ನವದೆಹಲಿ: ತಕ್ಷಣದಿಂದಲೇ ಜಾರಿಗೆ ಬರುವಂತೆ ಕೇಂದ್ರ ಸರ್ಕಾರವು PFI (ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಮತ್ತು ಅದರ ಸಹವರ್ತಿಗಳು ಅಥವಾ ಅಂಗಸಂಸ್ಥೆಗಳಿಗೆ ಅಂಕುಶ ಹಾಕಿದೆ. ಈ ಸಂಘಟನೆಗಳು ಕಾನೂನುಬಾಹಿರ ಎಂದು ತಕ್ಷಣದಿಂದಲೇ ಜಾರಿಗೆ ಬರುವಂತೆ ಮುಂದಿನ ಐದು ವರ್ಷಗಳವರೆಗೆ ನಿಷೇಧಿಸಿ ಕೇಂದ್ರ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಹೌದು, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ಸಂಘಟನೆಗೆ ಕೇಂದ್ರ ಸರ್ಕಾರ ಅಂಕುಶ ಹಾಕಿದೆ. ಐದು ವರ್ಷಗಳ ಕಾಲ ಪಿಎಫ್‌ಐ ಬ್ಯಾನ್ ಮಾಡಿ ಕೇಂದ್ರ ಗೃಹ ಇಲಾಖೆ ಆದೇಶ ಹೊರಡಿಸಿದೆ. ಕೇಂದ್ರ ಸರ್ಕಾರವು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಮತ್ತು ಅದರ ಅಂಗಸಂಸ್ಥೆಗಳನ್ನು ಕಾನೂನುಬಾಹಿರ ಸಂಘಟನೆ ಎಂದು ಮುಂದಿನ ಐದು ವರ್ಷಗಳವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧ ಹೇರಿದೆ.
ಪಿಎಫ್‌ಐ ಮತ್ತು ಅದರ ಅಂಗ ಸಂಸ್ಥೆಗಳಾದ ರಿಹಾಬ್ ಇಂಡಿಯಾ ಫೌಂಡೇಶನ್ (ಆರ್‌ಐಎಫ್), ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿಎಫ್ಐ), ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ (ಎಐಐಸಿ), ಎನ್‌ಸಿಎಚ್‌ಆರ್‌ಒ, ನ್ಯಾಷನಲ್ ವುಮೆನ್ಸ್ ಫ್ರಂಟ್ (ಎನ್‌ಡಬ್ಲ್ಯೂಎಫ್), ಜೂನಿಯರ್ ಫ್ರಂಟ್, ಎಂಪವರ್ ಇಂಡಿಯಾ ಫೌಂಡೇಶನ್ ಸಂಘಟನೆಗಳನ್ನು ನಿಷೇಧಿಸಲಾಗಿದೆ. ಸಾರ್ವಜನಿಕರ ಶಾಂತಿಗೆ ಭಂಗ, ಕಾನೂನು ಬಾಹಿರ ಚಟುವಟಿಕೆಗೆ ಸಂಚು ರೂಪಿಸಿದ್ದ ಆರೋಪದ ಮೇಲೆ ಇತ್ತೀಚೆಗಷ್ಟೇ ಪಿಎಫ್‌ಐ ಕಚೇರಿಗಳು ಹಾಗೂ ಮುಖಂಡರ ಮನೆಗಳ ಮೇಲೆ ರಾಷ್ಟ್ರೀಯ ತನಿಖಾ ದಳ (ಐಎನ್‌ಎ) ದಾಳಿ ನಡೆಸಿತ್ತು.
Discover more from Coastal Times Kannada
Subscribe to get the latest posts sent to your email.
Discussion about this post