ಯ : ವಾಟ್ಸ್ಆ್ಯಪ್ ಗ್ರೂಪಲ್ಲಿ ಪರಿಚಯವಾದ ಯುವಕನೊಬ್ಬ ವಿದ್ಯಾರ್ಥಿನಿಯೊಬ್ಬಳನ್ನು ತನ್ನ ಸ್ನೇಹಿತನ ರೂಮಿಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿ, ಅವಳು ಗರ್ಭಿಣಿಯಾಗಿರುವ ಘಟನೆ ಸುಳ್ಯ ತಾಲೂಕಿನ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸುಳ್ಯದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಆಗಾಗ ಹೊಟ್ಟೆನೋವು ಆಗುತ್ತಿದೆ ಎಂದು ಮನೆಯವರಿಗೆ ಹೇಳಿದ್ದಳು. ಈ ಬಗ್ಗೆ ಇಂದು ವೈದ್ಯರಲ್ಲಿ ತಪಾಸಣೆ ನಡೆಸಿದಾಗ ವಿದ್ಯಾರ್ಥಿನಿ ಗರ್ಭಿಣಿ ಎಂಬುದು ತಿಳಿದುಬಂದಿದೆ. ಈ ಬಗ್ಗೆ ವಿದ್ಯಾರ್ಥಿನಿಯನ್ನು ವಿಚಾರಿಸಿದಾಗ ವಾಟ್ಸ್ಆ್ಯಪ್ ಗ್ರೂಪ್ ಒಂದರಲ್ಲಿ ಪರಿಚಯವಾದ ಇಲ್ಲಿನ ಉಬರಡ್ಕದ ತೀರ್ಥಪ್ರಸಾದ್ (25) ಎಂಬಾತ ನಾಲ್ಕು ತಿಂಗಳ ಹಿಂದೆ 30-06-2022ರಂದು ತನ್ನನ್ನು ಇಲ್ಲಿನ ಕಾಲೇಜೊಂದರ ಬಳಿ ಇರುವ ಆತನ ಸ್ನೇಹಿತನ ರೂಮಿಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ನಡೆಸಿದ ವಿಚಾರ ತಿಳಿಸಿದ್ದಾಳೆ. ಈ ಬಗ್ಗೆ ವಿದ್ಯಾರ್ಥಿನಿಯ ತಂದೆ ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದು,ಯುವಕನ ವಿರುದ್ಧ 376 ಐಪಿಸಿ ಮತ್ತು ಪೋಕ್ಸೋ ಪ್ರಕರಣ ದಾಖಲಾಗಿದೆ
Discover more from Coastal Times Kannada
Subscribe to get the latest posts sent to your email.








Discussion about this post